PBKS vs RR: ಜೋಫ್ರಾ ಆರ್ಚರ್ ವೇಗಕ್ಕೆ ಮಕಾಡೆ ಮಲಗಿದ ಪಂಜಾಬ್ ಕಿಂಗ್ಸ್

ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 50 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಬೀಗಿದ್ದ ಪಂಜಾಬ್ ಕಿಂಗ್ಸ್ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಅಬ್ಬರದ ಎದುರು ಶರಣಾಗಿದೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 205 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಮೊದಲ ಮೂರು ಪಂದ್ಯಗಳಲ್ಲಿ ವಿಫಲವಾಗಿದ್ದ ಯಶಸ್ವಿ ಜೈಸ್ವಾಲ್‌ ಫಾರ್ಮ್‌ಗೆ ಮರಳಿದರು.

Rajasthan royals win against punjab kings by 50 runs ipl 2025

ಯಶಸ್ವಿ ಜೈಸ್ವಾಲ್ 45 ಎಸೆತಗಳಲ್ಲಿ 3 ಬೌಂಡರಿ 5 ಸಿಕ್ಸರ್ ಸಹಿತ 67 ರನ್ ಗಳಿಸಿದರು. ಮೂರು ಪಂದ್ಯಗಳಲ್ಲಿ ನಾಯಕತ್ವದಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್‌ ಈ ಪಂದ್ಯದಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡರು. 26 ಎಸೆತಗಳಲ್ಲಿ 38 ರನ್ ಗಳಿಸಿ ಜೈಸ್ವಾಲ್‌ಗೆ ಜೊತೆಯಾದರು. ರಿಯಾನ್ ಪರಾಗ್ ಕೂಡ 25 ಎಸೆತಗಳಲ್ಲಿ 3 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 43 ರನ್ ಗಳಿಸಿದರು. ನಿತೀಶ್ ರಾಣಾ 12 ರನ್ ಗಳಿಸಿದರೆ, ಶಿಮ್ರಾನ್ ಹೆಟ್ಮೆಯರ್ 20 ರನ್ ಗಳಿಸಿದರು. ಧ್ರುವ್ ಜುರೆಲ್ ಅಜೇಯ 13 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 200 ಗಡಿ ದಾಟಲು ಸಹಕಾರಿಯಾದರು.

ಜೋಫ್ರಾ ಆರ್ಚರ್ ಅಬ್ಬರದ ಆರಂಭ

ಮೊದಲ ಎರಡು ಪಂದ್ಯಗಳಲ್ಲಿ ವಿಕೆಟ್ ಪಡೆಯದೆ ದುಬಾರಿ ಬೌಲರ್ ಆಗಿದ್ದ ಜೋಫ್ರಾ ಆರ್ಚರ್ ಕಳೆದ ಎರಡು ಪಂದ್ಯಗಳಲ್ಲಿ ಲಯ ಕಂಡುಕೊಂಡರು. ಪಂಜಾಬ್ ಕಿಂಗ್ಸ್ ವಿರುದ್ಧ ಕೂಡ ಮೊದಲನೇ ಓವರ್ ನಲ್ಲೇ ಪ್ರಿಯಾಂಶ್ ಆರ್ಯ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಬೌಲ್ಡ್ ಮಾಡುವ ಮೂಲಕ ರಾಜಸ್ಥಾನ ರಾಯಲ್ಸ್ ಗೆಲುವನ್ನು ಸುಲಭವಾಗಿಸಿದರು.

ಒಂದು ಹಂತದಲ್ಲಿ ನೇಹಲ್ ವಧೇರಾ (62 ರನ್) ಮತ್ತು ಮ್ಯಾಕ್ಸ್‌ವೆಲ್ (30 ರನ್) ಒಂದು ಹಂತದಲ್ಲಿ ಪಂಜಾಬ್‌ ಕಿಂಗ್ಸ್‌ಗೆ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ಇವರಿಬ್ಬರೂ ಔಟಾದ ಬಳಿಕ ತಂಡದ ಗೆಲುವಿನ ಕನಸು ಕಮರಿಹೋಯಿತು. 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಮಾತ್ರ ಗಳಿಸುವ ಮೂಲಕ 50 ರನ್‌ಗಳಿಂದ ಸೋಲು ಕಂಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+