ರಣಜಿ ಟೂರ್ನಿಯಲ್ಲಿ ಜಮ್ಮು-ಕಾಶ್ಮೀರ ವಿರುದ್ಧ ಸೋತರೂ ಗೆದ್ದ ಕನ್ನಡಿಗ: ಮೋಡಿಯಂತೂ ಅಲ್ಲ, ಇಲ್ಲಿದೆ ಮಾಹಿತಿ
Ranji Trophy 2026: ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಫೈನಲ್ ಪಂದ್ಯದಲ್ಲಿ ಕರ್ನಾಟಕದ ವಿರುದ್ಧ ಗೆಲುವು ಸಾಧಿಸಿ ಜಮ್ಮು ಮತ್ತು ಕಾಶ್ಮೀರ ತಂಡವು ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ವಿಶೇಷ ಅಂದ್ರೆ ಪ್ರಶಸ್ತಿ ಗೆಲ್ಲದಿದ್ದರೂ ಸಹ ಟೂರ್ನಿಯಲ್ಲಿ ವೈಯಕ್ತಿಕವಾಗಿ ಅತಿ ಹೆಚ್ಚು ರನ್ ಸಿಡಿಸಿದ ದಾಖಲೆ ಕರ್ನಾಟಕದ್ದಾಗಿದೆ. ಹಾಗಾದ್ರೆ, ಅವರು ಯಾರು? ಎಷ್ಟು ರನ್ ಬಾರಿಸಿದರು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಮಹತ್ವದ ಹಣಾಹಣಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಕರ್ನಾಟಕ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದವು. ಆದರೆ, ಮೊದಲ ಬಾರಿ ಫೈನಲ್ ಹಂತ ತಲುಪಿದ್ದ ಜಮ್ಮು-ಕಾಶ್ಮೀರ ತಂಡವು 67 ವರ್ಷಗಳ ದೀರ್ಘ ಪಯಣದ ಬಳಿಕ ಚೊಚ್ಚಲ ರಣಜಿ ಟ್ರೋಫಿ ಗೆದ್ದು ಐತಿಸಹಾಸಿದ ದಾಖಲೆ ಮಾಡಿತು.

ಕರ್ನಾಟಕದಂತಹ ಬಲಿಷ್ಠ ತಂಡದ ವಿರುದ್ಧ ಆತ್ಮವಿಶ್ವಾಸದಿಂದ ಆಡಿದ ಜಮ್ಮು ಮತ್ತು ಕಾಶ್ಮೀರ ಆಟಗಾರರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಈ ಗೆಲುವು ಕೇವಲ ಟ್ರೋಫಿ ಜಯವಷ್ಟೇ ಅಲ್ಲ, ತಂಡದ ಹೋರಾಟ ಮನೋಭಾವ ಮತ್ತು ದೃಢಸಂಕಲ್ಪದ ಪ್ರತೀಕವಾಗಿದೆ. ಈ ಐತಿಹಾಸಿಕ ವಿಜಯ ಜಮ್ಮು ಮತ್ತು ಕಾಶ್ಮೀರದ ಕ್ರೀಡಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಲಿಖಿತವಾಗುವಂತಹದ್ದಾಗಿದೆ. ಮತ್ತೊಂದೆಡೆ, ಟ್ರೋಫಿ ಗೆಲ್ಲದಿದ್ದರೂ ಸಹ ವೈಯಕ್ತಿಕವಾಗಿ ಅತೀ ಹೆಚ್ಚು ರನ್ ಸಿಡಿಸಿದ ಹೆಗ್ಗಳಿಕೆ ಕರ್ನಾಟಕದ ಆಟಗಾರರದ್ದಾಗಿದೆ.
ಅತಿ ಹೆಚ್ಚು ರನ್ ಸಿಡಿಸಿದ ಕರ್ನಾಟಕದ ಆಟಗಾರ
* ಹುಬ್ಬಳ್ಳಿಯಲ್ಲಿ ನಡೆದ ಈ ಬಾರಿ ರಣಜಿ ಟೂರ್ನಿಯಲ್ಲಿ ಕರ್ನಾಟಕದ ರವಿಚಂದ್ರನ್ ಸ್ಮರಣ್ ಅವರು ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದು, ಅವರು 9 ಪಂದ್ಯಗಳ 14 ಇನ್ನಿಂಗ್ಸ್‌ಗಳಲ್ಲಿ 86.36 ಸರಾಸರಿಯಲ್ಲಿ 4 ಶತಕಗಳ ಸಹಿತ 950 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೂರ್ನಿಯಲ್ಲೇ ವೈಯಕ್ತಿಕವಾಗಿ ಅತೀ ಹೆಚ್ಚು ರನ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
* ದೆಹಲಿಯ ಎಡಗೈ ಬ್ಯಾಟರ್ ಆಯುಷ್ ದೋಸೆಜಾ, 12 ಇನ್ನಿಂಗ್ಸ್‌ಗಳಲ್ಲಿ 949 ರನ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಅಲಂಕರಿಸಿದರೆ, ಇದೇ ತಂಡದ ಆರಂಭಿಕ ಆಟಗಾರ ಸನತ್ ಸಾಗ್ವಾನ್ 14 ಇನ್ನಿಂಗ್ಸ್‌ಗಳಲ್ಲಿ 828 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
* ಕರ್ನಾಟಕದ ಕರುಣ್ ನಾಯರ್ 699, ಮಯಾಂಕ್ ಅಗರ್ವಾಲ್ 678 ರನ್ ಗಳಿಸಿದ್ದಾರೆ. ಈ ಮೂಲಕ ಇವರು ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.
ಯಾರು ಅತಿ ಹೆಚ್ಚು ವಿಕೆಟ್ ಕಬಳಿಸಿದರು?
ಹುಬ್ಬಳ್ಳಿಯಲ್ಲಿ ನಡೆದ ರಣಜಿ ಟೂರ್ನಿಯಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಮಧ್ಯಮ ವೇಗಿ ಅಕೀಬ್ ನಬಿ ದಾರ್ ಅವರು 10 ಪಂದ್ಯಗಳಲ್ಲಿ 60 ವಿಕೆಟ್ ಪಡೆದು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ಉತ್ತರಾಖಂಡದ ಸ್ಪಿನ್ನರ್ ಮಯಂಕ್ ಮಿಶ್ರಾ ಅವರು 8 ಪಂದ್ಯಗಳಲ್ಲಿ 59 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಅಲಂಕರಿಸಿದರೆ, ಕರ್ನಾಟಕ ತಂಡದ ಶ್ರೇಯಸ್ ಗೋಪಾಲ್ ಅವರು 10 ಪಂದ್ಯಗಳಲ್ಲಿ 48 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
Congratulating Team J&K on their historic triumph in the Ranji Trophy, the Chief Minister announced a cash reward of ₹2 crore for the players and support staff after their emphatic victory over Karnataka on their home turf.
— Office of Chief Minister, J&K (@CM_JnK) February 28, 2026
Calling it a watershed moment for Jammu & Kashmir… pic.twitter.com/OnRJCa1EoB
2 ಕೋಟಿ ರೂಪಾಯಿ ಬಹುಮಾನ ಘೋಷಣೆ
ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಡ್ರಾ ಮಾಡಿಕೊಳ್ಳುವ ಮೂಲಕ ಜಮ್ಮು ಮತ್ತು ಕಾಶ್ಮೀರ ತಂಡವು 67 ವರ್ಷಗಳ ರಣಜಿ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ಐತಿಹಾಸಿಕ ದಾಖಲೆ ನಿರ್ಮಿಸಿದೆ. ಇನ್ನೂ ಈ ಐತಿಹಾಸಿಕ ಸಾಧನೆಯನ್ನು ಗುರುತಿಸಿ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ತಂಡಕ್ಕೆ 2 ಕೋಟಿ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರೇ ಸ್ವತಃ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications