Ranji Trophy: ಮುಂಬೈ ತಂಡಕ್ಕೆ ಶಾಕ್ ಕೊಟ್ಟ ಸ್ಟಾರ್ ಆಟಗಾರರು
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಸ್ಕರ್ ಟ್ರೋಫಿ ಸರಣಿಯಲ್ಲಿ ಸೋತ ಬಳಿಕ ಬಿಸಿಸಿಯ ಭಾರತ ತಂಡದ ಆಟಗಾರರಿಗೆ ಕ್ಲಾಸ್ ತೆಗೆದುಕೊಂಡಿದ್ದು ದೇಶೀಯ ಪಂದ್ಯಾವಳಿಯಲ್ಲಿ ಆಡುವಂತೆ ತಾಕೀತು ಮಾಡಿದೆ. ಅದರಂತೆ ಮುಂಬೈ ತಂಡದ ಪರವಾಗಿ ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಟಗಾರರು ಅಲ್ಲಿಯೂ ರನ್ ಗಳಿಸಲು ಪರದಾಡಿದ್ದರು.
ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಆಡಿದ್ದ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಮುಂದಿನ ಪಂದ್ಯದಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿರುದ್ಧ 10 ವರ್ಷಗಳ ಬಳಿಕ ಮುಂಬೈ ಸೋಲು ಕಂಡಿತ್ತು. ರೋಹಿತ್ ಶರ್ಮಾ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ ಮೂರು ರನ್ ಗಳಿಸಿದ್ದರೆ ಎರಡನೇ ಇನ್ನಿಂಗ್ಸ್ ನಲ್ಲಿ 29 ರನ್ ಮಾತ್ರ ಗಳಿಸಿದ್ದರು.
ಜನವರಿ 30 ರಿಂದ ಆರಂಭವಾಗಲಿರುವ ಮೇಘಾಲಯ ವಿರುದ್ಧದ ಕೊನೆಯ ಲೀಗ್ ಪಂದ್ಯಕ್ಕೆ ಪ್ರಮುಖ ಮೂವರು ಆಟಗಾರರು ಅಲಭ್ಯರಾಗಿದ್ದಾರೆ.
ಏಕದಿನ ಸರಣಿಗೆ ಸಿದ್ಧತೆ
ಭಾರತ ತಂಡ ಸದ್ಯ ಇಂಗ್ಲೆಂಡ್ ವಿರುದ್ದ ಐದು ಪಂದ್ಯಗಳ ಟಿ20 ಸರಣಿ ಆಡುತ್ತಿದೆ. ಅದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಫೆಬ್ರವರಿ 6 ರಂದು ಸರಣಿಯ ಮೊದಲ ಪಂದ್ಯ ನಡೆಯಲಿದ್ದು ಇದಕ್ಕೆ ತಯಾರಿ ಮಾಡಿಕೊಳ್ಳುವ ಸಲುವಾಗಿ ರಣಜಿ ಟ್ರೋಫಿ ಪಂದ್ಯದಲ್ಲಿ ಆಡದೇ ಇರಲು ನಿರ್ಧರಿಸಿದ್ದಾರೆ.
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಇರುವುದರಿಂದ, ಇಂಗ್ಲೆಡ್ ವಿರುದ್ದದ ಏಕದಿನ ಸರಣಿಯಲ್ಲಿ ಫಾರ್ಮ್ ಗೆ ಮರಳಲು ಮೂವರು ಬ್ಯಾಟರ್ ಗಳು ಸಜ್ಜಾಗಿದ್ದಾರೆ.
ನಾಯಕ ರೋಹಿತ್ ಶರ್ಮಾ ರಣಜಿ ಟ್ರೋಫಿ ಪಂದ್ಯದಲ್ಲೂ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವುದು ಅಭಿಮಾನಿಗಳು ಮಾತ್ರವಲ್ಲದೆ ಬಿಸಿಸಿಐ ಚಿಂತೆಯನ್ನು ಕೂಡ ಹೆಚ್ಚಿಸಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರನ್ ಗಳಿಸಿದರೆ ಮಾತ್ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗಿ ಅವರು ತಮ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಬಹುದು.
ಮುಂಬೈ ಸ್ಟಾರ್ ಆಟಗರರು ಇಲ್ಲದೇ ಇದ್ದರು ಮೇಘಾಲಯದ ವಿರುದ್ಧ ಗೆಲುವು ಸಾಧಿಸುವ ವಿಶ್ಬಾಸದಲ್ಲಿದೆ. ಅಜಿಂಕ್ಯ ರಹಾನೆ ತಂಡದ ನಾಯಕತ್ವ ವಹಿಸಿಕೊಂಡಿದ್ದು, ಜಮ್ಮು ಮತ್ತು ಕಾಶ್ಮೀರದ ವಿರುದ್ಧದ ಸೋಲಿನ ಬಳಿಕ ಹೇಗೆ ವಾಪಸಾತಿ ಮಾಡುತ್ತದೆ ಎಂದು ನೋಡಬೇಕಿದೆ.












Click it and Unblock the Notifications