Ranji Trophy: ವಿದ್ವತ್, ವೈಶಾಖ್ ಮಿಂಚಿನ ಬೌಲಿಂಗ್: ತ್ರಿಪುರಾ ವಿರುದ್ಧ ಗೆದ್ದ ಕರ್ನಾಟಕ
ಅಗರ್ತಲಾದ ಮಹಾರಾಜ ವೀರ್ ವಿಕ್ರಮ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆದ ತ್ರಿಪುರಾ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿದೆ. ವಿಧ್ವತ್ ಕಾವೇರಪ್ಪ, ವಿಜಯ್‌ಕುಮಾರ್ ವೈಶಾಖ್ ಅವರ ಮಿಂಚಿನ ಬೌಲಿಂಗ್ ದಾಳಿಗೆ ತ್ರಿಪುರಾ163 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕರ್ನಾಟಕ 29 ರನ್‌ಗಳ ಗೆಲುವು ಸಾಧಿಸಿದೆ.
ಮೂರನೇ ದಿನದಾಟದ ಅಂತ್ಯಕ್ಕೆ ಮೂರು ವಿಕೆಟ್ ಕಳೆದುಕೊಂಡು 59 ರನ್ ಗಳಿಸಿದ್ದ ತ್ರಿಪುರಾ ನಾಲ್ಕನೇ ದಿನ 104 ರನ್ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡಿತು. ತ್ರಿಪುರಾ ಬ್ಯಾಟರ್ ಸುದೀಪ್ ಚಟರ್ಜಿ 82 ರನ್ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು ಸೋಲನ್ನು ತಪ್ಪಿಸಲು ಆಗಲಿಲ್ಲ. ರವಿಕುಮಾರ್ ಸಮರ್ಥ್ ಮಿಂಚಿನ ಫೀಲ್ಡಿಂಗ್ ಮೂಲಕ ಸುದೀಪ್ ಚಟರ್ಜಿ ಅವರನ್ನು ರನೌಟ್ ಮಾಡಿದರು.

ಶ್ರೀದಾಮ್ ಪೌಲ್ 21 ರನ್, ಗಣೇಶ್ ಸತೀಶ್ 22 ರನ್, ಸುದೀಪ್ ಚಟರ್ಜಿ 82 ರನ್ ಗಳಿಸಿದ್ದು ಹೊರತುಪಡಿಸಿ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ರನ್ ಗಳಿಸಲಿಲ್ಲ. ವಿಧ್ವತ್ ಕಾವೇರಪ್ಪ 4 ವಿಕೆಟ್ ಪಡೆದರೆ, ವೈಶಾಖ್ ವಿಜಯ್‌ಕುಮಾರ್ 3 ವಿಕೆಟ್ ಪಡೆದರು. ವಿ ಕೌಶಿಕ್ ಒಂದು ವಿಕೆಟ್ ಪಡೆದರು.
ವೈಶಾಖ್ ಅತ್ಯುತ್ತಮ ಆಟ
ವಿಜಯ್‌ಕುಮಾರ್ ವೈಶಾಖ್ ಕರ್ನಾಟಕದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಕರ್ನಾಟಕ ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ 50 ರನ್ ಗಳಿಸಿದ ಅವರು, ತ್ರಿಪುರಾ ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಕೂಡ ಪಡೆದುಕೊಂಡಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಅವರು 22 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದ್ದರು. ಬಳಿಕ ಬೌಲಿಂಗ್‌ನಲ್ಲಿ ಕೂಡ ಉತ್ತಮ ಪ್ರದರ್ಶನ ನೀಡಿ ಮೂರು ವಿಕೆಟ್ ಪಡೆದುಕೊಂಡರು. ಅವರ ಆಲ್‌ರೌಂಡ್ ಆಟಕ್ಕಾಗಿ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದುಕೊಂಡರು.
ಈ ಗೆಲುವಿನ ಮೂಲಕ ಕರ್ನಾಟಕ ರಣಜಿ ಟ್ರೋಫಿ ಪಂದ್ಯಾವಳಿಯ ಸಿ ಗುಂಪಿನಲ್ಲಿ ಮೊದಲ ಸ್ಥಾನಕ್ಕೇರಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ 2 ಪಂದ್ಯ ಗೆದ್ದು ಒಂದು ಡ್ರಾ ಮಾಡಿಕೊಂಡಿದ್ದು, ಒಂದು ಪಂದ್ಯದಲ್ಲಿ ಮಾತ್ರ ಸೋಲನುಭವಿಸಿದೆ. 15 ಅಂಕಗಳು, +1.236 ರನ್‌ರೇಟ್ ಹೊಂದಿದ್ದು ಮೊದಲ ಸ್ಥಾನದಲ್ಲಿದೆ.
ಕರ್ನಾಟಕ ಮುಂದಿನ ಪಂದ್ಯದಲ್ಲಿ ರೈಲ್ವೇಸ್ ತಂಡವನ್ನು ಎದುರಿಸಲಿದೆ. ಸೂರತ್‌ನ ಲಾಲಾಭಾಯಿ ಕಾಂಟ್ರಾಕ್ಟರ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಫೆಬ್ರವರಿ 2ರಂದು ಪಂದ್ಯ ಆರಂಭವಾಗಲಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications