Get Updates
Get notified of breaking news, exclusive insights, and must-see stories!

Ravindra Jadeja: ಬಿಜೆಪಿಗೆ ಸೇರ್ಪಡೆಯಾದ ರವೀಂದ್ರ ಜಡೇಜಾ

ಭಾರತ ತಂಡದ ಕ್ರಿಕೆಟಿಗ ರವೀಂದ್ರ ಜಡೇಜಾ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿಕೊಂಡಿದ್ದಾರೆ. ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಗುರುವಾರ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಜಡೇಜಾ ಪತ್ನಿ ರಿವಾಬಾ ಬಿಜೆಪಿ ಶಾಸಕಿಯಾಗಿದ್ದು, ರವೀಂದ್ರ ಜಡೇಜಾ ಈಗ ಬಿಜೆಪಿಗೆ ಸೇರಿರುವುದು ಕೇವಲ ಔಪಚಾರಿಕ ಅಷ್ಟೇ. ರಿವಾಬಾ ಜಡೇಜಾ ತಮ್ಮ ಪತಿಯ ಬಿಜೆಪಿ ಸದಸ್ಯತ್ವದ ಕಾರ್ಡ್‌ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಯುಎಸ್‌ಎ- ವೆಸ್ಟ್ಇಂಡೀಸ್‌ನಲ್ಲಿ ನಡೆದ ಟಿ20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಆದ ಬಳಿಕ ರವೀಂದ್ರ ಜಡೇಜಾ ಜೂನ್ 29ರಂದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬಳಿಕ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿತ್ತು, ಮುಂಬರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಭಾರತ ತಂಡಕ್ಕೆ ಮರಳಲಿದ್ದಾರೆ.

ravindra jadeja joins BJP as wife shares Membership details

ರವೀಂದ್ರ ಜಡೇಜಾ ಅವರ ಸಹೋದರಿ, ತಂದೆ ಕಾಂಗ್ರೆಸ್ ಪಕ್ಷದ ಬೆಂಬಲಿಗರಾಗಿದ್ದಾರೆ. ಆದರೆ ರವೀಂದ್ರ ಜಡೇಜಾ ಮತ್ತು ರಿವಾಬ ಜಡೇಜಾ ಮಾತ್ರ ಬಿಜೆಪಿ ಪಕ್ಷದ ಬೆಂಬಲಿಗರಾಗಿದ್ದರು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದಿದ್ದ ರಿವಾಬ ಜಡೇಜಾ ಸುಲಭ ಗೆಲುವು ಸಾಧಿಸಿದ್ದರು.

ಸದಸ್ಯತ್ವ ಅಭಿಯಾನ ಆರಂಭಿಸಿದ ಬಿಜೆಪಿ

ಸೆಪ್ಟೆಂಬರ್ 2 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಮ್ಮ ಸದಸ್ಯತ್ವವನ್ನು ನವೀಕರಿಸುವ ಮೂಲಕ ಭಾರತೀಯ ಜನತಾ ಪಕ್ಷದ 2024 ರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಸಂಘಟನೆ ಪರ್ವ, ಸದಸ್ಯತ್ವ ಅಭಿಯಾನ 2024 ಶೀರ್ಷಿಕೆಯಡಿ ಈ ಬಾರಿ ಕಾರ್ಯಕರ್ತರ ಸಂಖ್ಯೆ ಹೆಚ್ಚಿಸಿಕೊಳ್ಳಲು ಬಿಜೆಪಿ ಮುಂದಾಗಿದೆ.

ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಪಕ್ಷದ ಕಾರ್ಯಕರ್ತರು ಯುವಕರೊಂದಿಗೆ ಸಂಪರ್ಕ ಸಾಧಿಸಲು ವಿಶೇಷ ಪ್ರಯತ್ನಗಳನ್ನು ಮಾಡುವಂತೆ ನಾಯಕರಿಗೆ ಒತ್ತಾಯಿಸಿದ್ದಾರೆ. ಬಿಜೆಪಿ ಈ ಬಾರಿ ಸದಸ್ಯತ್ವ ಅಭಿಯಾನದ ಮೂಲಕ 100 ಮಿಲಿಯನ್ ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿ ಹೊಂದಿದೆ. 2014 ಮತ್ತು 2019 ರ ನಡುವೆ 180 ಮಿಲಿಯನ್ ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನ ಆಚರಣೆಯಲ್ಲ ಅದು ಕುಟುಂಬದ ವಿಸ್ತರಣೆ ಮತ್ತು ಸೈದ್ಧಾಂತಿಕ ಆಂದೋಲನವಾಗಿದೆ ಎಂದು ಮೋದಿ ಹೇಳಿದ್ದಾರೆ. ಪಕ್ಷ ಎಲ್ಲಿ ಕಡಿಮೆ ಮತ ಪಡೆದಿದೆ ಅಲ್ಲಿಂದಲೇ ಸದಸ್ಯತ್ವ ಅಭಿಯಾನ ಆರಂಭಿಸಲು ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಸತತ ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಪಕ್ಷದ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರಯತ್ನ ಮಾಡುತ್ತಿದೆ. ನರೇಂದ್ರ ಮೋದಿ ಯುವ ಜನತೆಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ ಭಾರತೀಯ ರಾಜಕೀಯದಲ್ಲಿ ಸೋಷಿಯಲ್ ಮೀಡಿಯಾ ಬಳಸಿಕೊಂಡು ಯುವ ಜನರನ್ನು ಸೆಳೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದೀಗ ಸದಸ್ಯತ್ವ ಅಭಿಯಾನದ ಮೂಲಕ ಯುವ ಮತದಾರರ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+