RCB: 83 ರನ್, 3 ವಿಕೆಟ್; ವಿಜಯ್ ಹಜಾರೆ ಟ್ರೋಫಿಯಲ್ಲಿ ಆರ್‌ಸಿಬಿ ಆಲ್‌ರೌಂಡರ್ ಅಬ್ಬರ

ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ 6ನೇ ಸುತ್ತಿನ ಪಂದ್ಯಗಳು ಮುಕ್ತಾಯವಾಗಿದ್ದು ಎಲ್ಲಾ ತಂಡಗಳಿಗೆ ಇನ್ನೊಂದು ಪಂದ್ಯ ಮಾತ್ರ ಉಳಿದುಕೊಂಡಿದೆ. ಹಲವು ಆಟಗಾರರು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಐಪಿಎಲ್ ನಲ್ಲಿ ವಿವಿಧ ತಂಡಗಳಿಗೆ ಆಡುವ ಆಟಗಾರರು ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಫ್ರಾಂಚೈಸಿಗಳ ಆತ್ಮವಿಶ್ವಾಸ ಹೆಚ್ಚಿಸಿದ್ದಾರೆ.

2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಆರ್‌ಸಿಬಿ ಸೇರಿರುವ ಆಲ್‌ರೌಂಡರ್ ಕೃನಾಲ್ ಪಾಂಡ್ಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಬರೋಡಾ ತಂಡದ ನಾಯಕತ್ವ ಕೂಡ ವಹಿಸಿಕೊಂಡಿರುವ ಕೃನಾಲ್ ಪಾಂಡ್ಯ ತಂಡದ ಗೆಲುವಿನಲ್ಲಿ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಈವರೆಗೆ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದೆ.

rcb all rounder krunal pandya shines in vijay hazare trophy

ಮಧ್ಯಪ್ರದೇಶ ವಿರುದ್ಧ ಆಲ್‌ರೌಂಡ್ ಆಟ

ಶುಕ್ರವಾರ ನಡೆದ ಮಧ್ಯಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಭರ್ಜರಿ ಆಲ್‌ರೌಂಡರ್ ಪ್ರದರ್ಶನ ನೀಡಿದರು. ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 301 ರನ್ ಕಲೆಹಾಕಿತು. ನಾಯಕ ಕೃನಾಲ್ ಪಾಂಡ್ಯ 78 ಎಸೆತಗಳಲ್ಲಿ 10 ಬೌಂಡರಿ 2 ಸಿಕ್ಸರ್ ಸಹಿತ 87 ರನ್ ಗಳಿಸಿ ತಂಡ ದೊಡ್ಡ ಮೊತ್ತ ಕಲೆಹಾಕಲು ಸಹಾಯ ಮಾಡಿದರು.

302 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮಧ್ಯಪ್ರದೇಶ 40.2 ಓವರ್ ಗಳಲ್ಲಿ 217 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. 5.5 ಓವರ್ ಗಳಲ್ಲಿ 27 ರನ್ ಬಿಟ್ಟುಕೊಟ್ಟ ಕೃನಾಲ್ ಪಾಂಡ್ಯ 3 ವಿಕೆಟ್ ಪಡೆದರು. ಅವರ ಉತ್ತಮ ಆಲ್‌ರೌಂಡರ್ ಆಟದಿಂದ ಬರೋಡಾ ಮಧ್ಯಪ್ರದೇಶ ವಿರುದ್ಧ 84 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಆರ್ ಸಿಬಿ ಅಭಿಮಾನಿಗಳಿಗೆ ಶುಭಸುದ್ದಿ

2025ರ ಐಪಿಎಲ್‌ಗಾಗಿ ಆರ್ ಸಿಬಿ ಬಲಿಷ್ಠ ತಂಡವನ್ನು ಕಟ್ಟಿದೆ. ಹೆಚ್ಚಿನ ಆಟಗಾರರ ಆಲ್‌ರೌಂಡರ್ ಆಗಿರುವುದು ಮತ್ತೊಂದು ವಿಶೇಷ. ಜೇಕಬ್ ಬೆಥೆಲ್, ಟಿಮ್ ಡೇವಿಡ್, ಲಿಯಾಮ್ ಲಿವಿಂಗ್‌ಸ್ಟೋನ್, ಕೃನಾಲ್ ಪಾಂಡ್ಯ ಆರ್ ಸಿಬಿ ಬಲಿಷ್ಠ ಆಲ್‌ರೌಂಡರ್ ಆಗಿದ್ದಾರೆ.

ಕೃನಾಲ್ ಪಾಂಡ್ಯ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದು ಐಪಿಎಲ್‌ನಲ್ಲಿ ಕೂಡ ಇದೇ ಪ್ರದರ್ಶನ ಮುಂದುವರೆಸಿದರೆ ಆರ್ ಸಿಬಿ ತಂಡ ಸುಲಭವಾಗಿ ಗೆಲುವು ಸಾಧಿಸಬಹುದು. ಜೇಕಬ್ ಬೆಥೆಲ್, ಟಿಮ್ ಡೇವಿಡ್ ಕೂಡ ಬಿಗ್ ಬ್ಯಾಷ್ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಆರ್ ಸಿಬಿ ತಂಡದ ವಿಶ್ವಾಸವನ್ನು ಹೆಚ್ಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+