RCB: ಬಿಗ್ ಬ್ಯಾಶ್ ಲೀಗ್‌ನಲ್ಲಿ ಅಬ್ಬರಿಸಿದ ಆರ್​​ಸಿಬಿ ಆಲ್‌ರೌಂಡರ್

ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಆರ್​ ಸಿಬಿ ಬಲಿಷ್ಠ ತಂಡವನ್ನು ಕಟ್ಟಿದೆ. ಹೆಚ್ಚಿನ ಸಂಖ್ಯೆಯ ಆಲ್‌ರೌಂಡರ್ ಆಟಗಾರರನ್ನೇ ಖರೀದಿ ಮಾಡಿದ್ದು, ಎಲ್ಲಾ ವಿಭಾಗಗಳಲ್ಲೂ ಉತ್ತಮ ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು 2025ರ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದೆ. ಆರ್ ಸಿಬಿ ಸೇರಿರುವ ಆಟಗಾರರು ವಿವಿಧ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

2024ರ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆಲ್‌ರೌಂಡರ್ ವಿಲ್‌ ಜ್ಯಾಕ್ಸ್‌ರನ್ನು ಆರ್ ಸಿಬಿ ಕೈಬಿಟ್ಟು, ಇಂಗ್ಲೆಂಡ್‌ನ ಜೇಕಬ್ ಬೆಥೆಲ್ ಮತ್ತು ಆಸ್ಟ್ರೇಲಿಯಾ ಆಲ್‌ರೌಂಡರ್ ಟಿಮ್ ಡೇವಿಡ್‌ರನ್ನು ಖರೀದಿ ಮಾಡಿತು. ವಿಲ್‌ ಜ್ಯಾಕ್ಸ್‌ರನ್ನು ಕೈಬಿಟ್ಟಿದ್ದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದರು. ಈ ಫ್ರಾಂಚೈಸಿ ಬುದ್ದಿ ಕಲಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಆದರೆ ಈಗ ಫ್ರಾಂಚೈಸಿ ತೆಗೆದುಕೊಂಡ ನಿರ್ಧಾರ ಸರಿಯಿದೆ ಎನ್ನುವಂತೆ ಆಟಗಾರರು ಪ್ರದರ್ಶನ ನೀಡುತ್ತಿದ್ದಾರೆ.

rcb allrounder tim david shines in big bash league

ಸಿಕ್ಕೇಬಿಟ್ಟರು ಫಿನಿಶರ್

ದಿನೇಶ್ ಕಾರ್ತಿಕ್ ಬದಲಾಗಿ ಆರ್ ಸಿಬಿ ತಂಡದಲ್ಲಿ ಫಿನಿಶರ್ ಸ್ಥಾನ ಯಾರು ನಿಭಾಯಿಸುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಈಗ ಅದಕ್ಕೆ ಉತ್ತರ ಸಿಕ್ಕಿದೆ, ಆಸ್ಟ್ರೇಲಿಯಾದ ಆಲ್‌ರೌಂಡರ್ ಟಿಮ್ ಡೇವಿಡ್‌ ಬಿಗ್ ಬ್ಯಾಶ್ ಲೀಗ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಅಭಿಮಾನಿಗಳ ಸಂತಸ ಹೆಚ್ಚಿಸಿದ್ದಾರೆ.

ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಲೀಗ್‌ನಲ್ಲಿ ಹೋಬರ್ಟ್ ಹರಿಕೇನ್ಸ್ ತಂಡಕ್ಕಾಗಿ ಆಡುತ್ತಿದ್ದು, ಶುಕ್ರವಾರ ನಡೆದ ಪಂದ್ಯದಲ್ಲಿ 14 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 33 ರನ್ ಸಿಡಿಸಿದರು. ಅವರ ಸ್ಪೋಟಕ ಇನ್ನಿಂಗ್ಸ್ ನೆರವಿನಿಂದ ಹೋಬರ್ಟ್ ಹರಿಕೇನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 214 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಅಡಿಲೇಡ್ ಸ್ಟ್ರೈಕರ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 203 ರನ್ ಗಳಿಸುವ ಮೂಲಕ 7 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಟಿಮ್ ಡೇವಿಡ್‌ರ ಇನ್ನಿಂಗ್ಸ್ ನೋಡಿ ಆರ್ ಸಿಬಿ ಅಭಿಮಾನಿಗಳು ಖುಷಿಯಾಗಿದ್ದು ಈತ ಅಬ್ಬರಿಸಿದರೆ ತಂಡಕ್ಕೆ ಒಳ್ಳೆ ಫಿನಿಶರ್ ಸಿಕ್ಕಂತೆಯೇ ಎಂದಿದ್ದಾರೆ. ಜಿತೇಶ್ ಶರ್ಮಾ, ಜೇಕಬ್ ಬೆಥೆಲ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ ಉತ್ತಮ ಫಿನಿಶರ್ ಆಗುವ ಸಾಮರ್ಥ್ಯ ಹೊಂದಿದ್ದಾರೆ. ಇವರೆಲ್ಲ ಉತ್ತಮ ಪ್ರದರ್ಶನ ನೀಡಿದರೆ ಆರ್ ಸಿಬಿ ಗೆಲುವಿನ ಹಾದಿ ಸುಲಭವಾಗಲಿದೆ.

ಕೃನಾಲ್ ಪಾಂಡ್ಯ ಕೂಡ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಜೇಕಬ್ ಬೆಥೆಲ್ ಬಿಗ್ ಬ್ಯಾಶ್ ಲೀಗ್‌ನಲ್ಲಿ ಮಿಂಚುತ್ತಿದ್ದಾರೆ. ಪಟಿದಾರ್ ಈಗಾಗಲೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅಬ್ಬರಿಸಿದ್ದು ಈ ವರ್ಷ ಬ್ಯಾಟಿಂಗ್‌ನ ಪ್ರಮುಖ ಆಧಾರ ಸ್ಥಂಭವಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+