RCB: ಐಪಿಎಲ್ ಬಳಿಕ ನಿವೃತ್ತಿ ಘೋಷಿಸಲಿದ್ದಾರೆ ಆರ್‌ಸಿಬಿ ಸ್ಟಾರ್ ಬ್ಯಾಟರ್

ಐಪಿಎಲ್ 2024ರ ಆವೃತ್ತಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಾರ್ಚ್ 22ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣೆಸಲಿದೆ.

ಐಪಿಎಲ್ ಆರಂಭಕ್ಕೆ ಮುನ್ನವೇ ಆರ್‌ಸಿಬಿ ಸ್ಟಾರ್ ಬ್ಯಾಟರ್ ದಿನೇಶ್ ಕಾರ್ತಿಕ್ ಶಾಕ್ ಕೊಟ್ಟಿದ್ದಾರೆ. ಪಿಟಿಐ ವರದಿ ಮಾಡಿರುವ ಪ್ರಕಾರ ಇದು ಅವರ ಕೊನೆಯ ಐಪಿಎಲ್ ಪಂದ್ಯಾವಳಿ ಆಗಲಿದೆ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ನಿರ್ಧಾರವನ್ನು ಐಪಿಎಲ್ ಬಳಿಕ ತೆಗೆದುಕೊಳ್ಳಲಿದ್ದಾರೆ.

RCB Batter Dinesh Karthik Plans to Exit IPL Before Declaring International Retirement

"ಈ 2024 ರ ಆವೃತ್ತಿಯು ದಿನೇಶ್ ಕಾರ್ತಿಕ್ ಅವರ ಕೊನೆಯ ಐಪಿಎಲ್ ಆಗಿರುತ್ತದೆ. ಅವರು ಐಪಿಎಲ್ ನಂತರ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಯ ಬಗ್ಗೆ ನಿರ್ಧರಿಸುತ್ತಾರೆ" ಎಂದು ಬಿಸಿಸಿಐ ಮೂಲವು ತಿಳಿಸಿದೆ ಎಂದು ಪಿಟಿಐ ತಿಳಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಆಡಿದ್ದ ಡಿಕೆ

ಕಾರ್ತಿಕ್ ಕೊನೆಯದಾಗಿ 2022 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. 2022ರ ಐಪಿಎಲ್‌ನಲ್ಲಿ ಆರ್ ಸಿಬಿ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಬಳಿಕ ಅವರು ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು.

ಇದುವರೆಗೂ ದಿನೇಶ್ ಕಾರ್ತಿಕ್ ಆರು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ (2008-14), ಕಿಂಗ್ಸ್ XI ಪಂಜಾಬ್ (ಈಗ ಪಂಜಾಬ್ ಕಿಂಗ್ಸ್ - 2011), ಮುಂಬೈ ಇಂಡಿಯನ್ಸ್ (2012-13), ಗುಜರಾತ್ ಲಯನ್ಸ್ (2016-17), ಕೋಲ್ಕತ್ತಾ ನೈಟ್ ರೈಡರ್ಸ್ (2018-21) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (2015, 2022-ಇಂದಿನವರೆಗೆ).

ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರಲ್ಲಿ ದಿನೇಶ್ ಕಾರ್ತಿಕ್ ಕೂಡ ಒಬ್ಬರು. 242 ಪಂದ್ಯಗಳನ್ನು ಆಡಿರುವ ದಿನೇಶ್ ಕಾರ್ತಿಕ್, ಎಂಎಸ್ ಧೋನಿ (250) ಮತ್ತು ರೋಹಿತ್ ಶರ್ಮಾ (243) ನಂತರ ಪಟ್ಟಿಯಲ್ಲಿ ನಂ.3 ಸ್ಥಾನದಲ್ಲಿದ್ದಾರೆ.

2008 ರಲ್ಲಿ ಪ್ರಾರಂಭವಾದಾಗಿನಿಂದ ಐಪಿಎಲ್‌ನ ಪ್ರತಿಯೊಂದು ಆವೃತ್ತಿಯಲ್ಲಿ ಕಾಣಿಸಿಕೊಂಡಿರುವ ಏಳು ಕ್ರಿಕೆಟಿಗರಲ್ಲಿ ದಿನೇಶ್ ಕಾರ್ತಿಕ್ ಕೂಡ ಸೇರಿದ್ದಾರೆ. ಎಂಎಸ್ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ವೃದ್ಧಿಮಾನ್ ಸಹಾ ಮತ್ತು ಮನೀಶ್ ಪಾಂಡೆ ಮಾತ್ರ ಈ ಸಾಲಿನಲ್ಲಿದ್ದಾರೆ.

ಐಪಿಎಲ್ 2022 ರ ಮೊದಲು, ಕಾರ್ತಿಕ್ ಅವರನ್ನು ಕೆಕೆಆರ್ ಬಿಡುಗಡೆ ಮಾಡಿತು ಮತ್ತು ಆರ್‌ಸಿಬಿ ಎರಡನೇ ಬಾರಿಗೆ ₹ 5.5 ಕೋಟಿಗೆ ಖರೀದಿಸಿತು. 2022ರ ಐಪಿಎಲ್‌ನಲ್ಲಿ ಕಾರ್ತಿಕ್ ಅವರು 16 ಪಂದ್ಯಗಳಲ್ಲಿ 55 ರ ಸರಾಸರಿಯಲ್ಲಿ 330 ರನ್ ಗಳಿಸಿದರು ಮತ್ತು ಆ ವರ್ಷದಲ್ಲಿ 183.33 ರ ಸ್ಫೋಟಕ ಸ್ಟ್ರೈಕ್-ರೇಟ್ ಹೊಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+