RCB Sixes: 1500 ಸಿಕ್ಸರ್ ಸಿಡಿಸಿದ ಆರ್ಸಿಬಿ; ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಹೊಸ ದಾಖಲೆ ಬರೆದಿದೆ. ಐಪಿಎಲ್ ಇತಿಹಾಸಲ್ಲಿ 1500 ಸಿಕ್ಸರ್ ಬಾರಿಸಿದ್ದು, ಈ ಸಾಧನೆ ಮಾಡಿದ ಎರಡನೇ ತಂಡ ಎನಿಸಿಕೊಂಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1500ನೇ ಸಿಕ್ಸರ್ ಬಾರಿಸಿತು. 1500 ಸಿಕ್ಸರ್ ಹೊಡೆದ ಎರಡನೇ ತಂಡ ಎನ್ನುವ ಹೆಗ್ಗಳಿಕೆಗೆ ಆರ್ಸಿಬಿ ಪಾತ್ರವಾಗಿದೆ.

ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರನೇ ಸ್ಥಾನದಲ್ಲಿದೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ 5 ತಂಡಗಳು
ಮುಂಬೈ ಇಂಡಿಯನ್ಸ್ - 1575 ಸಿಕ್ಸರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು - 1502 ಸಿಕ್ಸರ್
ಚೆನ್ನೈ ಸೂಪರ್ ಕಿಂಗ್ಸ್ - 1421 ಸಿಕ್ಸರ್
ಪಂಜಾಬ್ ಕಿಂಗ್ಸ್ - 1405 ಸಿಕ್ಸರ್
ಕೋಲ್ಕತ್ತಾ ನೈಟ್ ರೈಡರ್ಸ್ - 1365 ಸಿಕ್ಸರ್
ದಾಖಲೆ ಬರೆದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿದಾಗಲೆಲ್ಲ, ದಾಖಲೆಗಳು ತಾನಾಗೇ ಸೃಷ್ಟಿಯಾಗುತ್ತವೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೂಡ ಕೊಹ್ಲಿ ವಿಶೇಷ ದಾಖಲೆ ಬರೆದರು. ಆರ್ ಸಿಬಿ ತಂಡಕ್ಕಾಗಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನಿಸಿಕೊಂಡರು. ಕ್ರಿಸ್ ಗೇಲ್ ದಾಖಲೆ ಮುರಿದ ಕೊಹ್ಲಿ ಈಗ ಮೊದಲ ಸ್ಥಾನಕ್ಕೇರಿದ್ದಾರೆ.
ಆರ್ಸಿಬಿ ತಂಡದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿ
ವಿರಾಟ್ ಕೊಹ್ಲಿ - 240 ಸಿಕ್ಸರ್
ಕ್ರಿಸ್ ಗೇಲ್ - 239 ಸಿಕ್ಸರ್
ಎಬಿ ಡಿವಿಲಿಯರ್ಸ್ - 238 ಸಿಕ್ಸರ್
ಗ್ಲೆನ್ ಮ್ಯಾಕ್ಸ್‌ವೆಲ್ - 67 ಸಿಕ್ಸರ್
ಫಾಫ್ ಡು ಪ್ಲೆಸಿಸ್ - 50 ಸಿಕ್ಸರ್
ಆರ್ ಸಿಬಿ ಇನ್ನಿಂಗ್ಸ್ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಐಪಿಎಲ್ 2024ರ ಅಗ್ರ ರನ್ ಗಳಸಿದವರ ಪಟ್ಟಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೆ ಬಂದಿದ್ದು, ಆರೆಂಜ್ ಕ್ಯಾಪ್ ತನ್ನದಾಗಿಸಿಕೊಂಡಿದ್ದಾರೆ.












Click it and Unblock the Notifications