Get Updates
Get notified of breaking news, exclusive insights, and must-see stories!

RCB: ಆರ್‌ಸಿಬಿ ಚಾಂಪಿಯನ್: Ee Sala Cup Namdu.. ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾರು ಏನಂದ್ರು

Ee Sala Cup Namdu: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲವು ದಾಖಲಿಸಿದೆ. ವಡೋದರಾದ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಗುರುವಾರ ನಡೆದ WPl ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ಗೆಲುವು ದಾಖಲಿಸಿದ್ದು, ಚಾಂಪಿಯನ್ ಪಟ್ಟ ಅಲಂಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕರ್ನಾಟಕದ ರಾಜಕಾರಣಿಗಳು ಶುಭಕೋರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮ್ಯ ಅವರು, ಮತ್ತೊಮ್ಮೆ ಆರ್.ಸಿ.ಬಿ ಮಹಿಳೆಯರ ತಂಡ ಡಬ್ಲ್ಯೂ.ಪಿ.ಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಉತ್ಕೃಷ್ಟ ಪ್ರದರ್ಶನ ನೀಡುತ್ತಾ ಬಂದ ನಮ್ಮ ಆರ್‌ಸಿಬಿ ತಂಡ, ಇಂದಿನ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ನೋಡಿ ಖುಷಿಯಾಯಿತು. ಸಂಘಟಿತ ಹೋರಾಟದ ಮೂಲಕ ಟ್ರೋಫಿ ಗೆದ್ದ ನಮ್ಮ ಆರ್.ಸಿ.ಬಿ ಯ ಹೆಣ್ಣುಮಕ್ಕಳಿಗೆ ಅಭಿನಂದನೆಗಳು. ಪಂದ್ಯದ ಕೊನೆಯವರೆಗೂ ಗೆಲುವಿಗಾಗಿ ಸಾಕಷ್ಟು ಸೆಣೆಸಿದ ಡೆಲ್ಲಿ ತಂಡದ ಆಟ ಕೂಡ ಶ್ಲಾಘನೀಯ. Ee Sala Cup Namdu.. 🏆 ಎಂದು ಮುಂಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

RCB Ee Sala Cup Namdu

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಆರ್‌ಸಿಬಿ ಮತ್ತೊಮ್ಮೆ ಡಬ್ಲ್ಯೂಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ! ಡಬ್ಲ್ಯೂಪಿಎಲ್ ಪ್ರಶಸ್ತಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ತಂಡವು ಆತ್ಮವಿಶ್ವಾಸ, ಶಿಸ್ತು ಮತ್ತು ಏಕತೆಯನ್ನು ಪ್ರದರ್ಶಿಸಿತು, ಫೈನಲ್ ಅನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿತು. ಫೈನಲ್‌ಗೆ ನಿಜವಾಗಿಯೂ ಸೂಕ್ತವಾದ ಪಂದ್ಯ. ಈ ಸಲ ಕೂಡ ಕಪ್ ನಮ್ಮದೇ! ಎಂದು ಸಂತೋಷ ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು, 2026ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದು ಮಹಿಳಾ ಕ್ರಿಕೆಟ್‌ನಲ್ಲಿ ಮತ್ತೊಂದು ಹೆಮ್ಮೆಯ ಅಧ್ಯಾಯವನ್ನು ಬರೆದ ಆರ್‌ಸಿಬಿ ಮಹಿಳೆಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಸ್ಮೃತಿ ಮಂಧಾನ ಅವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಮತ್ತು ತಂಡದ ಪ್ರತಿಯೊಬ್ಬ ಸದಸ್ಯರ ಅತ್ಯುತ್ತಮ ಸಂಘಟಿತ ಪ್ರದರ್ಶನದೊಂದಿಗೆ #RCB ಮಹಿಳೆಯರು ತಮ್ಮ 2ನೇ ಚಾಂಪಿಯನ್‌ಶಿಪ್ ಅನ್ನು ಗೆಲ್ಲಲು ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ.

ಈ ಗಮನಾರ್ಹ ಸಾಧನೆಯು ಭಾರತದಲ್ಲಿ ಮಹಿಳಾ ಕ್ರೀಡಾಪಟುಗಳ ಸಮರ್ಪಣೆ, ಶಿಸ್ತು ಮತ್ತು ಸಾಧನೆಯ ಮೇರು ಇತಿಹಾಸದ ವೈಭವವನ್ನು ಮರಳಿ ಸುವರ್ಣಾಕ್ಷರಗಳಲ್ಲಿ ಬರೆದಂತೆ ಆಗಿದೆ. ಇದೇ ರೀತಿ #ನಮ್ಮRCB ತಂಡವು ನಿರಂತರ ಯಶಸ್ಸು ಸಾಧಿಸಲಿ, ಇಂತಹ ಅಸಂಖ್ಯಾತ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾಗಲಿ ಎಂದು ಶುಭ ಹಾರೈಸುತ್ತೇನೆ. 🏏🏆 #ಈಸಲ_ಕಪ್_ನಮ್ದು #WPL2026 #RCB #EsalaCupNamdu ಎಂದು ಮೆಚ್ಚುಗೆ ಸೂಚಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+