ಐಪಿಎಲ್‌ ಆರಂಭಕ್ಕೂ ಮುನ್ನವೇ ಆರ್‌ಸಿಬಿಗೆ ಸಿಎಸ್‌ಕೆ ಮಾಜಿ ಆಟಗಾರನಿಂದ ಅವಮಾನ: ವಿಡಿಯೋ ವೈರಲ್

RCB: ಐಪಿಎಲ್‌ 18ನೇ ಆವೃತ್ತಿ ಮಾರ್ಚ್‌ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಆರ್‌ಸಿಬಿ ಹಾಗೂ ಕೆಕೆಆರ್ ನಡುವೆ ನಡೆಯಲಿದ್ದು, ಇದಕ್ಕೂ ಮುನ್ನವೇ ಸಿಎಸ್‌ಕೆ ತಂಡದ ಮಾಜಿ ಆಟಗಾರರೊಬ್ಬರು ಆರ್‌ಸಿಬಿಯನ್ನು ಅವಮಾನಿಸಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ. ಅಷ್ಟಕ್ಕೂ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025 ಆರಂಭ ಆಗುವುದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಮಾಜಿ ಆಟಗಾರ ಸುಬ್ರಮಣಿಯಂ ಬದ್ರಿನಾಥ್, ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಟ್ರೋಲ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಆರ್‌ಸಿಬಿ ಆಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

RCB Faces Insult from Former CSK Player Before IPL 2025 Begins

ಐಪಿಎಲ್ 2025 ಮಾರ್ಚ್ 22ರಂದು ಪ್ರಾರಂಭ ಆಗಲಿದ್ದು, ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡದ ವಿರುದ್ಧ ಸೆಣಸಲಿದೆ. ಇದಕ್ಕೂ ಮುನ್ನವೇ ಸಾಂಪ್ರದಾಯಿಕ ಎದುರಾಳಿಯಾಗಿರುವ ಆರ್‌ಸಿಬಿ ತಂಡವನ್ನು ಸಿಎಸ್‌ಕೆ ತಂಡದ ಮಾಜಿ ಆಟಗಾರ ಅಣಕಿಸುವ ಮೂಲಕ ಅವಮಾನ ಮಾಡಿದ್ದಾರೆ.

ವಿಡಿಯೋ ವೈರಲ್‌: ಬದರಿನಾಥ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಇತರ ಎಲ್ಲಾ ತಂಡಗಳ ಪ್ರತಿನಿಧಿಗಳನ್ನು ಕೈಕುಲುಕಿ ಅಪ್ಪಿಕೊಂಡಿದ್ದಾರೆ. ಆದರೆ, ಆದಾಗ್ಯೂ, ಆರ್‌ಸಿಬಿಯನ್ನು ಪ್ರತಿನಿಧಿಸುವವರನ್ನ ಕೈಕುಲುಕದೇ ಅವಮಾಸಿದ್ದಾರೆ. ಈ ವಿಡಿಯೋ ಆರ್‌ಸಿಬಿ ಅಭಿಮಾನಿಗಳ ಆಕ್ರೋಶಕ್ಕೆ ಕಾಣವಾಗಿದೆ.

ಕಡಿಮೆಯಾಗದ ಅಭಿಮಾನಿಗಳ ಕ್ರೇಜ್‌: ಸಿಎಸ್‌ಕೆ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾಗಿದೆ. ಎಂಎಸ್ ಧೋನಿ ನಾಯಕತ್ವದಲ್ಲಿ ತಂಡವು ಐದು ಐಪಿಎಲ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. 2011ರ ಫೈನಲ್‌ನಲ್ಲಿ ಆರ್‌ಸಿಬಿಯನ್ನು ಸೋಲಿಸಿ ಸತತ ಎರಡು ಪ್ರಶಸ್ತಿಗಳನ್ನು ಗೆದ್ದ ಮೊದಲ ತಂಡವಾಗಿದೆ. ಮತ್ತೊಂದೆಡೆ, ಆರ್‌ಸಿಬಿ ಸ್ಟಾರ್ ತಂಡ ಆದರೂ ಸಹ ಇದುವರೆಗೂ ಒಂದು ಟ್ರೋಫಿ ಎತ್ತದಿರುವುದೊಂದೇ ಬೇಸರ ಬಿಟ್ಟರೆ, ಅಭಿಮಾನಿಗಳ ಕ್ರೇಜ್‌ ಮಾತ್ರ ಕಡಿಮೆಯಾಗಿಲ್ಲ. ಅಷ್ಟರ ಮಟ್ಟಿಗೆ ಎಲ್ಲಾ ತಂಡಗಳಿಗಿಂತಲೂ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿದ ತಂಡ ಆರ್‌ಸಿಬಿ.

ಸಿಎಸ್‌ಕೆ ಸೋಲಿಸಿದ್ದ ಆರ್‌ಸಿಬಿ: ಕಳೆದ ಆವೃತ್ತಿಯ ಟೂರ್ನಮೆಂಟ್‌ನಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪರಸ್ಪರ ಮುಖಾಮುಖಿ ಆಗಿದ್ದವು. ಈ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸಿದ ನಂತರ ಆರ್‌ಸಿಬಿಯ ಸಂಭ್ರಮಾಚರಣೆಗೆ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಮುಂಬರುವ ಆವೃತ್ತಿಯ ಟೂರ್ನಮೆಂಟ್‌ನಲ್ಲಿ, ಅವರು ಪರಸ್ಪರ ಎರಡು ಪಂದ್ಯಗಳನ್ನಾಡಲಿದ್ದಾರೆ.

ಮಾರ್ಚ್ 28ರಂದು ಚೆನ್ನೈನಲ್ಲಿ ಎರಡು ತಂಡಗಳು ಮೊದಲ ಬಾರಿ ಮುಖಾಮುಖಿ ಆಗಲಿವೆ. ಸಿಎಸ್‌ಕೆ ಮೇ 3ರಂದು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಆರ್‌ಸಿಬಿ ವಿರುದ್ಧ ಸೆಣಸಲಿದೆ. ಇನ್ನು ಈ ಎರಡು ತಂಡಗಳು ಮೈದಾನದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+