RCB: ಬಿಸಿಸಿಐ ವಿರುದ್ಧ ಸಿಟ್ಟಿಗೆದ್ದ ಆರ್‌ಸಿಬಿ ಅಭಿಮಾನಿಗಳು!

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಘೋಷಿಸಿದೆ. ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಿದ್ದು ಮೊಹಮ್ಮದ್ ಶಮಿ ತಂಡಕ್ಕೆ ವಾಪಸಾಗಿದ್ದಾರೆ. ರಿಷಬ್ ಪಂತ್‌ರನ್ನು ತಂಡದಿಂದ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದರೂ, ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಡಿದ್ದರಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಹಲವು ಉತ್ತಮ ಆಟಗಾರರಿಗೆ ಅವಕಾಶ ಸಿಗದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಆರ್ ಸಿಬಿ ಸ್ಟಾರ್ ಬ್ಯಾಟರ್ ಆಗಿರುವ ರಜತ್ ಪಟಿದಾರ್ ಅವರನ್ನು ಬಿಸಿಸಿಐ ಆಯ್ಕೆದಾರರು ಕಡೆಗಣಿಸದೇ ಇರುವುದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಮಾದರಿ ಪಂದ್ಯಾವಳಿಯಲ್ಲಿ ರಜತ್ ಪಟಿದಾರ್ ಮಧ್ಯಪ್ರದೇಶ ತಂಡದ ನಾಯಕನಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರನಾಗಿದ್ದರು.

rcb fans angry over bcci for not selecting rajat patidar to india t20 team

9 ಇನ್ನಿಂಗ್ಸ್‌ಗಳಲ್ಲಿ 61.14 ಸರಾಸರಿಯಲ್ಲಿ 428 ರನ್ ಕಲೆಹಾಕಿದ್ದರು. ಅವರ ಸ್ಟ್ರೈಕ್‌ ರೇಟ್‌ 186.09 ಆಗಿದ್ದು ವೇಗಿಗಳು ಮತ್ತು ಸ್ಪಿನ್ ಬೌಲರ್ ಗಳಿಗೆ ಮನಸೋ ಇಚ್ಛೆ ದಂಡಿಸಿದ್ದರು. 2024ರ ಐಪಿಎಲ್‌ನಲ್ಲಿ ಕೂಡ ರಜತ್ ಪಟಿದಾರ್ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಸ್ಪಿನ್ನರ್ ಗಳ ವಿರುದ್ಧ ಸ್ಪೋಟಕ ಬ್ಯಾಟಿಂಗ್ ಮಾಡುತ್ತಿದ್ದರು. ಅವರ ಪ್ರದರ್ಶನ ನೋಡಿದ ಅಭಿಮಾನಿಗಳು ರಜತ ಪಟಿದಾರ್ ಭಾರತ ತಂಡದಲ್ಲಿ ಅವಕಾಶ ಪಡೆಯುತ್ತಾರೆ ಎಂದು ನಿರೀಕ್ಷೆ ಮಾಡಿದ್ದರು.

ಈಗ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡದಲ್ಲಿ ಮತ್ತೊಮ್ಮೆ ರಜತ್ ಪಟಿದಾರ್ ಅವರನ್ನು ಆಯ್ಕೆದಾರರು ನಿರ್ಲಕ್ಷಿಸಿರುವುದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ಶನಿವಾರ ತಂಡವನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ರಜತ್ ಪಟಿದಾರ್ ಹೆಸರು ಟ್ರೆಂಡಿಂಗ್‌ನಲ್ಲಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+