RCB: ನಿರಾಸೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
RCB Good News: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಚೊಚ್ಚಲ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ಹಿನ್ನೆಲೆ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಇಟ್ಟುಕೊಳ್ಳಲಾಗಿತ್ತು. ಆದರೆ, ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆ ತಂಡಕ್ಕೆ ಕಪ್ಪುಚುಕ್ಕೆಯಾಗಿಬಿಟ್ಟಿತು. ಇದೇ ಕಾರಣದಿಂದ ಇಲ್ಲಿ ಯಾವುದೇ ಪಂದ್ಯಗಳನ್ನು ನಡೆಸುವಂತ್ತಿಲ್ಲ ಎಂಬ ಆದೇಶ ಹೊರಡಿಸಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಅಭಿಮಾನಿಗಳಿಗೆ ಇದೀಗ ಸರ್ಕಾರ ಬಿಗ್ ಗುಡ್ ನ್ಯೂಸ್ ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಐಪಿಎಲ್‌ನಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ ಅಂತಾ ಇದ್ದರೆ ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರ. ಒಂದು ವೇಳೆ ಆರ್‌ಸಿಬಿ ತವರು ಮೈದಾನ ಕರ್ನಾಟಕ ಬಿಟ್ಟು ಬೇರೆ ಕಡೆ ಆದ್ರೆ, ಕ್ರೇಜ್ ಕಡಿಯಾಗುವುದಂತೂ ಕಟ್ಟಿಟ್ಟ ಬುತ್ತಿ. ಮತ್ತೊಂದೆಡೆ, ಅಭಿಮಾನಿಗಳು ಕೂಡ ಕ್ರೀಡಾಂಗಣ ಸ್ಥಾಳಂತರಗೊಳ್ಳುವ ಆತಂಕದಲ್ಲಿದ್ದರು.

ಆದರೆ, ಇದೀಗ ಕೊನೆಗೂ ಆರ್‌ಸಿಬಿಯ ಕೊಟ್ಯಾಂತರ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಬಿಗ್ ಗುಡ್ ನ್ಯೂಸ್ ನೀಡಿದೆ. 2026ರ ಐಪಿಎಲ್ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಅಭಿಮಾನಿಗಳು ಸಂತಸಗೊಂಡಿದ್ದಾರೆ.
ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನ ಅಳವಡಿಕೆ ಮಾಡಿಕೊಂಡು ಪಂದ್ಯಕ್ಕೆ ಅವಕಾಶ ಕಲ್ಪಿಸಲು ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ ಚತರ್ಚೆ ಮಾಡಲಾಗಿದೆ ಎನ್ನಲಾಗಿದೆ.
ಪಂದ್ಯ ನಡೆಯುವ ವೇಳೆ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎನ್ನುವುದರ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯು (ಕೆಎಸ್‌ಸಿಎ) ಗೃಹ ಇಲಾಖೆಯೊಂದಿಗೆ ಚರ್ಚೆ ನಡೆಸಬೇಕಿದೆ. ಬಳಿಕ ಗೃಹ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜೂನ್ 3, 2025ರಂದು ಐಪಿಎಲ್ ಫೈನಲ್ ಪಂದ್ಯ ನಡೆಯಿತು. ಈ ವೇಳೆ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಡುವ ಮೂಲಕ ಆರ್‌ಸಿಬಿ ಹೊಸ ದಾಖಲೆ ಮಾಡಿತು. ಇನ್ನೂ ಅಂದು ಆರ್‌ಸಿಬಿ ಗೆಲುವನ್ನು ಬರೀ ಕರ್ನಾಟಕ ಮಾತ್ರವಲ್ಲದೆ, ದೇಶ, ವಿದೇಶಗಳಲ್ಲೂ ಸಂಭ್ರಮಿಸಿದರು.
ಆದರೆ, ಆರ್‌ಸಿಬಿ ಟ್ರೋಫಿ ಗೆದ್ದ ಹಿನ್ನೆಲೆ ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡರು. ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು. ಇದೇ ಕಾರಣದಿಂದ ಮಹಿಳಾ ವಿಶ್ವಕಪ್ ಪಂದ್ಯ ಸಹ ಕೈತಪ್ಪಿತ್ತು.
ಮುಂದಿನ ಬಾರಿ 2026ರ ಐಪಿಎಲ್ ಪಂದ್ಯಗಳನ್ನು ಚಿನ್ನಸ್ವಾಮಿಯಲ್ಲಿ ಆಡಿಸಲಾಗುವುದಿಲ್ಲ ಎನ್ನುವ ಕುತ್ತು ಬಂದಿತ್ತು. ಆದರೆ, ಇದೀಗ ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡಿಸುವ ಬಗ್ಗೆ ಸಂಪುಟ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇದರಿಂದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈಗಾಗಲೇ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್‌ಸಿಬಿ ಫ್ರಾಂಚೈಸಿ ವಿಶೇದ ಸಂದೇಶದ ಮೂಲಕ ಆರ್ಥಿಕ ಪರಿಹಾರವನ್ನು ಸಹ ಘೋಷಣೆ ಮಾಡಿದೆ.












Click it and Unblock the Notifications