RCB IPL 2024: ಮೂರನೇ ಹಾಗೂ ನಾಲ್ಕನೇ ಸ್ಥಾನ ಪಡೆದ ಆರ್‌ಸಿಬಿ ಸಿಗುವ ಬಹುಮಾನ ಮೊತ್ತ ಎಷ್ಟು?
ಐಪಿಎಲ್ 2024 ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾನುವಾರ ಚೆನ್ನೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಫೈಟ್ ನಡೆಯಲಿದೆ. ಈ ಪ್ರಶಸ್ತಿ ಸುತ್ತಿನ ಕಾಳಗದಲ್ಲಿ ಜಯ ಶಾಲಿಯಾದ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸುತ್ತದೆ. ಈ ಟೂರ್ನಿಯಲ್ಲಿ ಆರ್‌ಸಿಬಿ ತಂಡ ನಾಲ್ಕನೇ ಸ್ಥಾನೀಯವಾಗಿ ತನ್ನ ಅಭಿಯಾನವನ್ನು ಮುಗಿಸಿದೆ.
ಕ್ವಾಲಿಫೈಯರ್ ಎರಡನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 36 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೋತು ಟೂರ್ನಿಯಿಂದ ಹೊರ ನಡೆದಿದೆ. ಈ ಮೂಲಕ ಸಂಜು ಸ್ಯಾಮ್ಸನ್ ತಂಡ ಮತ್ತೊಮ್ಮೆ ನಿರಾಸೆಯನ್ನು ಕಂಡಿದೆ. ಈ ಸೋಲಿನ ಮೂಲಕ ರಾಜಸ್ಥಾನ ರಾಯಲ್ಸ್ ಮೂರನೇ ಸ್ಥಾನವನ್ನು ಪಡೆದಿದೆ. ಚಾಂಪಿಯನ್ ಹಾಗೂ ರನ್ನರ್‌ಅಪ್ ತಂಡಗಳ ನಿರ್ಧಾರ ನಾಳೆ (ಮೇ 22ರಂದು) ಆಗಲಿದೆ.

ಐಪಿಎಲ್‌ನಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಗಳು, ಪಡೆಯುವ ಬಹುಮಾನ ಮೊತ್ತ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಈ ಟೂರ್ನಿಯ ನಾಲ್ಕನೇ ಸ್ಥಾನವನ್ನು ಆರ್‌ಸಿಬಿ ಹಾಗೂ ಮೂರನೇ ಸ್ಥಾನವನ್ನು ರಾಜಸ್ಥಾನ ರಾಯಲ್ಸ್ ಪಡೆದಿವೆ.
ಮೂರನೇ ತಂಡಕ್ಕೆ ಸಿಗುವ ಬಹುಮಾನ ಮೊತ್ತ ಎಷ್ಟು?
ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ನಾಲ್ಕನೇ ತಂಡವಾಗಿ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದೆ, ಈಗ ತಂಡವು ನಾಲ್ಕನೇ ಸ್ಥಾನದಲ್ಲಿ ಉಳಿಯುತ್ತದೆ. ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನ ಅಲಂಕರಿಸಿದೆ. ಐಪಿಎಲ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ತಂಡಕ್ಕೆ 7 ಕೋಟಿ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ. ಅಲ್ಲದೆ ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ 6.5 ಕೋಟಿ ರೂ. ನೀಡಲಾಗುತ್ತದೆ. ಇದುವರೆಗೂ ಹೀಗೇ ಇತ್ತು. ಪ್ರಶಸ್ತಿ ಮೊತ್ತವನ್ನು ಬಿಸಿಸಿಐ ಇನ್ನೂ ಪ್ರಕಟಿಸಿಲ್ಲವಾದರೂ ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವುದು ಈ ಬಾರಿಯೂ ನಡೆಯಲಿದೆ ಎಂಬ ನಂಬಿಕೆ ಇದೆ.

ಮತ್ಯಾವ ಬಹುಮಾನಗಳಿಗೆ ಎಷ್ಟು ಮೊತ್ತು?
ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸುವ ಬ್ಯಾಟ್ಸ್‌ಮನ್, ಅಂದರೆ ಆರೆಂಜ್ ಕ್ಯಾಪ್ ಗೆದ್ದ ಬ್ಯಾಟ್ಸ್‌ಮನ್ ಮತ್ತು ಹೆಚ್ಚು ವಿಕೆಟ್ ಪಡೆದ ಬೌಲರ್, ಅಂದರೆ ಪರ್ಪಲ್ ಕ್ಯಾಪ್ ಗೆದ್ದವರು ತಲಾ 15 ಲಕ್ಷ ರೂಪಾಯಿ ಪಡೆಯುತ್ತಾರೆ. ಆರ್‌ಸಿಬಿಯ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮುಂದಿದ್ದರೆ, ಹರ್ಷಲ್ ಪಟೇಲ್ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಮುಂದಿದ್ದಾರೆ. ಇನ್ನೂ ಎರಡು ಪಂದ್ಯಗಳು ಬಾಕಿ ಉಳಿದಿದ್ದರೂ, ಇದರಲ್ಲಿ ಸ್ವಲ್ಪ ಬದಲಾವಣೆ ಕಾಣಬಹುದು, ಆದರೆ ಅದರ ಸಾಧ್ಯತೆಗಳು ತೀರಾ ಕಡಿಮೆ.
ಎಸ್‌ಆರ್‌ಎಚ್ ಫೈನಲ್‌ಗೆ
ಮೊದಲ ಕ್ವಾಲಿಫೈಯರ್‌ನಲ್ಲಿ ಕೆಕೆಆರ್ ವಿರುದ್ಧ ಸೋತ ಎಸ್‌ಆರ್‌ಎಚ್ ತಂಡ ಎರಡನೇ ಕ್ವಾಲಿಫೈಯರ್‌ನಲ್ಲಿ ಹೋರಾಟ ನಡೆಸಿತು. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಮಣಿಸಿದ್ದ ರಾಜಸ್ಥಾನ ರಾಯಲ್ಸ್ ಕ್ವಾಲಿಫೈಯರ್- 2ಗೆ ಅರ್ಹತೆ ಪಡೆಯಿತು.
ಶುಕ್ರವಾರ ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ ಫೈನಲ್‌ಗೆ ಕ್ವಾಲಿಫೈ ಆಗಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಕೆಕೆಆರ್‌ಗೆ ಸಿಕ್ಕ ಹಣವೆಷ್ಟು?
ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 20 ಕೋಟಿ, ರನ್ನರ್ ಅಪ್ ಸ್ಥಾನವನ್ನು ಪಡೆದ ಎಸ್‌ಆರ್‌ಎಚ್ ತಂಡಕ್ಕೆ 13 ಕೋಟಿ ನೀಡಲಾಗಿದೆ. ಇನ್ನು ಪರ್ಪಲ್ ಕ್ಯಾಪ್ ಪಡೆದ ಹರ್ಷಲ್ ಪಟೇಲ್ ಹಾಗೂ ಆರೆಂಜ್ ಕ್ಯಾಪ್ ಗೆದ್ದ ವಿರಾಟ್ ಕೊಹ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದೆ.












Click it and Unblock the Notifications