RCB: ಜಿಟಿ ವಿರುದ್ಧ ಆರ್‌ಸಿಬಿ ಗೆಲುವಿಗೆ ಕಾರಣವಾದ ಕನ್ನಡಿಗ ದೇವದತ್ ಪಡಿಕ್ಕಲ್ ಕಿಲಾಡಿ ಆಟ
RCB Vs GT IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ (ಏಪ್ರಿಲ್ 24) ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಕನ್ನಡಿಗ ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ ಹಾಗೂ ಕೃನಾಲ್ ಪಾಂಡ್ಯ ಅವರು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡುವ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಶುಭ್‌ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ನಿಗದಿ 20 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 205 ರನ್‌ಗಳನ್ನು ಕಲೆಹಾಕಿತು. ಬಳಿಕ ಜಿಟಿ ನೀಡಿದ 206 ರನ್‌ಗಳ ಗುರಿಯನ್ನು 18.5 ಓವರ್‌ಗಳಿಗೆ ಮುಟ್ಟುವ ಮೂಲಕ ಆರ್‌ಸಿಬಿ ಭರ್ಜರಿಯಾಗಿ ಗೆದ್ದು ಬೀಗಿತು.

ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ
ಆರಂಭದಲ್ಲೇ ವಾಷಿಂಗ್ಟನ್ ಸುಂದರ್ ಅವರು ಶೂನ್ಯ ರನ್‌ಗೆ ಕ್ಯಾಚ್ ಕೈಬಿಟ್ಟಿದ್ದರ ಲಾಭವನ್ನು ಉತ್ತಮವಾಗಿ ಬಳಸಿಕೊಂಡ ವಿರಾಟ್ ಕೊಹ್ಲಿ ಕೇವಲ 44 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್‌ಗಳ ಸಹಿತ 81 ರನ್ ಸಿಡಿಸಿ ಮಿಂಚಿದರು. ಈ ಮೂಲಕ ಕೊಹ್ಲಿ ಐಪಿಎಲ್‌ನಲ್ಲಿ ಎರಡು ಅಪರೂಪದ ದಾಖಲೆ ಬರೆದರು.
ವಿರಾಟ್ ಕೊಹ್ಲಿ ದಾಖಲೆಗಳು
* ಐಪಿಎಲ್ ಇತಿಹಾಸದಲ್ಲಿ 800 ಫೋರ್‌ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
* ಒಂದೇ ಫ್ರಾಂಚೈಸಿ ಪರ 300 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಆಟಗಾರ ಎನಿಸಿಕೊಂಡರು.
ಭದ್ರ ಬುನಾದಿ ಹಾಕಿದ ವಿರಾಟ್, ದೇವ್
ವಿರಾಟ್ ಕೊಹ್ಲಿ ಅವರ 81 ರನ್ ಹಾಗೂ ದೇವದತ್ ಪಡಿಕ್ಕಲ್ ಅವರ ಸ್ಫೋಟಕ ಅರ್ಧಶತಕದ (27 ಎಸೆತಗಳಲ್ಲಿ 55 ರನ್) ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ ಗುರಿ ತಲುಪಿತು.
ಗುಜರಾತ್ ಪರ ಮಿಂಚಿದ ಸಾಯಿ ಸುದರ್ಶನ್
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಪರ ಸಾಯಿ ಸುದರ್ಶನ್ ಅದ್ಭುತ ಶತಕ (58 ಎಸೆತಗಳಲ್ಲಿ 100 ರನ್) ಸಿಡಿಸಿ ಮಿಂಚಿದರು. ಇವರ ಈ ಅಮೋಘ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್‌ಗಳು ಸೇರಿವೆ. ಇವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗಿಜರಾತ್ ಟೈಟಾನ್ಸ್ 205/3 ರನ್ ಗಳಿಸಲು ಸಾಧ್ಯವಾಯಿತು.
ಇನ್ನೂ ಐಪಿಎಲ್ 2026ರ ಈ ಸೀಸನ್‌ನಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಕೊನೆಯ ಪಂದ್ಯ ಇದಾಗಿದ್ದು, ಕೊಹ್ಲಿ ಮತ್ತು ಪಡಿಕ್ಕಲ್ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಹಾಗೂ ಕೊನೆಯಲ್ಲಿ ಕೃನಾಲ್ ಪಾಂಡ್ಯ ಸಿಡಿಸಿದ ಬೌಂಡರಿಗಳು ಆರ್‌ಸಿಬಿ ಗೆಲುವಿಗೆ ಪ್ರಮುಖ ಪಾತ್ರವಹಿಸಿದವು ಅಂದ್ರೆ ತಪ್ಪಾಗಲಾರದು.












Click it and Unblock the Notifications