ಇದೇ ಕಾರಣಕ್ಕೆ ಐಪಿಎಲ್‌ನಿಂದ ಆರ್‌ಸಿಬಿ ಬ್ಯಾನ್‌..

RCB: ಐಪಿಎಲ್‌ 2025 ಫೈನಲ್‌ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ ಟ್ರೋಫಿ ಇಲ್ಲ ಎನ್ನುವ ಕೊರಗನ್ನೇನೋ ಮರೆಸಿತು. ಆದರೆ, ಟ್ರೋಫಿ ಗೆದ್ದ ಬಳಿಕ ಬೆಂಗಳೂರು ತಂಡಕ್ಕೆ ಒಂದಲ್ಲ ಒಂದು ಆಪತ್ತುಗಳು ಎದುರಾಗುತ್ತಲಿವೆ. ಹಾಗೆಯೇ ಇದೀಗ ಕ್ಯಾಬಿನೆಟ್‌ ತೆಗೆದುಕೊಂಡಿರುವ ನಿರ್ಧಾರದಿಂದ ಮತ್ತೊಂದು ದೊಡ್ಡ ಗಂಡಾಂತರವೊಂದು ಎದುರಾಗಿದ್ದು, ಬ್ಯಾನ್‌ ಪರಿಸ್ಥಿತಿಗೆ ಬಂದು ನಿಂತಿದೆ.

ರಾಯಲ್‌ ಚಾಲೆಂಜರ್ಸ್ ಬೆಂಗಳೂರು 17 ವರ್ಷಗಳ ಬಳಿಕ 18ನೇ ಆವೃತ್ತಿಯಲ್ಲಿ ಮೊಟ್ಟ ಮೊದಲ ಬಾರಿ ಐಪಿಎಲ್‌ ಟ್ರೋಫಿ ಗೆದ್ದುಕೊಂಡಿತು. ಫೈನಲ್‌ ಪಂದ್ಯ ಅಹಮದಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜೂನ್‌ 3ರಂದು ನಡೆದಿದ್ದು, ಈ ವೇಳೆ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮಣಿಸುವ ಮೂಲಕ ಆರ್‌ಸಿಬಿ ಮೊದಲ ಟ್ರೋಫಿಗೆ ಮುತ್ತಿಟ್ಟಿತು. ಅಂದು ಬರೀ ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶವೇ ಬೆಂಗಳೂರು ತಂಡದ ಗೆಲುವಿನ ಸಂಭ್ರಾಮಾಚರಣೆಯಲ್ಲಿ ಮಿಂದೆದಿತ್ತು.

RCB Likely to Be Banned from IPL for This Reason

ಮಾರನೇ ದಿನ ಜೂನ್‌ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ಕಾಲ್ತುಳಿದ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತ ಇಡೀ ದೇಶದ ಗಮನ ಸೆಳೆದಿದ್ದು ಅಲ್ಲದೆ, ಆರ್‌ಸಿಬಿಗೆ ಕಪ್ಪುಚುಕ್ಕೆಯಾಗಿಬಿಟ್ಟಿತು. ಆಗಿನಿಂದ ತುಂಬಾ ಬೆಳವಣಿಗೆಗಳು ಆಗುತ್ತಲೇ ಬಂದವು. ಆರ್‌ಸಿಬಿ ಹಾಗೂ ಕೆಎಸ್‌ಸಿಎ ವಿರುದ್ಧ ಎಫ್‌ಐಆರ್‌, ವಿರಾಟ್‌ ಕೊಹ್ಲಿ ಮೇಲೂ ದೂರು ದಾಖಲಾಯಿತು.

ಕ್ಯಾಬಿನೆಟ್‌ ತೆಗೆದುಕೊಂಡ ತೀರ್ಮಾನ ಏನು?: ಇನ್ನೂ ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಕುನ್ಹಾ ವರದಿ ಶಿಫಾರಸು ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಅರ್‌ಸಿಬಿ, ಕೆಎಸ್‍ಸಿಎ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಕ್ಯಾಬಿನೆಟ್ ಅಧಿಕೃತ ಒಪ್ಪಿಗೆ ಸೂಚಿಸಿದೆ.

ಅಲ್ಲದೆ, ಪ್ರಕರಣದಲ್ಲಿ ಪೊಲೀಸರ ತಪ್ಪಿದೆ. ಅವರ ವಿರುದ್ಧವೂ ಕೂಡ ಇಲಾಖಾ ತನಿಖೆ ಆಗಬೇಕೆಂದು ಸಚಿವರು ಒಮ್ಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಡಿಎನ್‍ಎ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲು ಮಾಡುವಂತೆಯೂ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ವರದಿಯಲ್ಲಿ ಏನಿದೆ?: ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು ವಿಜಯೋತ್ಸವದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ತನಿಖಾ ವರದಿಯನ್ನು ಜುಲೈ 12ರಂದು ಸರ್ಕಾರಕ್ಕೆ ಸಲ್ಲಿಸಿತ್ತು. ಆರ್‌ಸಿಬಿ ಜೊತೆ ಬೆಂಗಳೂರು ಪೊಲೀಸರು ಕೈಜೋಡಿಸಿದ ಹಿನ್ನೆಲೆ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿ ಮಾಡಲಲಾಗಿತ್ತು.

ಆರ್‌ಸಿಬಿ ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ ಬೆಳಗ್ಗೆ ಎರಡು ಪೋಸ್ಟ್‌ ಮಾಡಿದ ಬಳಿಕ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಜನರ ದಂಡು ಸೇರಿದ್ದರೂ ಸಹ ಕ್ರೀಡಾಂಗಣಕ್ಕೆ ಪ್ರವೇಶದ ವಿಧಾನದ ವಿವರಗಳನ್ನು ನಿರ್ದಿಷ್ಟವಾಗಿ ತಿಳಿಸಿರಲಿಲ್ಲ.

ಗೇಟ್‌ಗಳ ಪ್ರವೇಶವನ್ನು ನಿಯಂತ್ರಿಸದಿರುವುದು ಮತ್ತು ಕ್ರೀಡಾಂಗಣದ ಪ್ರವೇಶಕ್ಕೆ ಸಂಬಂಧ ಸರಿಯಾದ ವಿವರಣೆ ನೀಡದ ಹಿನ್ನೆಲೆ ಆಯೋಜಕರೇ ಈ ದುರಂತಕ್ಕೆ ಕಾರಣರಾಗಿದ್ದಾರೆ. ಸರಿಯಾಗಿ ಪೊಲೀಸರಿಂದ ಅನುಮತಿ ಪಡೆಯದೇ ದಿಢೀರ್ ನಿರ್ಧಾರ ತೆಗೆದುಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಉಲ್ಲೇಖ ಮಾಡಲಾಗಿತ್ತು. ಒಟ್ಟಿನಲ್ಲಿ ಕೊನೆಗೆ ಆರ್‌ಸಿಬಿ ವಿರುದ್ಧ ಕ್ರಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ನಿರ್ಧಾರ ತೆಗೆದುಕೊಂಡಿದ್ದು, ಇದು ತಂಡದ ಬ್ಯಾನ್‌ವರೆಗೂ ಹೋಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+