RCB: ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ: ಅಭಿಮಾನಿಗಳು ಗಮನಿಸಲೇಬೇಕಾದ ಪ್ರಮುಖಾಂಶಗಳು
IPL 2025: ಐಪಿಎಲ್ 2025ನೇ ಆವೃತ್ತಿ ಭರ್ಜರಿಯಾಗಿ ನಡೆಯುತ್ತಿದೆ. ಇಂದು (ಏಪ್ರಿಲ್ 10) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ಆಗಲಿವೆ. ಈ ಹಿನ್ನೆಲೆ ವಾಹನಗಳನ್ನು ತರುವ ಅಭಿಮಾನಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ಹಿನ್ನೆಲೆ ನಗರದ ಕೆಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ-ಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದ್ದು, ಕೆಲವೆಡೆ ಅವಕಾಶ ಕಲ್ಪಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನಗಳ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಬಿಎಂಟಿಸಿ ಹಾಗೂ ಮೆಟ್ರೋ ಸೇವೆಯನ್ನು ಬಳಸುವಂತೆ ಮನವಿ ಮಾಡಲಾಗಿದೆ. ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿ ವಾಹನಗಳನ್ನು ಕಬ್ಬನ್ ಪಾರ್ಕ್ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ರಾತ್ರಿ 11ರ ವರೆಗೆ ವಾಹನಗಳ ನಿಲುಗಡೆ ನಿಷೇಧ: ಕ್ವಿನ್ಸ್‌ರಸ್ತೆ-ಬಾಳೇಕುಂದ್ರಿ ವೃತ್ತದಿಂದ ಸ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. ಎಂ.ಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಸ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. ಲಿಂಕ್ ರಸ್ತೆ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ. ರಾಜಭವನ ರಸ್ತೆ - ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಎರಡೂ ಕಡೆ.
ಕಬ್ಬನ್ ರಸ್ತೆ ಸಿ.ಟಿ.ಓ. ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
ಸೆಂಟ್ ಮಾರ್ಕ್ಸ್ ರಸ್ತೆ -ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ.
ಮ್ಯೂಸಿಯಂ ರಸ್ತೆ ಎಂಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ. ಕಸ್ತೂರ ಬಾ ರಸ್ತೆ ಕ್ಲೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
ಕಬ್ಬನ್‌ಪಾರ್ಕ್ ಒಳಭಾಗ ಕಿಂಗ್ ರಸ್ತೆ, ಪ್ರಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ. ವಿಠಲ್ ಮಲ್ಯ ರಸ್ತೆ - ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಎಲ್ಲೆಲ್ಲಿ ವಾಹನಗಳ ನಿಲುಗಡೆಗೆ ಅವಕಾಶ?: ಪಂದ್ಯ ವೀಕ್ಷಣೆ ಮಾಡಲು ಬರುವವರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ. ಸಿಟಿ ನಿಲುಗಡೆ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ, 3 ಕೆಎಸ್‌ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಕ್ರೀಡಾಂಗಣದ ಪ್ರವೇಶ, ನಿರ್ಗಮನ ಮಾರ್ಗ: ಗೇಟ್ ನಂ 1ರಿಂದ ಗೇಟ್ ನಂ-6 ಕಬ್ಬನ್ ರಸ್ತೆಯಲ್ಲಿದ್ದು, ಪ್ರವೇಶ ಮತ್ತು ನಿರ್ಗಮನಕ್ಕೆ ಅವಕಾಶ ಕಲ್ಪಿಸಿದೆ. ಗೇಟ್ ನಂ.7ರಿಂದ ಗೇಟ್ ನಂ.11 ರವರೆಗೆ ಲಿಂಕ್ ರಸ್ತೆಯಲ್ಲಿದ್ದು, ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರವೇಶ ಮತ್ತು ನಿರ್ಗಮನ ಅವಕಾಶ ಕಲ್ಪಿಸಿದೆ. ಗೇಟ್ ನಂ 12ರಿಂದ 21ವರೆಗೆ ಕ್ವೀನ್ಸ್ ರಸ್ತೆಯಲ್ಲಿದ್ದು, ಇಲ್ಲಿ ಪ್ರವೇಶ ಮತ್ತು ನಿರ್ಗಮನ ಅವಕಾಶ ಕಲ್ಪಿಸಿದೆ.












Click it and Unblock the Notifications