RCB Vs DC: ಕೆಎಲ್ ರಾಹುಲ್ ಬ್ಯಾಟಿಂಗ್ ಬಗ್ಗೆ ಆರ್‌ಸಿಬಿ ಮಾರ್ಗದರ್ಶಕ ದಿನೇಶ್ ಕಾರ್ತೀಕ್ ಅಚ್ಚರಿ ಹೇಳಿಕೆ
RCB Vs DC: ಐಪಿಎಲ್ 2025ರ ಆವೃತ್ತಿಯ 24ನೇ ಪಂದ್ಯದಲ್ಲಿ ಆರ್‌ಸಿಬಿಯು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿದೆ. ಡೆಲ್ಲಿ ಗೆಲುವಿಗೆ ಕೆಎಲ್ ರಾಹುಲ್ ಕಲೆಹಾಕಿದ ಬೃಹತ್ ರನ್‌ಗಳೇ ಕಾರಣ. ಇನ್ನೂ ರಾಹುಲ್ ಬ್ಯಾಟಿಂಗ್ ಬಗ್ಗೆ ಆರ್‌ಸಿಬಿ ಮೆಂಟರ್ ದಿನೇಶ್ ಕಾರ್ತೀಕ್ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕುವ ಮೂಲಕ ಡೆಲ್ಲಿಗೆ 164 ರನ್‌ಗಳ ಸುಲಭದ ಗುರಿ ನೀಡಿತು.

ಆರ್‌ಸಿಬಿ ನೀಡಿದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 17.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕುವ ಮೂಲಕ ಗೆದ್ದು ಬೀಗಿತು. ಡೆಲ್ಲಿ ಪರ ಕನ್ನಡಿಗ ಕೆ.ಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ಆಡುವ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಕೆ.ಎಲ್ ರಾಜ್ ಬ್ಯಾಟಿಂಗ್ ಬಗ್ಗೆ ಆರ್‌ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತೀಕ್ ಅಚ್ಚರಿಕೆ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಕನ್ನಡಿಗ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಬಗ್ಗೆ ಹೊಗಳಿಸದ್ದಾರೆ. ಡೆಲ್ಲಿ ಪರ ಕೆ.ಎಲ್. ರಾಹುಲ್ ಅವರು ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಅವರು ಉತ್ತಮ ಗುಣಮಟ್ಟದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಎಂದು ಹೇಳಿದರು.
ಗುರುವಾರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ನೀಡಿದ 164 ರನ್‌ಗಳ ಗುರಿ ಬೆನ್ನತ್ತಿದ ವೇಳೆ ರಾಹುಲ್ 53 ಎಸೆತಗಳಲ್ಲಿ ಅಜೇಯ 93 ರನ್ ಸಿಡಿಸುವ ಮೂಲಕ ತಮ್ಮ ಮಾಜಿ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವಿಗೆ ನೆರವಾದರು.
ಪಂದ್ಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್‌ಸಿಬಿ ಮೆಂಟರ್ ದಿನೇಶ್ ಕಾರ್ತಿಕ್, ಯಾವುದೇ ಪಂದ್ಯದಲ್ಲಿ ಸೋಲು ಕಂಡರೂ ಅದು ನಿರಾಶಾದಾಯಕ. ಇದು ತವರಿನಲ್ಲಿ ನಡೆದ ಪಂದ್ಯ ಆಗಿದ್ದರಿಂದ ನಾವು ನಮ್ಮ ಕೈಲಾದಷ್ಟು ಗೆಲ್ಲಲು ಪ್ರಯತ್ನಿಸಿದೆವು. ಆದರೆ, ಗೆಲ್ಲಲು ಸಾಧ್ಯವಾಗಲಿಲ್ಲ ಎಂದರು.
ಅಲ್ಲದೆ, ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರ ಕ್ಯಾಚ್ ಕೈಬಿಟ್ಟಿದ್ದು, ಆರ್‌ಸಿಬಿ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಯಿತು. ಆ ಕ್ಯಾಚ್ ಹಿಡಿದಿದ್ದರೆ ಪಂದ್ಯದ ಫಲಿತಾಂಶ ಏನೂ ಬೇಕಾದರೂ ಆಗಿರುತ್ತಿತ್ತು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಆಡುವಾಗ ರಾಹುಲ್ ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿದರು. ಅವರಿಗೆ ಶುಭವಾಗಲಿ ಎಂದು ಹಾರೈಸಿದರು.
ಟಿ20 ಪಂದ್ಯಗಳಲ್ಲಿ ವಿಭಿನ್ನ ಕ್ರಮಾಂಕಗಳಲ್ಲಿ ಬ್ಯಾಟಿಂಗ್ ಮಾಡುವುದು ಸವಾಲಿನ ಸಂಗತಿಯಾಗಿದೆ ಮತ್ತು ಅವರು ಇತ್ತೀಚಿನ ದಿನಗಳಲ್ಲಿ ನಿಜವಾಗಿಯೂ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಉತ್ತಮ ಗುಣಮಟ್ಟದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್. ಇದೀಗ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದಾರೆ. ಐಪಿಎಲ್‌ಗೆ ಮೊದಲು ಅವರು ಅಭಿಷೇಕ್ ನಾಯರ್ ಅವರೊಂದಿಗೆ ಕೆಲಸ ಮಾಡಿದ್ದಾರೆ ಎಂದು ನಾನು ಕೇಳಿದ್ದೇನೆ. ಅದು ಅವರ ಆಟವನ್ನು ಸುಧಾರಿಸಲು ಸಹಾಯ ಮಾಡಿರಬಹುದು ಎಂದು ಹೇಳಿದರು.
ಮೈದಾನದಲ್ಲಿ ಹೆಚ್ಚಿನ ಸ್ವಾತಂತ್ರ್ಯ ಇದ್ದಾಗ ಅವರು ಉತ್ತಮವಾಗಿ ಪ್ರದರ್ಶನ್ ತೋರುತ್ತಾರೆ ಮತ್ತು ಅವರ ಇತ್ತೀಚಿನ ಫಾರ್ಮ್ ಅನ್ನು ನೋಡುವುದು ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿ ಗಮನ ಸೆಳೆದರು. ಇನ್ನೂ ಕೆಎಲ್ ರಾಹುಲ್ ಡೆಲ್ಲಿ ಪರ ಆಡಿ ಉತ್ತಮ ಬ್ಯಾಟಿಂಗ್ ಪ್ರದರ್ಶನ್ ಮಾಡುವ ಮೂಲಕ ಪಂದ್ಯವನ್ನು ಗೆಲ್ಲಿಸಿದರು. ಕೊನೆಗೆ ಇದು ನನ್ನೂರು, ನಾನು ಆಡಿದ ಮೈದಾನ ಎನ್ನುವ ಸಹ್ನೆ ಕೂಡ ಮಾಡಿದ್ದಾರೆ.












Click it and Unblock the Notifications