RCB: ಭಾರತ ಟೆಸ್ಟ್ ತಂಡದಲ್ಲಿ ಆರ್‌ಸಿಬಿಯ ಮೂವರು ವೇಗಿಗಳು

ಸೆಪ್ಟೆಂಬರ್ 19ರಿಂದ ಆರಂಭವಾಗುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಐಪಿಎಲ್ ನ ಆರ್ ಸಿಬಿ ತಂಡದ ಮೂವರು ವೇಗಿಗಳು ಇದೀಗ ಭಾರತ ಟೆಸ್ಟ್ ತಂಡದಲ್ಲಿ ಆಡಲಿದ್ದಾರೆ. ಈಗಾಗಲೇ ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಆದರೆ ಎಡಗೈ ವೇಗಿ ಯಶ್ ದಯಾಳ್‌ ಮೊದಲ ಬಾರಿ ಭಾರತ ತಂಡಕ್ಕಾಗಿ ಟೆಸ್ಟ್ ಪಂದ್ಯ ಆಡಲು ಸಜ್ಜಾಗಿದ್ದಾರೆ.

ಸಿರಾಜ್ ಭಾರತದ ಟೆಸ್ಟ್ ತಂಡದಲ್ಲಿ ನಿಯಮಿತವಾಗಿದ್ದರೂ, ಆಕಾಶ್ ದೀಪ್ ಮತ್ತು ಯಶ್ ದಯಾಳ್ ಆಯ್ಕೆಯಾಗಿರುವುದು ಅನೇಕರನ್ನು ಆಶ್ಚರ್ಯಗೊಳಿಸಿದೆ, ಯುವ ಪ್ರತಿಭೆಗಳಿಗೆ ಅತ್ಯುತ್ತಮ ಟೆಸ್ಟ್ ತಂಡದಲ್ಲಿ ಸ್ಥಾನ ಭದ್ರ ಮಾಡಿಕೊಳ್ಳಲು ಅವಕಾಶ ಸಿಕ್ಕಿದೆ.

RCB Pace Trio Set for Debut in IND vs BAN Test Series

ದುಲೀಪ್ ಟ್ರೋಫಿಯಲ್ಲಿ ಮಿಂಚಿದ ಆಕಾಶ್ ದೀಪ್

ಆಕಾಶ್ ದೀಪ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ, ನಡೆಯುತ್ತಿರುವ ದುಲೀಪ್ ಟ್ರೋಫಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಭಾರತ ಎ ತಂಡದ ಪರ ಆಡುತ್ತಿರುವ ಅವರು ಭಾರತ ಬಿ ವಿರುದ್ಧದ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳೊಂದಿಗೆ ಒಟ್ಟು ಒಂಬತ್ತು ವಿಕೆಟ್‌ಗಳನ್ನು ಪಡೆದು ಆಯ್ಕೆದಾರರ ಗಮನ ಸೆಳೆದಿದ್ದಾರೆ.

ಎಡಗೈ ವೇಗಿಗೆ ಅವಕಾಶ

ದುಲೀಪ್ ಟ್ರೋಫಿಯಲ್ಲಿ ಭಾರತ ಬಿ ಪರ ಆಡುತ್ತಿರುವ ಯಶ್ ದಯಾಳ್ ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಎ ವಿರುದ್ಧದ ಪಂದ್ಯದಲ್ಲಿ ದಯಾಳ್ ಮೊದಲ ಇನಿಂಗ್ಸ್‌ನಲ್ಲಿ ಒಂದು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಪಡೆದರು.

ಭಾರತ ಟೆಸ್ಟ್ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್‌ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+