RCB Playig 11: ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11

RCB Playig 11: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ (ಏಪ್ರಿಲ್‌ 24) ಸಂಜೆ ನಡೆಯುವ ಐಪಿಎಲ್ 2026ರ 34ನೇ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ. ಹಾಗಾದ್ರೆ, ಆಡುವ 11ರ ಬಳಗದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವ ಮಾಹಿತಿಯನ್ನ ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈ ಸೀಸನ್‌ ಆರಂಭದಿಂದಲೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಉತ್ತಮ ಪ್ರದರ್ಶನ ನೀಡಿದೆ. ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳ ಸೋಲನುಭವಿಸಿದ್ದ ಆರ್‌ಸಿಬಿ, ಈಗ ಮತ್ತೆ ಗೆಲುವಿನ ಹಳಿಗೆ ಮರಳಲು ಸಜ್ಜಾಗಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದತ್ತ ಹೆಜ್ಜೆ ಹಾಕಲು ಭರ್ಜರಿ ಸಿದ್ಧತೆ ನಡೆಸಿದೆ. ಇಂದು ಸಂಜೆ ನಡೆಯುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ರೋಚಕತೆಯಿಂದ ಕೂಡಿರಲಿದೆ. ಏಕೆಂದರೆ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಹೊಂದಿವೆ.

RCB Playing 11 vs GT IPL 2026 Probable Lineups Key Players and Match Preview Know Complete Report

ಸಾಲ್ಟ್‌ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ

ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಮೊದಲು ಬ್ಯಾಟ್‌ ಬೀಸಿದ ಬೆಂಗಳೂರು ತಂಡ ನಿಗದಿತ ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 175 ರನ್ ಪೇರಿಸಿತು. ಆದರೆ, ಈ ಗುರಿಯನ್ನು ಬೆನ್ನಟ್ಟಿದ ದೆಹಲಿ ತಂಡವು ಕೊನೆಯ ಓವರ್‌ನಲ್ಲಿ ಜಯಭೇರಿ ಬಾರಿಸಿತು. ಆರ್‌ಸಿಬಿ ಪರ ಫಿಲ್ ಸಾಲ್ಟ್ 63 ರನ್‌ಗಳ ಆಕರ್ಷಕ ಇನಿಂಗ್ಸ್ ಆಡುವ ಮೂಲಕ ತಂಡದ ಬೃಹತ್ ಮೊತ್ತಕ್ಕೆ ನೆರವಾದರು. ಅವರಿಗೆ ಸಾಥ್ ನೀಡಿದ ಟಿಮ್ ಡೇವಿಡ್ 26 ರನ್ ಸೇರಿಸಿ ಉಪಯುಕ್ತ ಕೊಡುಗೆ ನೀಡಿದರು.

ಭುವಿ ಮಾರಕ ಬೌಲಿಂಗ್ ದಾಳಿ

ಬೌಲಿಂಗ್‌ನಲ್ಲಿ ಅನುಭವಿ ಆಟಗಾರ ಭುವನೇಶ್ವರ್ ಕುಮಾರ್ ಭರ್ಜರಿ ಪ್ರದರ್ಶನ ನೀಡಿ, 4 ಓವರ್‌ಗಳಲ್ಲಿ ಕೇವಲ 26 ರನ್ ನೀಡಿ 3 ವಿಕೆಟ್ ಕಬಳಿಸಿದರು. ಮತ್ತೊಂದೆಡೆ ಕೃನಾಲ್ ಪಾಂಡ್ಯ ಕೂಡ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಬೌಲರ್‌ಗಳ ಶ್ರಮದ ಹೊರತಾಗಿಯೂ, ಕೊನೆಯ ಕ್ಷಣದವರೆಗೂ ನಡೆದ ರೋಚಕ ಹೋರಾಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿತು.

ಮತ್ತೊಂದೆಡೆ, ವಾಂಖೆಡೆಯಲ್ಲಿ ನಡೆದ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 99 ರನ್‌ಗಳಿಂದ ಭಾರಿ ಸೋಲು ಅನುಭವಿಸಿದೆ. ಮೊದಲು ಬ್ಯಾಟ್‌ ಬೀಸಿದ ಮುಂಬೈ ಇಂಡಿಯನ್ಸ್ ತಂಡವು 199 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಬಳಿಕ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜಿಟಿ ಬ್ಯಾಟಿಂಗ್‌ನಲ್ಲಿ ಉತ್ತಮ ಲಯ ಕಂಡುಕೊಳ್ಳಲಿಲ್ಲ. ಈ ಹಿನ್ನೆಲೆ ತಂಡವು ಕೇವಲ 100 ರನ್‌ಗಳಿಗೆ ಆಲೌಟ್ ಆಯಿತು. ಆರಂಭದಲ್ಲೇ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಬೇಗನೇ ವಿಕೆಟ್‌ ಒಪ್ಪಿಸಿ ಪೆವಿಲಿಯನ್ ಸೇರಿದರು.

ಆರ್‌ಸಿಬಿ ಬ್ಯಾಟಿಂಗ್ ವಿಭಾಗದ ವಿವರ

ಹೀಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್‌ ಎರಡೂ ತಂಡಗಳು ತಮ್ಮ ಕಳೆದ ಪಂದ್ಯಗಳಲ್ಲಿ ಸೋತಿರುವುದರಿಂದ, ಇಂದಿನ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳಲು ತೀವ್ರ ಪೋಪೋಟಿ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಲವು ಕ್ರಮಾಂಕದ ಬ್ಯಾಟಿಂಗ್‌ ಮೇಲೆ ನಿಂತಿದೆ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಜೋಡಿಯು ತಂಡಕ್ಕೆ ಸ್ಫೋಟಕ ಆರಂಭ ನೀಡುವ ಜೊತೆಗೆ ಉತ್ತಮ ರನ್ ಗಳಿಸುತ್ತಿರುವುದು ತಂಡದ ಪ್ಲಸ್ ಪಾಯಿಂಟ್ ಆಗಿದೆ.

ವಿರಾಟ್ ಮತ್ತು ಸಾಲ್ಟ್ ಪವರ್‌ಪ್ಲೇ ಅವಧಿಯಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹೇರಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ನಾಯಕ ರಜತ್ ಪಾಟಿದಾರ್ ಮತ್ತು ದೇವದತ್ ಪಡಿಕ್ಕಲ್ ತಂಡಕ್ಕೆ ಆಸರೆಯಾಗಲಿದ್ದಾರೆ. ಈ ಆಟಗಾರರು ರನ್‌ ವೇಗವನ್ನು ಹೆಚ್ಚಿಸಲು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಗ್ರ ಕ್ರಮಾಂಕದ ಈ ನಾಲ್ವರು ಆಟಗಾರರು ಫಾರ್ಮ್‌ನಲ್ಲಿರುವುದು ಆರ್‌ಸಿಬಿಗೆ ದೊಡ್ಡ ಶಕ್ತಿಯಾಗಿದೆ.

ಅಲ್ಲದೆ, ಆರ್‌ಸಿಬಿ ತಂಡದಲ್ಲಿ ಟಿಮ್ ಡೇವಿಡ್ ಒಬ್ಬ 'ಫಿನಿಶರ್' ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದು, ಪಂದ್ಯದ ಅಂತಿಮ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ.

ಆರ್‌ಸಿಬಿ ಬೌಲಿಂಗ್ ವಿಭಾಗದ ವಿವರ

ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಅವರು ತಮ್ಮ ಅನುಭವ ಮತ್ತು ನಿಖರ ನಿಯಂತ್ರಣದ ಮೂಲಕ ತಂಡದ ವೇಗದ ದಾಳಿಯನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಸಾಥ್ ನೀಡುತ್ತಿರುವ ಜೋಶ್ ಹ್ಯಾಜಲ್‌ವುಡ್, ಹೊಸ ಚೆಂಡಿನಲ್ಲಿ ಮಾರಕ ದಾಳಿ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕುತ್ತಿದ್ದಾರೆ. ಒಟ್ಟಿನಲ್ಲಿ ಡೇವಿಡ್ ಅವರ ಸಿಕ್ಸರ್‌ಗಳ ಅಬ್ಬರ ಮತ್ತು ಭುವಿಯ ಸ್ವಿಂಗ್ ದಾಳಿ ಇಂದಿನ ಪಂದ್ಯದಲ್ಲಿ ಬೆಂಗಳೂರಿಗೆ ಗೆಲುವು ತಂದುಕೊಡಬಲ್ಲ ಪ್ರಮುಖ ಅಸ್ತ್ರಗಳಾಗಿವೆ ಅಂತಲೇ ಹೇಳಬಹುದು.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ರಸಿಖ್ ದಾರ್ ಸಲಾಂ.

ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ 11: ಶುಭ್‌ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅಶೋಕ್ ಶರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+