RCB Playoff: ಆರ್‌ಸಿಬಿ ಪ್ಲೇಆಫ್ ಲೆಕ್ಕಾಚಾರ

IPL 2026 RCB Playoff: ಐಪಿಎಲ್‌ 2026ರ ಸೀಸನ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಇದುವರೆಗೂ ಆಡಿರುವ 8 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 2 ಸೋಲುಗಳ ಮೂಲಕ ಅಂಕಪಟ್ಟಿಯಲ್ಲಿ 12 ಪಾಯಿಂಟ್ಸ್‌ ಪಡೆದು ಎರಡನೇ ಸ್ಥಾನ ಭದ್ರಪಡಿಸಿಕೊಂಡಿದೆ. ಹಾಗಾದ್ರೆ ಪ್ಲೇಆಫ್ ತಲುಪಬೇಕಂದ್ರೆ ಆರ್‌ಸಿಬಿ ಇನ್ನೂ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈ ಸೀಸನ್ ಆರಂಭದಿಂದಲೂ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಬಲಿಷ್ಠ ತಂಡಗಳನ್ನು ಬಗ್ಗುಬಡಿಯುವ ಮೂಲಕ ಉತ್ತಮ ಪ್ರದರ್ಶನ ತೋರುತ್ತಾ ಬಂದಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಬೌಲಿಂಗ್, ಬ್ಯಾಟಿಂಗ್ ಎರಡರಲ್ಲೂ ಪ್ರಾಬಲ್ಯ ಮೆರೆದ ಆರ್‌ಸಿಬಿ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

RCB Playoff Scenario IPL 2026 How Many Matches Wins Needed to Qualify Know Complete details

ಡೆಲ್ಲಿ ಪಾಲಿಗೆ ಮುಳುವಾದ ಭುವಿ, ಹ್ಯಾಜಲ್‌ವುಡ್‌

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಬೀಸಿದ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್‌ಸಿಬಿ ಬೌಲರ್‌ಗಳ ಸ್ವಿಂಗ್ ದಾಳಿಗೆ ತತ್ತರಿಸಿತು. ಅನುಭವಿ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಆರಂಭಿಕ 4 ಓವರ್‌ಗಳಲ್ಲೇ ಕೇವಲ 8 ರನ್ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಡೆಲ್ಲಿಯ ಬ್ಯಾಟರ್‌ಗಳಿಗೆ ಮುಳುವಾದರು. ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್‌ ಕೇವಲ 75 ರನ್‌ಗಳಿಗೆ ಆಲೌಟ್ ಆಯಿತು.

ಬಳಿಕ ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಕೇವಲ 6.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿದೊಡ್ಡ ಗೆಲುವು ಸಾಧಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಆರ್‌ಸಿಬಿ ಪ್ಲೇಆಫ್‌ ಲೆಕ್ಕಾಚಾರ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ಅಗ್ರ 2ರಲ್ಲಿ ಸ್ಥಾನ ಉಳಿಸಿಕೊಂಡರೆ ಫೈನಲ್‌ಗೆ ಹೋಗಲು ಎರಡು ಅವಕಾಶಗಳನ್ನು ಪಡೆಯಲಿದೆ. ಪ್ಲೇಆಫ್ ತಲುಪಲು ಉಳಿದಿರುವ 6 ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳನ್ನಾದರೂ ಗೆಲ್ಲಬೇಕಿದೆ. ಅದು ರನ್‌ರೇಟ್‌ ಮೇಲೆ ನಿರ್ಧಾರವಾಗಲಿದೆ. ಈಗ ಸದ್ಯ ಆರ್‌ಸಿಬಿ ರನ್‌ ರೇಟ್‌ ಉತ್ತಮವಾಗಿದ್ದು, +1.919 ಇದೆ. ಈ ಬಾರಿ ಆರ್‌ಸಿಬಿಯು ತನ್ನ ಸಂಘಟಿತ ಪ್ರದರ್ಶನದಿಂದ ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.

ಮತ್ತೊಮ್ಮೆ ಟ್ರೋಫಿ ಗೆಲ್ಲುವ ಭರವಸೆಯಲ್ಲಿ ಆರ್‌ಸಿಬಿ

ದೀರ್ಘಕಾಲದ ಕಾಯುವಿಕೆ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025ರಲ್ಲಿ ಅಂತಿಮವಾಗಿ ತನ್ನ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ಇತಿಹಾಸ ನಿರ್ಮಿಸಿತ್ತು. 2008ರಲ್ಲಿ ಐಪಿಎಲ್ ಆರಂಭವಾದಾಗಿನಿಂದಲೂ ಆರ್‌ಸಿಬಿ ತಂಡವು ಬಲಿಷ್ಠ ತಂಡಗಳಲ್ಲಿ ಒಂದೆಂದು ಗುರುತಿಸಿಕೊಂಡಿತ್ತು. ಆದರೆ ಪದೇ ಪದೇ ಫೈನಲ್ ತಲುಪಿದರೂ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗುತ್ತಿತ್ತು. ಆದರೆ 18 ವರ್ಷಗಳ ಸತತ ಪ್ರಯತ್ನದ ನಂತರ ಕಳೆದ ಬಾರಿ ಆರ್‌ಸಿಬಿ ಅಭಿಮಾನಿಗಳ "ಈ ಸಲ ಕಪ್ ನಮ್ದೇ" ಎಂಬ ಕನಸನ್ನು ನನಸು ಮಾಡಿತು.

ಸುಮಾರು 18 ವರ್ಷಗಳ ಕಾಲ ಕಪ್‌ಗಾಗಿ ಕಾಯುತ್ತಿದ್ದ ಕೋಟ್ಯಂತರ ಅಭಿಮಾನಿಗಳಿಗೆ ಈ ಜಯವು ಕೇವಲ ಗೆಲುವಾಗಿರಲಿಲ್ಲ, ಅದೊಂದು ಭಾವನೆಯಾಗಿತ್ತು. ಕೇವಲ ಒಬ್ಬಿಬ್ಬರು ಆಟಗಾರರ ಮೇಲೆ ಅವಲಂಬಿತವಾಗದೆ, ಕಳೆದ ಸೀಸನ್‌ನಲ್ಲಿ ಆರ್‌ಸಿಬಿ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಸಮತೋಲಿತ ಪ್ರದರ್ಶನ ನೀಡಿತ್ತು. ತಂಡದ ಆಧಾರಸ್ತಂಭದಂತಿರುವ ವಿರಾಟ್ ಕೊಹ್ಲಿ ಅವರ ಸುದೀರ್ಘ ಕಾಲದ ಐಪಿಎಲ್ ಟ್ರೋಫಿ ಕನಸು ಕಳೆದ ಬಾರಿ ಈಡೇರಿದ್ದು ವಿಶೇಷವಾಗಿತ್ತು.

ಕಳೆದ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಆತ್ಮವಿಶ್ವಾಸದಲ್ಲಿರುವ ಆರ್‌ಸಿಬಿ 2026ರ ಸೀಸನ್‌ನಲ್ಲೂ ಅಮೋಘ ಪ್ರದರ್ಶನ ನೀಡುತ್ತಿದೆ. ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವು ಎರಡನೇ ಟ್ರೋಫಿಯ ಮೇಲೆ ಕಣ್ಣಿಟ್ಟಿದೆ. ಕಳೆದ ಬಾರಿ ಚಾಂಪಿಯನ್ ಆಗಿದ್ದ ಆರ್‌ಸಿಬಿ ಈ ಬಾರಿ ತನ್ನ ಲಯವನ್ನು ಕಾಪಾಡಿಕೊಳ್ಳುವ ಮೂಲಕ ಮತ್ತೆ ಇತಿಹಾಸ ಸೃಷ್ಟಿಸುವತ್ತ ದೃಷ್ಟಿ ನೆಟ್ಟಿದೆ. ಅಭಿಮಾಮಾನಿಗಳು ಸಹ ಇದೇ ಭರವಸೆಯಲ್ಲಿದ್ದಾರೆ. ಕಳೆದ ಬಾರಿ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ಪಂಜಾಬ್‌ ಕಿಂಗ್ಸ್ ಮಣಿಸಿ ಆರ್‌ಸಿಬಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+