RCB Poster Viral: ಐಪಿಎಲ್ ಟೂರ್ನಿ ರದ್ದು ಬೆನ್ನಲ್ಲೇ ಆರ್‌ಸಿಬಿ ಪೋಸ್ಟರ್ ವೈರಲ್
RCB Poster Viral: ಭಾರತ-ಪಾಕ್ ನಡುವೆ ಯುದ್ಧಭೀತಿ ಹಿನ್ನೆಲೆ ಐಪಿಎಲ್ 2025 ಟೂರ್ನಿಯನ್ನು ಅರ್ಧಕ್ಕೆ ರದ್ದುಪಡಿಸಲಾಗಿದೆ. ಬಿಸಿಸಿಐ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ, ಆರ್‌ಸಿಬಿ ಇನ್ಸ್ಟಾದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡು ದೊಡ್ಡತನವನ್ನು ಮೆರೆದಿದೆ. ಹಾಗಾದರೆ ಅದರಲ್ಲಿ ಏನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಿದೇಶಿ ಆಟಗಾರರು ಕೂಡ ಐಪಿಎಲ್‌ನಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಈ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಭೆಯಲ್ಲಿ ತೆಗೆದುಕೊಂಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ಪ್ರೇಮಿಗಳು. ಐಪಿಎಲ್‌ಗಿಂತ ದೇಶದ ಭದ್ರತೆಯೇ ಪ್ರಮುಖವಾಗಿ. ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಹೇಳುತ್ತಿದ್ದಾರೆ. ಈ ನಡುವೆಯೇ ಆರ್‌ಸಿಬಿ ಇನ್ಸ್ಟಾ ಪೋಸ್ಟ್‌ವೊಂದು ಭಾರೀ ವೈರಲ್ ಆಗುತ್ತಿದೆ.

"ಇಂತಹ ಬಿಕ್ಕಟ್ಟಿನ ಸಮಯದಲ್ಲಿ, ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಧೈರ್ಯ ಮತ್ತು ಶೌರ್ಯವನ್ನು ನಾವು ಮೆಚ್ಚಲೇಬೇಕಿದೆ. ಅಲ್ಲದೆ, ಭಾರತದ ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ. ನಮಗೆ ಐಪಿಎಲ್‌ಗಿಂತ ದೇಶದ ಭದ್ರತೆ ಮುಖ್ಯ," ಎಂದು ತನ್ನ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡು ದೇಶಾಭಿಮಾನವನ್ನು ಮೆರೆದಿದೆ. ಇದು ಭಾರೀ ವೈರಲ್ ಆಗುತ್ತಿದೆ.
ಕೊಹ್ಲಿ ಹೇಳಿದ್ದೇನು?: ಭಾರತ-ಪಾಕಿಸ್ತಾನದ ನಡುವೆ ಉಂಟಾಗಿರುವ ಸಂಘರ್ಷದ ಪರಿಸ್ಥಿತಿಯಿಂದಾಗಿ ಐಪಿಎಲ್ ಟೂರ್ನಿ ದಿಢೀರ್ ರದ್ದು ಮಾಡಲಾಗಿದೆ. ಈ ನಿರ್ಧಾರದ ಬಳಿಕ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ಅವರು ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ಇದೇ ವೇಳೆ ಪತ್ನಿ ಅನುಷ್ಕಾ ಶರ್ಮಾ ಅವರ ಪೋಸ್ಟ್‌ಗೆ ಲೈಕ್ ಮಾಡಿರುವ ವಿರಾಟ್ ಕೊಹ್ಲಿ ಜೈ ಹಿಂದ್ ಎಂದಿದ್ದಾರೆ.
ಆರ್‌ಸಿಬಿ ಪ್ಲೇ ಆಫ್ ಭವಿಷ್ಯ: ಐಪಿಎಲ್ 2025ರ ಆವೃತ್ತಿ ಅದ್ಧೂರಿಯಾಗಿ ನಡೆಯುತ್ತಿದೆ. ಈ ಬಾರಿ ಆರ್‌ಸಿಬಿ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರುತ್ತಾ ಬಂದಿದೆ. ಹಾಗಾದ್ರೆ ಪ್ಲೇ ಆಫ್ ಪ್ರವೇಶ ಮಾಡಲು ಇನ್ನೆಷ್ಟು ಪಂದ್ಯಗಳನ್ನು ಗೆಲ್ಲಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇದುವರೆಗೂ ಆರ್‌ಸಿಬಿ ಸೇರಿದಂತೆ ಉಳಿದ ತಂಡಗಳು ಎಷ್ಟು ಪಂದ್ಯಗಳನ್ನು ಆಡಿ ಎಷ್ಟು ಗೆದ್ದಿವೆ? ಪಾಯಿಂಟ್ಸ್ ಟೇಬಲ್‌ನಲ್ಲಿ ಸ್ಥಾನ ಏನು ಹಾಗೂ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿವೆ ಹಾಗೂ ಈ ರೇಸ್‌ನಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ವಿಶ್ವದಲ್ಲೇ ಅತ್ಯಂತ ದೊಡ್ಡ ಲೀಗ್ ಅಂದ್ರೆ ಅದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್). ಈ ಬಾರಿ ಅಂದರೆ 18ನೇ ಆವೃತ್ತಿ ಭರ್ಜರಿಯಾಗಿ ನಡೆಯುತ್ತಿದ್ದು, 10 ತಂಡಗಳ ಪರ್ಫಾಮೆನ್ಸ್ ಹೇಗಿದೆ? ಅದರಲ್ಲೂ ಐಪಿಎಲ್‌ನಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ ಪಾಯಿಂಟ್ಸ್ ಟೇಬಲ್‌ನಲ್ಲಿ ಎಷ್ಟನೇ ಸ್ಥಾನದಲ್ಲಿದೆ ಗಮನಿಸಿ.
1. ಇದುವರೆದೂ ಆಡಿರುವ 11 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು 3ರಲ್ಲಿ ಸೋತು ಉಳಿದ 8 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 16 ಅಂಕಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನದಲ್ಲಿದೆ.
2. ಆಡಿರುವ 11 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರರಲ್ಲಿ ಸೋತು ಉಳಿದ 8 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 16 ಅಂಕಗಳನ್ನು ಪಡೆಯುವ ಮೂಲಕ 2ನೇ ಸ್ಥಾನದಲ್ಲಿದೆ. ಆದರೂ ಪ್ಲೇ ಆಫ್‌ಗೇರಲು ಮೂರರಲ್ಲಿ ಇನ್ನೊಂದು ಪಂದ್ಯವನ್ನು ಗೆಲ್ಲಲ್ಲೇಬೇಕಿದೆ.
ಯಾಕಂದ್ರೆ ರನ್ ರೇಟ್ ಕೆಳಗಿರುವ ತಂಡಕ್ಕಿಂತ ಕಡಿಮೆ ಇದೆ. ಅಲ್ಲದೆ, ಉಳಿದ ನಾಲ್ಕೂ ತಂಡಗಳಿಗೂ ಇನ್ನೂ ಎರಡ್ಮೂರು ಪಂದ್ಯಗಳು ಬಾಕಿಯಿವೆ. ಒಂದು ವೇಳೆ ಅವುಗಳಲ್ಲಿ ಎಲ್ಲಾ ಗೆದ್ದರೆ, ಆರ್‌ಸಿಬಿಗೆ ಕಷ್ಟ ಆಗಬಹುದು. ಆದ್ದರಿಂದ ಉತ್ತಮ ರನ್ ರೇಟ್‌ನ ಮೂಲಕ ಇನ್ನೊಂದು ಪಂದ್ಯ ಗೆದ್ದು18 ಅಂಕಗಳನ್ನು ಪಡೆದರೆ ಪ್ಲೇ ಆಫ ಹಾದಿ ಸುಗಮವಾಗಲಿದೆ.
3. ಆಡಿರುವ 11 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 3ಲ್ಲಿ ಸೋತು 7 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 15 ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನದಲ್ಲಿದೆ.
4. ಆಡಿರುವ 12 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು 5ರಲ್ಲಿ ಸೋತು ಉಳಿದ 7 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 14 ಅಂಕಗಳನ್ನು ಪಡೆಯುವ ಮೂಲಕ 4ನೇ ಸ್ಥಾನದಲ್ಲಿದೆ.
5. ಇದುವರೆದೂ ಆಡಿರುವ 11 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಟ್ ತಂಡವು 4ರಲ್ಲಿ ಸೋತು ಉಳಿದ 6ರಲ್ಲಿ ಗೆದ್ದು 13 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 5ನೇ ಸ್ಥಾನದಲ್ಲಿದೆ.
6. ಆಡಿರುವ 12 ಪಂದ್ಯಗಳಲ್ಲಿ ಕೊಲ್ಕಾತ್ತಾ ನೈಟ್ ರೈಡರ್ಸ್ ತಂಡವು 5ಲ್ಲಿ ಸೋತು ಉಳಿದ 6 ಪಂದ್ಯಗಳಲ್ಲಿ ಗೆದ್ದು ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 11 ಅಂಕಗಳನ್ನು ಪಡೆಯುವ 6ನೇ ಸ್ಥಾನದಲ್ಲಿದೆ. ಇನ್ನು ಎರಡು ಪಂದ್ಯಗಳಲ್ಲಿ ಎರಡನ್ನು ಗೆದ್ದರೂ ಪ್ಲೇ ಆಫ್ ಪ್ರವೇಶ ಕಷ್ಟವಾಗಿದ್ದು, ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ.
7. ಆಡಿರುವ 11 ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 6ರಲ್ಲಿ ಸೋತು ಉಳಿದ 5 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 10 ಅಂಕಗಳನ್ನು ಪಡೆಯುವ ಮೂಲಕ 7ನೇ ಸ್ಥಾನದಲ್ಲಿದೆ.
8. ಆಡಿರುವ 11 ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು 7ರಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 7 ಅಂಕಗಳನ್ನು ಪಡೆಯುವ ಮೂಲಕ 8ನೇ ಸ್ಥಾನದಲ್ಲಿದೆ.
9. ಆಡಿರುವ 12 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 9ರಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 6 ಅಂಕಗಳನ್ನು ಪಡೆಯುವ ಮೂಲಕ 9ನೇ ಸ್ಥಾನದಲ್ಲಿದೆ.
10. ಆಡಿರುವ 12 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9ರಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ ಕೊನೇ ಸ್ಥಾನವನ್ನು ಅಂದರೆ ಕಳಗಿನಿಂದ ಒಂದನೇ ಸ್ಥಾನ ಅಲಂಕರಿಸಿದೆ. ಪ್ರತಿ ಬಾರಿಯೂ ಪಾಯಿಂಟ್ಸ್ ಟೇಬಲ್‌ನಲ್ಲ ಮೇಲೆ ಇರುತ್ತಿದ್ದ ತಂಡಗಳೇ ಈ ಬಾರಿ ಕೆಳಗಿಳಿದಿರುವುದೇ ಆಶ್ಚರ್ಯಕರ ಸಂಗತಿ.
ಪಾಯಿಂಟ್ಸ್ ಟೇಬಲ್‌ನಲ್ಲಿ ಯಾವ ತಂಡ ಎಷ್ಟನೇ ಸ್ಥಾನ?
1. ಗುಜರಾತ್ ಟೈಟಾನ್ಸ್
2. ರಾಯಲ್ ಚಾಲೆಂಜರ್ಸ್ ಬೆಂಗಳೂರು
3. ಪಂಜಾಬ್ ಕಿಂಗ್ಸ್
4. ಮುಂಬೈ ಇಂಡಿಯನ್ಸ್
5. ಡೆಲ್ಲಿ ಕ್ಯಾಪಿಟಲ್ಸ್
6. ಕೊಲ್ಕತ್ತಾ ನೈಟ್ ರೈಡರ್ಸ್
7. ಲಕ್ನೋ ಸೂಪರ್ ಜೈಂಟ್ಸ್
8. ಸನ್ ರೈಸರ್ಸ್ ಹೈದರಾಬಾದ್
9. ರಾಜಸ್ಥಾನ್ ರಾಯಲ್ಸ್
10. ಚೆನ್ನೈ ಸೂಪರ್ ಕಿಂಗ್ಸ್












Click it and Unblock the Notifications