RCB: ಮೊದಲಿನಂತಲ್ಲ ಆರ್​ಸಿಬಿ; ಇದು ಹೊಸ ಅಧ್ಯಾಯ!

ಐಪಿಎಲ್ 2025ರ ಮೆಗಾ ಹರಾಜು ಮುಗಿದು ಕೆಲವೇ ದಿನಗಳಾಗಿದೆ. ಐಪಿಎಲ್ ಆರಂಭವಾಗಲು ಇನ್ನೂ 5 ತಿಂಗಳು ಸಮಯವಿದೆ. ಈವರೆಗೂ ಕಪ್ ಗೆಲ್ಲಲು ವಿಫಲವಾಗಿರುವ ಆರ್​ಸಿಬಿ ಈ ಬಾರಿ ಮೆಗಾ ಹರಾಜಿನಲ್ಲಿ ಬಲಿಷ್ಠ ತಂಡವನ್ನು ಕಟ್ಟಿದ್ದು, ಈಗಲೇ ತಯಾರಿ ಆರಂಭಿಸಿದ್ದು ಅಚ್ಚರಿ ಮೂಡಿಸಿದೆ. ಸೋಮವಾರ ಬೆಂಗಳೂರಿನಲ್ಲಿ ಆರ್​ಸಿಬಿ ಶಿಬಿರವನ್ನು ಆರಂಭಿಸಿದೆ. ಹಲವು ಆಟಗಾರರು ಚಿನ್ನಸ್ವಾಮಿಯಲ್ಲಿ ತಯಾರಿ ಆರಂಭಿಸಿದ್ದಾರೆ.

ಆರ್​ಸಿಬಿ ಮ್ಯಾನೇಜ್‌ಮೆಂಟ್ ಈ ಬಾರಿ ಪ್ರಶಸ್ತಿ ಗೆಲ್ಲುವ ಬಗ್ಗೆ ಗಂಭೀರವಾಗಿ ಚಿಂತಿಸಿದೆ. ಕೋಚ್ ಆಂಡಿ ಫ್ಲವರ್ ತಮ್ಮ ಉದ್ದೇಶಗಳನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ದೇಶೀಯ ಆಟಗಾರರು ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

Rcb prepares for ipl 2025 in bengaluru

ಪ್ರಮುಖ ಆಟಗಾರರನ್ನು ಬಿಟ್ಟಿರುವ ಆರ್ ಸಿಬಿ

2024ರ ಐಪಿಎಲ್‌ನಲ್ಲಿ ಪ್ಲೇ ಆಫ್ ತಲುಪಿದ್ದ ಆರ್‍ ಸಿಬಿ, ಪ್ಲೇ ಆಫ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು. ಆರಂಭದಲ್ಲಿ ಸತತ ಸೋಲು ಕಂಡಿದ್ದ ಆರ್ ಸಿಬಿ ಬಳಿಕ ಸತತ ಏಳು ಪಂದ್ಯಗಳನ್ನು ಸತತವಾಗಿ ಗೆದ್ದು ಪ್ಲೇಆಫ್‌ಗೆ ಪ್ರವೇಶಿಸಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು.

ಮೆಗಾ ಹರಾಜಿಗೆ ಮುನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡುತ್ತದೆ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಅದಕ್ಕೆ ತಕ್ಕಂತೆ ವಿರಾಟ್ ಕೊಹ್ಲಿ, ರಜತ್ ಪಟಿದಾರ್ ಮತ್ತು ಯಶ್ ದಯಾಳ್‌ರನ್ನು ಮಾತ್ರ ಉಳಿಸಿಕೊಂಡು ಉಳಿದ ಆಟಗಾರರನ್ನು ಬಿಡುಗಡೆ ಮಾಡಿತ್ತು.

ಮೆಗಾ ಹರಾಜಿನಲ್ಲಿ ಪ್ರಮುಖ ಆಟಗಾರರನ್ನು ಆರ್ ಟಿಎಂ ಬಳಸಿ ವಾಪಸ್ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷೆ ಮಾಡಿದ್ದರೂ. ಆರ್ ಸಿಬಿ ಸ್ವಪ್ನಿಲ್ ಸಿಂಗ್‌ರನ್ನು ಹೊರತುಪಡಿಸಿ ಉಳಿದ ಯಾವ ಆಟಗಾರರು ವಾಪಸ್ ಆರ್ ಸಿಬಿಗೆ ಬರಲಿಲ್ಲ. ವಿಲ್‌ ಜ್ಯಾಕ್ಸ್, ಮೊಹಮ್ಮದ್ ಸಿರಾಜ್, ವೈಶಾಖ್ ವಿಜಯ್‌ಕುಮಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಫಾಫ್‌ ಡುಪ್ಲೆಸಿಸ್ ಸೇರಿದಂತೆ ಎಲ್ಲಾ ಆಟಗಾರರು ವಿವಿಧ ತಂಡಗಳ ಪಾಲಾದರು.

ಬಲಿಷ್ಠವಾಗಿದೆ ತಂಡ

ಐಪಿಎಲ್ ಮೆಗಾ ಹರಾಜಿನಲ್ಲಿ ಫಿಲ್ ಸಾಲ್ಟ್ ಮತ್ತು ಜೋಶ್ ಹ್ಯಾಜಲ್‌ವುಡ್, ಜೇಕಬ್ ಬೆಥೆಲ್, ಭುವನೇಶ್ವರ್ ಕುಮಾರ್, ಲಿಯಾಮ್ ಲಿವಿಂಗ್‌ಸ್ಟೋನ್‌ರಂತಹ ಉತ್ತಮ ಆಟಗಾರರನ್ನು ಖರೀದಿ ಮಾಡಿದೆ. ಈ ಬಾರಿ ತಂಡ ಬಲಿಷ್ಠವಾಗಿದ್ದು ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಶಿಭಿರದಲ್ಲಿ ಕೃನಾಲ್ ಪಾಂಡ್ಯ, ಭುವಿ, ರಜತ್ ಪಾಟಿದಾರ್, ಜಿತೇಶ್ ಶರ್ಮಾ, ಯಶ್ ದಯಾಲ್ ಮತ್ತು ರಸಿಖ್ ದಾರ್ ಸೇರಿದಂತೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿರುವ ಆಟಗಾರರು ಭಾಗವಹಿಸಿದ್ದರು.

ಫಾಫ್‌ ಡುಪ್ಲೆಸಿಸ್‌ರನ್ನು ಬಿಡುಗಡೆ ಮಾಡಿದ ಬಳಿಕ ಈ ಬಾರಿ ಆರ್ ಸಿಬಿ ನಾಯಕ ಯಾರು ಎನ್ನುವ ಕುತೂಹಲ ಇದೆ. ವಿರಾಟ್ ಕೊಹ್ಲಿ ಮತ್ತೊಮ್ಮೆ ಆರ್ ಸಿಬಿ ನಾಯಕರಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+