RCB ಯಿಂದ ಮತ್ತೊಂದು ವಿಡಿಯೋ ಬಿಡುಗಡೆ: ನಿಮ್ಮ ಕನಸನ್ನ ಹೊತ್ತು ಬೆಂಗಳೂರಿಗೆ ಬರ್ತಿವಿ ಎಂದ ವಿರಾಟ್ ಕೊಹ್ಲಿ
ಬೆಂಗಳೂರು, ಜೂನ್ 04: ಒಂದಲ್ಲ, ಎರಡಲ್ಲ, ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ಕ್ರಿಕೆಟ್‌ನಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಆರ್‌ಸಿಬಿ ಅಭಿಮಾನಿಗಳು ಪ್ರತಿ ವರ್ಷ ಐಪಿಎಲ್ ಶುರುವಾದಾಗ ಈ ಸಲ ಕಪ್ ನಮ್ದೆ ಎಂದು ಭಾರೀ ನಿರೀಕ್ಷೆಯನ್ನ ಇಟ್ಟುಕೊಳ್ಳುತ್ತಿದ್ದರು. ಈ ಬಾರೀ ಕೋಟ್ಯಾನು ಕೋಟಿ ಅಭಿಮಾನಿಗಳ ಕನಸು ಕಳೆದ 17 ವರ್ಷಗಳಿಂದ ವನವಾಸವನ್ನ ಅನುಭವಿಸುವಂತಾಗಿತ್ತು. ಇದೀಗ ಆರ್‌ಸಿಬಿ ಐಪಿಎಲ್ ಟ್ರೋಫಿಯನ್ನ ಗೆದ್ದು, ಸಂಭ್ರಮಿಸುತ್ತಿದೆ.
17 ವರ್ಷಗಳ ಕಾಲ ಹಲವು ಅವಮಾನ ಟ್ರೋಲ್ ಗಳನ್ನ ಸಹಿಸಿ ಇದೀಗ ಐಪಿಎಲ್ ನ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಚೊಚ್ಚಲ ಐಪಿಎಲ್ ಟ್ರೋಫಿಯನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗೆದ್ದಿದೆ. ಹೀಗಾಗಿ ಇಂದು ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಗೆ ಆರ್‌ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ.

ಈ ಕುರಿತು ಆರ್‌ಸಿಬಿ ಮತ್ತೊಂದು ವಿಡಿಯೋವನ್ನ ಬಿಡುಗಡೆ ಮಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕರು ಫುಲ್ ಖುಷಿಯಾಗಿದ್ದಾರೆ. ಟ್ರೊಫಿ ಸಮೇತ ಬೆಂಗಳೂರಿಗೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿಗೆ ಆಗಮಿಸಲಿದೆ. ಈ ಕುರಿತು ವಿರಾಟ್ ಕೊಹ್ಲಿ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಅಹಮದಾಬಾದ್ ನಿಂದ ಆರ್ಸಿಬಿ ತಂಡ ಹೊರಡಲಿದೆ. ಅಹಮದಾಬಾದ್ ನಿಂದ ನೇರವಾಗಿ ಆರ್ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ. ಮಧ್ಯಾಹ್ನ 1:30 ಕ್ಕೆ ಆರ್ಸಿಬಿ ತಂಡ ಎಚ್ ಎ ಎಲ್ ಗೆ ಬಂದು ಇಳಿಯಲಿದೆ.
“I’m going to feel the real side of it when we get to Bengaluru tomorrow and celebrate this with the city” - Virat Kohli ❤️🙌
— Royal Challengers Bengaluru (@RCBTweets) June 4, 2025
King Kohli walks into the dressing room with ABD, talks about Rajat’s leadership, Jitesh’s smartness, and the team coming together to achieve this… pic.twitter.com/aqLY7LHvvE
ಈ ಕುರಿತು ಆರ್‌ಸಿಬಿ ಟ್ವೀಟ್‌ನಲ್ಲಿ ವಿಡಿಯೋವನ್ನ ಹಂಚಿಕೊಂಡಿದ್ದು, ಎಬಿಡಿ ಜೊತೆಗೆ ಡ್ರೆಸ್ಸಿಂಗ್ ರೂಮ್‌ಗೆ ಹೋಗುತ್ತಿರುವಾಗ ಕಿಂಗ್ ಕೊಹ್ಲಿ ಮಾತನಾಡಿದ್ದಾರೆ. ಆರ್‌ಸಿಬಿ ಟ್ರೋಫಿ ಗೆದ್ದಿದ್ದಕ್ಕೆ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಸಂಭ್ರಮಾಚರಣೆ ಮನೆ ಮಾಡಿದೆ. ಬೆಂಗಳೂರಿನಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದು, ಕುಣಿದು ಕುಪ್ಪಳಿಸಿದ್ದಾರೆ. ನಾವು ಬೆಂಗಳೂರಿಗೆ ಬಂದು ಸಂಭ್ರಮಾಚರಣೆಯನ್ನ ಮಾಡುತ್ತೇವೆ. ನಮ್ಮ ತಂಡ ಬೆಂಗಳೂರಿಗೆ ಬರುತ್ತದೆ. ನಾವು ಬೆಂಗಳೂರಿಗೆ ಬಂದು ನಗರದಲ್ಲಿ ವಿಜಯೋತ್ಸವ ಆಚರಿಸಲಿದ್ದೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹಿನ್ನೆಲೆ, ಅಹ್ಮದಾಬಾದ್ ನಿಂದ ನೇರವಾಗಿ ಎಚ್ಎಎಲ್ ಏರ್ಪೋರ್ಟಿಗೆ ಬಂದಿಳಿಯಲಿದ್ದಾರೆ. ಆರ್ ಸಿಬಿ ಆಟಗಾರರು ಬೆಂಗಳೂರಿಗೆ ಬರುತ್ತಿರುವುದು ಅಭಿಮಾನಿಗಳಿಗೆ ಮತ್ತಷ್ಟು ಸಂತೋಷವನ್ನ ಉಂಟುಮಾಡಿದ್ದೆ. ಆರ್‌ಸಿಬಿ ಆಟಗಾರರ ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ.












Click it and Unblock the Notifications