RCB: ಐಪಿಎಲ್ 2026 ಆರಂಭಕ್ಕೂ ಮುನ್ನ ಆರ್ಸಿಬಿಗೆ ಹೊಸ ಮಾಲೀಕರು ಬರುವ ಸಾಧ್ಯತೆ
RCB Sale: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ ಅಂತ ಇದ್ರೆ ಅದು ಆರ್ಸಿಬಿ ಮಾತ್ರ. ಇದೀಗ 2026ರ ಆವೃತ್ತಿ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಮಾಲೀಕರು ಬರಲಿದ್ದಾರೆ ಎನ್ನುವ ಸುದ್ದಿ ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಾಗಾದ್ರೆ, ಅವರು ಯಾರು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
2026ರ ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಮಾಲೀಕರು ಸಿಗುವುದು ಬಹುತೇಕ ಖಚಿತ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಎರಡನೇ ಬಾರಿಗೆ ಡಬ್ಲ್ಯುಪಿಎಲ್ ಟ್ರೋಫಿ ಗೆದ್ದಿರುವ ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿ ಮಾಡಲು ಒಟ್ಟು 9 ಸಂಸ್ಥೆಗಳು ಆಸಕ್ತಿ ತೋರಿವೆ ಎಂದು ವರದಿ ಆಗಿದೆ.

ಖರೀದಿಗೆ ಮುಂದೆ ಬಂದವರು ಯಾರು?: ಇಂಗ್ಲಿಷ್ ಪ್ರೀಮಿಯರ್ ಲೀಗ್ನ ಪ್ರಸಿದ್ಧ ಮ್ಯಾಂಚೆಸ್ಟರ್ ಯುನೈಟೆಡ್ ತಂಡದ ಮಾಲೀಕರಾದ ಗ್ಲೇಜರ್ ಕುಟುಂಬ ಆರ್ಸಿಬಿ ಫ್ರಾಂಚೈಸಿ ಖರೀದಿಗೆ ಗಮನ ಹರಿಸಿರುವುದು ತಿಳಿದುಬಂದಿದೆ. ಅವರ ಲ್ಯಾನ್ಸರ್ ಕ್ಯಾಪಿಟಲ್ಸ್ ಸಂಸ್ಥೆ ಸುಮಾರು 1.8 ಬಿಲಿಯನ್ ಡಾಲರ್ (ಅಂದರೆ ಅಂದಾಜು ₹16,311 ಕೋಟಿ) ಬಿಡ್ ಸಲ್ಲಿಸಲು ಸಿದ್ಧವಾಗಿದೆ. ಅಲ್ಲದೆ, ಗ್ಲೇಜರ್ ಕುಟುಂಬ ಹೊರತುಪಡಿಸಿ ಉಳಿದ 8 ಸಂಸ್ಥೆಗಳು 1 ಬಿಲಿಯನ್ ಡಾಲರ್ (₹9,000 ಕೋಟಿ)ಕ್ಕೂ ಹೆಚ್ಚು ಮೊತ್ತ ಪಾವತಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ.
ಭಾರತದ ಉದ್ಯಮಿಗಳು ಸಹ ಆರ್ಸಿಬಿ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಅದಾರ್ ಪೂನಾವಾಲಾ, ಮಣಿಪಾಲ್ ಸಮೂಹದ ರಂಜನ್ ಪೈ ಮತ್ತು ಅಜೀಂ ಪ್ರೇಮ್ಜಿ ಅವರ ಪ್ರೇಮ್ಜಿ ಇನ್ವೆಸ್ಸ್ಟ್ ಸಂಸ್ಥೆಗಳು ಖರೀದಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. ಎಲ್ಲವೂ ನಿರೀಕ್ಷಿದಂತೆ ನಡೆದರೆ, ಶೀಘ್ರದಲ್ಲೇ ಆರ್ಸಿಬಿ ತಂಡದ ಮಾರಾಟ ಪ್ರಕ್ರಿಯೆ ಮುಕ್ತಾಯ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತದೆ.
ಆರ್ಸಿಬಿ ಬ್ರ್ಯಾಂಡ್ ವ್ಯಾಲ್ಯೂ: ಸದ್ಯ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ರ್ಯಾಂಡ್ ವ್ಯಾಲ್ಯೂ ಅಂದಾಜು 18,000-20,000 ರೂಪಾಯಿ ಎನ್ನುವ ಮಾಹಿತಿ ಇದ್ದು, ಇದನ್ನು ಗಮನಿಸಿದರೆ, 16,311 ಕೋಟಿ ಸಲ್ಲಿಸುತ್ತದೆ ಎನ್ನಲಾದ ಮ್ಯಾಂಚೆಸ್ಟರ್ ಯುನೈಟೆಡ್ ತಂಡದ ಮಾಲೀಕರಾದ ಗ್ಲೇಜರ್ ಅವರೇ ಖರೀದಿ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.
2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ತಂಡ ಗೆಲುವು ಸಾಧಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಆಗಲೇ ತಂಡದ ಬ್ರ್ಯಾಂಡ್ ವ್ಯಾಲ್ಯೂ ಹೆಚ್ಚಾಗಿದ್ದು. ಈ ಮೂಲಕ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಬ್ರ್ಯಾಂಡ್ ವ್ಯಾಲ್ಯೂ ಕಡಿಯಾಯಿತು.
-
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ












Click it and Unblock the Notifications