RCB: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಫಾಫ್ ಡು ಪ್ಲೆಸಿಸ್

ಐಪಿಎಲ್ 2024ರ ಆರಂಭಕ್ಕೆ ಎಲ್ಲಾ ತಂಡಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್‌ಸಿಬಿ ತಂಡ ಕೂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭರ್ಜರಿಯಾಗಿ ಅಭ್ಯಾಸ ಮಾಡುತ್ತಿದೆ. ವಿರಾಟ್ ಕೊಹ್ಲಿ ಭಾನುವಾರ ಭಾರತಕ್ಕೆ ಬಂದಿದ್ದು, ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಮಾರ್ಚ್ 22ರಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಅಭಿಯಾನವನ್ನು ಆರಂಭಿಸಲಾಗಿದೆ.

Faf du Plessis

ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಎರಡನೇ ಮಗುವಿನ ತಂದೆಯಾಗಿರುವ ವಿರಾಟ್ ಕೊಹ್ಲಿ, ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಫಾಫ್ ಡು ಪ್ಲೆಸಿಸ್ ಹೇಳಿದ್ದೇನು?

ವಿರಾಟ್ ಕೊಹ್ಲಿ ಬಗ್ಗೆ ಮಾತನಾಡುತ್ತಾ, ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಬಾರಿ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಆರಂಭಿಕರಾಗಿ ಆಡುತ್ತಾರೆ ಎಂದು ಸುಳಿವು ಕೊಟ್ಟಿದ್ದಾರೆ.

ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸುವ ಬಗ್ಗೆ ಮಾತನಾಡಿರುವ ಡುಪ್ಲೆಸಿಸ್, ಕೊಹ್ಲಿ ಬ್ಯಾಟಿಂಗ್ ಮಾಡಲು ನನ್ನ ನೆಚ್ಚಿನ ಆಟಗಾರರಲ್ಲಿ ಒಬ್ಬರು ಎಂದು ಡು ಪ್ಲೆಸಿಸ್ ಹೇಳಿದ್ದಾರೆ. ಓಪನರ್‌ಗಳಾದ ಕೊಹ್ಲಿ ಮತ್ತು ಡು ಪ್ಲೆಸಿಸ್ ಕಳೆದ ಋತುವಿನಲ್ಲಿ ಆರ್‌ಸಿಬಿ ಪರ ಹೆಚ್ಚಿನ ರನ್ ಗಳಿಸಿದ್ದರು.

ಅವರ ಜೊತೆ ಬ್ಯಾಟಿಂಗ್ ಮಾಡುವುದು ಖುಷಿ

"ವಿರಾಟ್ ಕೊಹ್ಲಿ ಜೊತೆ ಬ್ಯಾಟಿಂಗ್ ಮಾಡುವುದು ನನಗೆ ಇಷ್ಟ. ಅವರ ಬ್ಯಾಟಿಂಗ್ ನೋಡುವುದು ಸಖತ್ ಖುಷಿ ಕೊಡುತ್ತದೆ. ಮತ್ತೊಂದು ಕಡೆಯಿಂದ ನನಗೆ ಸಾಕಷ್ಟು ಹುರಿದುಂಬಿಸುತ್ತಾರೆ. ಕೆಲವೊಮ್ಮೆ ನಾನು ಹಾಗೆ ಭಾವಿಸುತ್ತೇನೆ. ನಾನು ಅವನ ಕೈಯಿಂದ ನನ್ನ ಕೈಗವಸುಗಳನ್ನು ಮುಷ್ಟಿಯಿಂದ ಬಡಿದುಕೊಳ್ಳುತ್ತೇನೆ ಏಕೆಂದರೆ ಅವನು ತುಂಬಾ ಭಾವೋದ್ರಿಕ್ತನಾಗುತ್ತಾರೆ." ಎಂದು ಹೇಳಿದ್ದಾರೆ.

ಐಪಿಎಲ್ 2021 ರ ನಂತರ ಕೊಹ್ಲಿ ಆರ್ ಸಿಬಿ ನಾಯಕತ್ವವನ್ನು ತ್ಯಜಿಸಿದರು. ಆರ್‌ಸಿಬಿ ಹರಾಜಿನಲ್ಲಿ ₹7 ಕೋಟಿಗೆ ಫಾಫ್‌ ಡು ಪ್ಲೆಸ್‌ಸ್ ಅವರನ್ನು ಖರೀದಿಸಿದರು. ಐಪಿಎಲ್ 2022 ಗೆ ಬೆಂಗಳೂರಿನ ನಾಯಕರಾಗಿ ಡು ಪ್ಲೆಸಿಸ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಬಾರಿ ಆರ್‌ಸಿಬಿ ತಂಡ ಬಲಿಷ್ಠವಾಗಿದ್ದು ಪ್ಲೇ ಆಫ್ ಪ್ರವೇಶಿಸುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ರಜತ್ ಪಾಟಿದಾರ್, ವಿಲ್‌ ಜ್ಯಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ ಅವರಂತಹ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.

ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ರೀಸ್ ಟೋಪ್ಲೆ, ಅಲ್ಜಾರಿ ಜೋಸೆಫ್, ಕರಣ್ ಶರ್ಮಾ, ಹಿಮಾಂಶು ಶರ್ಮಾ, ವೈಶಾಖ್ ವಿಜಯ್ ಕುಮಾರ್, ಲಾಕಿ ಫರ್ಗ್ಯುಸನ್ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+