ಕರ್ನಾಟಕದ ಆರ್‌ಸಿಬಿ ಸ್ಟಾರ್ ಬೌಲರ್ ಐಪಿಎಲ್‌ನಿಂದ ಬ್ಯಾನ್ ಸಾಧ್ಯತೆ
IPL 2026 RCB: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿಯಾಗಿ ಗೆದ್ದು ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಇದೀಗ ತಂಡ ಮತ್ತಷ್ಟು ಬಲಿಷ್ಠವಾಗಿದ್ದು, ಮುಂದಿನ ಬಾರಿಯೂ ಕಪ್ ಗೆಲ್ಲುವ ಭರವಸೆಯಲ್ಲಿದೆ. ಮತ್ತೊಂದೆಡೆ, ಸ್ಟಾರ್ ಆಟಗಾರ ಬ್ಯಾನ್ ಆಗುವ ಸಾಧ್ಯತೆಯಿದೆ. ಹಾಗಾದ್ರೆ, ಯಾರು ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆರ್‌ಸಿಬಿ 18ನೇ ಆವೃತ್ತಿಯ ಆರಂಭದಿಂದಲೂ ಕೊನೆಯವರೆಗೂ ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿ ಬಲಿಷ್ಠ ತಂಡಗಳನ್ನು ಬಗ್ಗುಬಡಿಯಿತು. ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದು ಮೊದಲ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಈ ಗೆಲುವಿನ ಪ್ರಮುಖ ರೂವಾರಿಗಳಲ್ಲಿ ಸ್ಟಾರ್ ಬೌಲರ್ ಯಶ್ ದಯಾಳ್ ಕೂಡ ಒಬ್ಬರಾಗಿದ್ದಾರೆ. ಟ್ರೋಫಿ ಗೆಲುವಿಗೆ ಇವರ ಕೊಡುಗೆ ಅಪಾರವಾಗಿತ್ತು. ಆದರೆ, ಇವರೇ ಮುಂದಿನ ಬಾರಿಯ 2026ನೇ ಆವೃತ್ತಿಯಲ್ಲಿ ಆಡುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಇಲ್ಲಿದೆ ನೋಡಿ.

ಸ್ಟಾರ್ ಬೌಲರ್‌ಗೆ ಬಂಧನದ ಭೀತಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮಾರಕ ಬೌಲರ್ ಆಗಿ ಗುರುತಿಸಿಕೊಂಡಿರುವ ಯಶ್ ದಯಾಳ್ ಎದುರಾಳಿ ತಂಡಗಳ ಬ್ಯಾಟರ್‌ಗಳಿಗೆ ದೊಡ್ಡ ತಲೆನೋವಾಗಿದ್ದರು. ಅಷ್ಟರ ಮಟ್ಟಿಗೆ ಬೌಲಿಂಗ್ ದಾಳಿ ಮಾಡಿದ್ದರು. ಈ ಮೂಲಕ ಇವರು ಆರ್‌ಸಿಬಿ ಪಾಲಿಗೆ ಸ್ಟಾರ್ ಬೌಲರ್ ಆಗಿದ್ದರು. ಇದೀಗ ಅವರು ಪ್ರಕರಣವೊಂದರಲ್ಲಿ ಬಂಧನದ ಭೀತಿಯಲ್ಲಿರುವ ಕಾರಣ ಮುಂದಿನ ಬಾರಿಯ ಆವೃತ್ತಿಯಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ.
ಭಾರತ ಕ್ರಿಕೆಟ್‌ನ ವೇಗಿ ಹಾಗೂ ಆರ್‌ಸಿಬಿ ತಂಡದ ಸ್ಟಾರ್ ಬೌಲರ್ ಯಶ್ ದಯಾಳ್ಗೆ ಬಂಧನದ ಭೀತಿ ಎದುರಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಪುರದ ಪೋಕ್ಸೋ ನ್ಯಾಯಾಲಯವು ಯಶ್ ದಯಾಳ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದೆ. ವಾಸ್ತವವಾಗಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಪೊಲೀಸರು ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿ ಮಾಡಿಕೊಂಡಿದ್ದರು.
ಇದೀಗ ಜೈಪುರ ಮೆಟ್ರೋಪಾಲಿಟನ್ ಫಸ್ಟ್‌ನ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಅವರ ತೀರ್ಪಿನ ಪ್ರಕಾರ, ಪುರಾವೆಗಳು ಮತ್ತು ತನಿಖೆಯ ವರದಿಯನ್ನು ಗಮನಿಸಿದರೆ, ಆರೋಪಿ ವಿರುದ್ಧ ಷಡ್ಯಾಂತ್ರ ಮಾಡಲಾಗಿದೆ ಎಂದು ಒಪ್ಪಲಾಗುವುದಿಲ್ಲ. ಇದರಲ್ಲಿ ಆರೋಪಿಯ ಪಾತ್ರ ಇದೆ ಎಂಬುದನ್ನು ಅರಿಯಬಹುದು ಎಂಬ ತೀರ್ಪು ನೀಡಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ದಯಾಳ್ ಮುಂದಿರುವ ಅಯ್ಕೆ ಏನು?: ಆದರೂ ಯಶ್ ದಯಾಳ್ಗೆ ಹೈಕೋರ್ಟ್‌ಗೆ ಹೋಗುವ ಆಯ್ಕೆ ಇರುವ ಕಾರಣ, ಜೈಲು ಪಾಲಾಗುವ ಸಾಧ್ಯತೆಯೂ ಕಡಿಮೆಯಿದೆ. ಒಂದು ವೇಳೆ ಅಲ್ಲಿಯೂ ಇವರು ಅಪರಾಧಿ ಎಂದು ಸಾಬೀತಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ. ಇದೇ ಕಾರಣದಿಂದ ಅವರು ಮುಂದಿನ ಬಾರಿ ಆರ್‌ಸಿಬಿ ಪರ ಕಣಕ್ಕಿಳಿಯುವುದು ಡೌಟ್ ಎಂದು ಹೇಳಲಾಗುತ್ತಿದೆ.
ಪ್ರಕರಣ ದಾಖಲಾಗಿದ್ದು ಯಾವಾಗ?: ಜುಲೈ 23, 2025ರಂದು, ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ 19 ವರ್ಷದ ಯುವತಿಯೊಬ್ಬಳು ಯಶ್ ದಯಾಳ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕಾರ, "ಎರಡು ವರ್ಷಗಳ ಹಿಂದೆ ಐಪಿಎಲ್ ಪಂದ್ಯ ಆಡಲು ಯಶ್ ದಯಾಳ್ ಜೈಪುರಕ್ಕೆ ಬಂದಿದ್ದರು. ಆ ವೇಳೆ ನಾನು ಅಪ್ರಾಪ್ತ ವಯಸ್ಸಿನವಳಾಗಿದ್ದು, ತನ್ನ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಸಲಹೆ ನೀಡುವ ನೆಪದಲ್ಲಿ ತನ್ನನ್ನು ಸೀತಾಪುರದಲ್ಲಿರುವ ಹೋಟೆಲ್ ಇಂಟರ್ ಕಾಂಟಿನೆಂಟಲ್‌ಗೆ ಕರೆಸಿದ್ದರು. ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು," ಎಂದು ದೂರಿನಲ್ಲಿ ಉಲ್ಲೇಖಿಸಿದ್ದಳು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಯಶ್ ದಯಾಳ್ ಕ್ರಿಕೆಟ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರಿಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ ಆಗುವಲ್ಲಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಕಾರಣದಿಂದ ಅವರನ್ನು ಐಪಿಎಲ್ 2026ಕ್ಕೂ ಉಳಿಸಿಕೊಳ್ಳಲಾಗಿದೆ. ಆದರೆ, ಇದೀಗ ಅವರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದಡಿಯಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬೆಂಗಳೂರು ತಂಡ ಇವರ ಸ್ಥಾನಕ್ಕೆ ಯಾರನ್ನು ಬೌಲಿಂಗ್‌ಗೆ ಇಳಿಸಬೇಕೆಂಬ ಆಲೋಚನೆಯಲ್ಲಿದೆ.












Click it and Unblock the Notifications