RCB Yash Dayal: 'ಹೋಟೆಲ್‌ನಲ್ಲಿ ಬಾಲಕಿ ಮೇಲೆ ಆರ್‌ಸಿಬಿ ಸ್ಟಾರ್ ಬೌಲರ್ ಯಶ್ ದಯಾಳ್ ಲೈಂಗಿಕ ದೌರ್ಜನ್ಯ'
RCB Yash Dayal: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿಯಾಗಿ ಗೆದ್ದು 17 ವರ್ಷಗಳ ಬಳಿಕ ಮೊದಲ ಟ್ರೋಫಿಗೆ ಮುತ್ತಿಟ್ಟಿತು. ಈ ಸಲ ಕಪ್ ನಮ್ದು ಎಂದಾದ ಮೇಲೆ ತಂಡಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಆಘಾತಗಳು ಎದುರಾಗುತ್ತಲಿದೆ. ಇದೀಗ ಟ್ರೋಫಿ ಗೆಲುವಿಗೆ ಪ್ರಮುಖ ಕಾರಣಕರ್ತರಾಗಿರುವ ಯಶ್ ದಯಾಳ್ ಮೇಲೆ ಮತ್ತೊಂದು ಗಂಭೀರ ಆರೋಪವೊಂದು ಕೇಳಿಬಂದಿದ್ದು, ಅರೆಸ್ಟ್ ಆಗುವ ಸಾಧ್ಯತೆ ಹೆಚ್ಚಿದೆ. ಮತ್ತೊಂದೆಡೆ ಟೀಂನಿಂದಲೂ ಹೊರಬೀಳುವ ಎಲ್ಲಾ ಲಕ್ಷಣಗಳು ಎದ್ದುಕಾಣುತ್ತಿವೆ.
ಅದೇನೋ ಗೊತ್ತಿಲ್ಲ.. ಟ್ರೋಫಿ ಗೆದ್ದಿದ್ದೇ ಗೆದ್ದಿದ್ದು ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತಗಳ ಸರಮಾಲೆಯೇ ಎದುರಾಗುತ್ತಿವೆ. ಐಪಿಎಲ್ 18ನೇ ಆವೃತ್ತಿಯ ಫೈನಲ್ ಪಂದ್ಯ ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ವೇಳೆ ಆರ್‌ಸಿಬಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಬಳಿಕ ತುಂಬಾ ಬೆಳವಣಿಗಳು ಆದ್ವು.. ಈಗಲೂ ಆಗುತ್ತಲಿವೆ.

ರಾಯಲ್ ಚಾಲೆಂಜರ್ಸ್ ಟ್ರೊಫಿ ಗೆಲುವಿಗೆ ಪ್ರಮುಖ ಕಾರಣಕರ್ತನಾದ ಸ್ಟಾರ್ ಬೌಲರ್ ಯಶ್ ದಯಾಲ್ ವಿರುದ್ಧ ಸಂತ್ರಸ್ತೆಯೊಬ್ಬರು ಲೈಕಿಂಗ ಕಿರುಕುಳ ಆರೋಪ ಮಾಡಿದ್ದರು. ಇದೀಗ ಮತ್ತೊಬ್ಬ ಸಂತ್ರಸ್ತೆ ಕೂಡ ಅವರ ಮೇಲೆ ಇದೇ ಆರೋಪ ಮಾಡಿದ್ದು, ಎಫ್‌ಐಆರ್ ಕೂಡ ದಾಖಲಾಗಿದೆ.
ಹೌದು..ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಮಾರಕ ಬೌಲರ್ ಯಶ್ ದಯಾಳ್ ವಿರುದ್ಧ ಮತ್ತೊಬ್ಬ ಹುಡುಗಿ ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾಳೆ. ಗಾಜಿಯಾಬಾದ್ ಬಳಿಕ ಜೈಪುರದಲ್ಲಿಯೂ ಯಶ್ ದಯಾಳ್ ವಿರುದ್ಧ ಎಫ್‌ಐಆರ್ ದಾಖಲಿ ಆಗಿದೆ.
ಸಂತ್ರಸ್ತೆ ಯುವತಿ ಆರೋಪ ಏನು?: ವೃತ್ತಿಜೀವನದ ಭರವಸೆ ನೀಡಿ ಬ್ಲ್ಯಾಕ್‌ಮೇಲ್ ಮಾಡಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು 17 ವರ್ಷದ ಸಂತ್ರಸ್ತೆಯೊಬ್ಬರು ಆರೋಪ ಮಾಡಿದ್ದಾರೆ. ಈ ದೂರಿನ ಮೇರೆಗೆ ಜೈಪುರದಲ್ಲಿ ಯಶ್ ದಯಾಳ್ ವಿರುದ್ಧ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿ ಆಗಿದೆ. ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದಯಾಳ್‌ಗೆ ಸಂತ್ರಸ್ತೆ ಪರಿಚಯವಾಗಿದ್ದೇಗೆ?: ಜೈಪುರದಲ್ಲಿ ಕ್ರಿಕೆಟ್ ಆಡುವ ವೇಳೆ ಯಾಶ್ ದಯಾಳ್ ಪರಿಚಯ ಆಗಿದ್ದರು. ನಾನು ಸಹ ಕ್ರಿಕೆಟ್ ಆಡುತ್ತಿದ್ದೆ. ದಯಾಳ್ ಐಪಿಎಲ್ ಆಡಲು ಜೈಪುರಕ್ಕೆ ಬಂದಿದ್ದರು. ಈ ವೇಳೆ ನನ್ನ ಕ್ರಿಕೆಟ್ ಕರಿಯರ್ ಬಗ್ಗೆ ಸಲಹೆ ನೀಡುವ ನೆಪದಲ್ಲಿ ಹೋಟೆಲ್ಗೆ ಕರೆದುಕೊಯ್ದಿದ್ದರು. ಆಗ ನಾನು ಅಪ್ರಾಪ್ತ ವಯಸ್ಕಳಾಗಿದ್ದೆ. ಬಳಿಕ ನಾವಿಬ್ಬರು ಎರಡು ವರ್ಷಗಳ ಕಾಲ ಸಂಪರ್ಕದಲ್ಲಿದ್ದೇವು. ಅವರು ನನಗೆ ಬ್ಲ್ಯಾಕ್‌ಮೇಲ್ ಮಾಡಿ ನಿರಂತರ ಶೋಷಣೆ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಆರ್‌ಸಿಬಿ ಟ್ರೋಫಿ ಗೆದ್ದ ದಿನ ಜೂನ್ 3ರಂದು ಬರೀ ಕರ್ನಾಟಕ ಅಷ್ಟೇ ಅಲ್ಲದೆ, ಇಡೀ ದೇಶಾದ್ಯಂತ ಸಂಭ್ರಮಾಚರಣೆಗಳು ನಡೆದವು. ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತ ಆರ್‌ಸಿಬಿ ಪಾಲಿಗೆ ಕಪ್ಪುಚುಕ್ಕೆಯಾಗಿಬಿಟ್ಟಿತು.












Click it and Unblock the Notifications