RCB: ಇದೇ ಕಾರಣಕ್ಕೆ ಆರ್‌ಸಿಬಿಯಿಂದ ಸ್ಟಾರ್ ಬೌಲರ್ ಬ್ಯಾನ್ ಸಾಧ್ಯತೆ
RCB Star Bowler: ಐಪಿಎಲ್ 2025 ಫೈನಲ್ ಪಂದ್ಯಲ್ಲಿ ಆರ್‌ಸಿಬಿ ಭರ್ಜರಿಯಾಗಿ ಗದ್ದು 17 ವರ್ಷಗಳ ಬಳಿಕ ಮೊದಲ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತು. ಇದಾದ ಬಳಿಕ ರಾಯಲ್ ತಂಡಕ್ಕೆ ಒಂದಲ್ಲ ಒಂದು ಆಘಾತಗಳು ಎದುರಾಗುತ್ತಲಿವೆ. ಇದೀಗ ಸ್ಟಾರ್ ಬೌಲರ್‌ವೊಬ್ಬರು ತಂಡದಿಂದ ಔಟ್ ಆಗುವ ಸಾಧ್ಯತೆಯಿದೆ. ಹಾಗಾದ್ರೆ ಯಾರು ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ 17 ಆವೃತಿಗಳಲ್ಲಿ ಒಂದೇ ಒಂದು ಐಪಿಎಲ್ ಟ್ರೋಫಿ ಗೆದ್ದಿರಲಿಲ್ಲ ಎಂಬ ಕೊರಗಿತ್ತು. ಆದರೆ, 18ನೇ ಸೀಸನ್‌ನ ಫೈನಲ್ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ಟ್ರೋಫಿ ಇಲ್ಲ ಕೊರಗನ್ನು ದೂರ ಏನೋ ಮಾಡಿತು. ಬಳಿಕ ತಂಡಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಆಘಾತಗಳು ಎದುರಾಗುತ್ತಲಿವೆ.

ಐಪಿಎಲ್ 2025 ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ ಮೊಟ್ಟ ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತು. ಅಂದು ಬರೀ ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶವೇ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆ ಮಾಡಿತು. ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಂಡಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು.
ಕಾಲ್ತುಳಿತ ದುರಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಪ್ಪುಚುಕ್ಕೆಯಾಗಿ ಉಳಿದುಕೊಂಡುಬಿಟ್ಟಿತು. ಬಳಿಕ ಹಲವು ಬೆಳವಣಿಗೆಗಳು ಆದ್ವು. ಘಟನೆ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ಎಫ್‌ಐಆರ್ ಹಾಗೂ ವಿರಾಟ್ ಕೊಹ್ಲಿ ಮೇಲು ದೂರು ದಾಖಲಾಯಿತು. ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.
ಆರೋಪವೇನು ಹಾಗೂ ಬ್ಯಾನ್ ಸಾಧ್ಯತೆ ಯಾಕೆ?: ಇದರ ಬೆನ್ನಲ್ಲೇ ಇದೀಗ ಸ್ಫೋಟಕ ಬೌಲರ್ ಯಶ್ ದಯಾಳ್ ವಿರುದ್ಧ ಗಂಭೀರ ಆರೋಪವೊಂದು ಎದುರಾಗುದ್ದು, ಇದು ಸಾಭಿತಾದ್ರೆ ಇವರು ತಂಡಂದಿಂದ ಔಟ್ ಆಗುವ ಭೀತಿ ಎದುರಾಗಿದೆ.ಭಾರತದ ಯುವ ಕ್ರಿಕೆಟಿಗ ಯಶ್ ದಯಾಳ್ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕೇರಲು ಪ್ರಮುಖ ಪಾತ್ರವಹಿಸಿದ್ದರು. ಇದೀಗ ಅವರ ವಿರುದ್ಧವೇ ಸಂತ್ರಸ್ತ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಮಾಡಿದ್ಧಾರೆ.
ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆ ಸಂತ್ರಸ್ತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ನ್ಯಾಯಕ್ಕಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೆ ಮನವಿ ಸಹ ಮಾಡಿದ್ದರು.
ಪ್ರಕರಣ ಸಂಬಂಧ ಸಂತ್ರಸ್ತೆ ಸಿಎಂ ಹೆಲ್ಪ್‌ಲೈನ್ ಪೋರ್ಟಲ್‌ನಲ್ಲಿ ದೂರು ದಾಖಲು ಮಾಡಿದ್ದು, ಅದರ ಸ್ಕ್ರೀನ್ ಶಾಟ್‌ಗಳನ್ನು ಸಾಮಾಜಿಕ ಜಾಲತಾಣಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಮಹಿಳೆ ದಯಾಳ್ ಜೊತೆಗಿನ ತನ್ನ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ. ಇನ್ನು ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಇದುವರೆಗೂ ಯಶ್ ದಯಾಳ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದ್ದರಿಂದ ಇದು ಹಲವು ಅನುಮಾನಗಳನ್ನಯ ಹುಟ್ಟುಹಾಕಿದೆ. ಒಂದು ವೇಳೆ ಆರೋಪ ಅಬೀತಾದ್ರೆ, ಯಶ್ ದಯಾಳ್ ಅರೆಸ್ಟ್ ಆಗುವ ಸಾಧ್ಯತೆಯಿದೆ. ಮತ್ತೊಂದೆಡೆ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇವರನ್ನು ಬ್ಯಾನ್ ಮಾಡುವ ಸಾಧ್ಯತೆಯಿದೆ ಅಂತಲೂ ಹೇಳಲಾಗುತ್ತಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Vaibhav Suryavanshi: ನನ್ನ ಕನಸು ಕೊನೆಗೂ ನನಸಾಯಿತು; ವಿರಾಟ್ ಕೊಹ್ಲಿಗೆ ವಿಶೇಷ ಧನ್ಯವಾದ ಹೇಳಿದ ವೈಭವ್ ಸೂರ್ಯವಂಶಿ -
ಒಂದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಒಲಿದ ಮೂರು ಮರೆಯಲಾಗದ ಗೌರವಗಳು; ಕಿಂಗ್ ಕೊಹ್ಲಿ ಸಂದೇಶ ಭಾರೀ ವೈರಲ್ -
ಆರ್‌ಸಿಬಿ ಜಯದ ಕನಸಿಗೆ ತಣ್ಣೀರೆರಚಿದ ವೈಭವ್ ಸೂರ್ಯವಂಶಿ; ಆರ್ಆರ್ ಪಾಲಿಗೆ ಹೀರೋ ಆದ 15 ವರ್ಷದ ಬಾಲಕ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ?












Click it and Unblock the Notifications