RCB: ಆರ್‌ಸಿಬಿ ಮಾರಕ ಬೌಲರ್ ಯಶ್ ದಯಾಳ್ ಹುಡುಗಿ ಜೊತೆ ವಿಡಿಯೋ ಕಾಲ್.. ಭಾರೀ ವೈರಲ್
RCB: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಮೊಟ್ಟ ಮೊದಲ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತು. ಈ ಗೆಲುವನ್ನ ಬರೀ ಕರ್ನಾಟಕ ಅಷ್ಟೇ ಅಲ್ಲದೆ, ಇಡೀ ದೇಶವೇ ಸಂಭ್ರಮಿಸಿತು. ಮಾರನೇ ದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದರು. ಇದು ರಾಯಲ್ ತಂಡಕ್ಕೆ ಕಪ್ಪು ಚುಕ್ಕೆಯಾಗಿ ಉಳಿದುಬಿಟ್ಟಿತು. ದುರಂತದ ಬಳಿಕ ತುಂಬಾ ಬೆಳವಣಿಗೆಗಳು ಆಗುತ್ತಲಿವೆ.
ಕಾಲ್ತುಳಿತ ದುರಂತ ಸಂಬಂಧ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತು. ಇದೇ ವೇಳೆ ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ಎಫ್‌ಐಆರ್ ದಾಖಲಿಸಿತು. ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಲಾಯಿತು. ಇದಾದ ಬಳಿಕ ತಂಡಕ್ಕೆ ಪೆಟ್ಟು ಕೊಡುವಂತಹ ಹಲವು ಬೆಳವಣಿಗಳು ಆಗುತ್ತಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ರೋಫಿ ಗೆಲುವಿಗೆ ಪ್ರಮುಖ ಪಾತ್ರನಾಗಿದ್ದ ಮಾರಕ ಬೌಲರ್ ಯಶ್ ದಯಾಳ್ ವಿರುದ್ಧ ಇತ್ತೀಚೆಗಷ್ಟೇ ಸಂತ್ರಸ್ತ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದರು. ಅಷ್ಟೇ ಸಾಲದೆಂಬಂತೆ ಇದೀಗ ದಯಾಳ್ ಜೊತೆಗಿನ ವಿಡಿಯೋ ಕರೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಆರ್‌ಸಿಬಿ ಸ್ಟಾರ್ ಬೌಲರ್ ತನ್ನ ಮೇಲೆ ಮಾನಸಿಕ ಮತ್ತು ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಇದೀಗ ಯಶ್ ದಯಾಳ್ ಜೊತೆಗಿನ ಮಾತುಕತೆಗೆ ಸಂಬಂಧಿಸಿದ ಸಾಕ್ಷಿಗಳನ್ನು ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶಾಕಿಂಗ್ ಕೊಟ್ಟಿದ್ದಾರೆ. ಇದು ಇದೀಗ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.
ಇತ್ತೀಚೆಗಷ್ಟೇ ಯಶ್ ದಯಾಳ್ ವಿರುದ್ಧ ಸಂತ್ರಸ್ತೆ ಆನ್‌ಲೈನ್ ದೂರು ದಾಖಲು ಮಾಡಿದ್ದರು. ಬಳಿಕ ಗಾಜಿಯಾಬಾದ್ ಪೊಲೀಸರು ಆಕೆಯ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಸರ್ಕಾರದ ಕುಂದುಕೊರತೆ ಪರಿಹಾರ ಪೋರ್ಟಲ್‌ಗೆ ಮಹಿಳೆ ದೂರು ಸಲ್ಲಿಸಿದ ಬಳಿಕ ಎರಡು ದಿನಗಳ ಹಿಂದೆ ಯಶ್ ದಯಾಳ್ ವಿರುದ್ಧದ ಆರೋಪಗಳ ಬಗ್ಗೆ ತಮಗೆ ತಿಳಿಸಲಾಗಿದೆ ಎಂದು ಗಾಜಿಯಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟೀಂ ಇಂಡಿಯಾ ಯುವ ಆಟಗಾರ, ಆರ್‌ಸಿಬಿ ಸ್ಟಾರ್ ಬೌಲರ್ ಎನಿಸಿಕೊಂಡಿರುವ ಯಶ್ ದಯಾಳ್ ವಿರುದ್ಧ ಆರೋಪಗಳನ್ನು ಮಾಡಿರುವ ಸಂತ್ರಸ್ತೆ ಇದೀಗ ಅವರ ವಿಡಿಯೋ ಕರೆಗಳ ಸ್ಕ್ರೀನ್‌ಶಾಟ್‌ಗಳು ಹಾಗೂ ಹಳೆಯ ಚಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದು ಇದೀಗ ಭಾರೀ ವೈರಲ್ ಆಗುತ್ತಿದೆ.
ಆರ್‌ಸಿಬಿಯು ಐಪಿಎಲ್ 2025 ಟ್ರೋಫಿಯನ್ನು ಗೆಲ್ಲಲ್ಲು ಯಶ್ ದಯಾಳ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಅವರ ಮೇಲೆಯೇ ಯುವತಿ ಗಂಭೀರ ಆರೋಪಗಳನ್ನು ಮಾಡುವುದಲ್ಲದೆ, ಸಾಕ್ಷಿಗಳನ್ನು ಹಂಚಿಕೊಂಡಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಇದುವರೆಗೂ ಯಶ್ ದಯಾಳ್ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಂದು ವೇಳೆ ಯುವತಿ ಮಾಡಿರುವ ಆರೋಪಗಳು ಸಾಬೀತಾದ್ರೆ ಯಶ್ ದಯಾಲ್ ಅರೆಸ್ಟ್ ಆಗುವ ಸಾಧ್ಯತೆಯಿದೆ. ಇದಕ್ಕೂ ಮುಂಚೆ ಯಶ್ ದಯಾಳ್ ಏನು ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದುನೋಡಬೇಕಿದೆ.












Click it and Unblock the Notifications