RCB: ಈ ಸಲ ಕಪ್ ಗೆಲ್ಲೋದು ಆರ್‌ಸಿಬಿ; ಸುನಿಲ್ ಗವಾಸ್ಕರ್ ಭವಿಷ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2024 ಪಂದ್ಯಾವಳಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ಕ್ವಾಲಿಫೈಯರ್ 1 ಪಂದ್ಯ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ಗೆ ಅರ್ಹತೆ ಪಡೆದಿವೆ.

ಪ್ಲೇಆಫ್‌ ಪಂದ್ಯಗಳ ಆರಂಭಕ್ಕೆ ಮುನ್ನವೇ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಬಾರಿ ಕಪ್ ಗೆಲ್ಲುವ ತಮ್ಮ ನೆಚ್ಚಿನ ಫೇವರಿಟ್ ತಂಡವನ್ನು ಹೆಸರಿಸಿದ್ದಾರೆ. ವಿರಾಟ್ ಕೊಹ್ಲಿ ಬಗ್ಗೆ ಟೀಕಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಸುನಿಲ್ ಗವಾಸ್ಕರ್ ಅಚ್ಚರಿ ಎನ್ನುವಂತೆ ಆರ್‌ಸಿಬಿ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಹೇಳಿದ್ದಾರೆ.

RCB Sunil Gavaskar Predicts RCB as IPL 2024 Winner

ಕೆಕೆಆರ್ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಕ್ವಾಲಿಫೈಯರ್ 1 ಪಂದ್ಯಕ್ಕೆ ಮುನ್ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯದ ಕಾಮೆಂಟರಿ ವೇಳೆ ಭವಿಷ್ಯ ನುಡಿದಿದ್ದಾರೆ.

ಸುನಿಲ್ ಗವಾಸ್ಕರ್ ಹೇಳಿದ್ದೇನು?

ಈ ಬಾರಿ ಕಪ್ ಗೆಲ್ಲುವ ಎಲ್ಲಾ ಅವಕಾಶ ಆರ್ ಸಿಬಿ ತಂಡಕ್ಕಿದೆ ಎಂದು ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ದಿಗ್ಗಜ ಬ್ಯಾಟ್ಸ್‌ಮನ್ ಮೊದಲ ಪ್ರಶಸ್ತಿ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಜ್ಜಾಗಿದೆ ಎಂದು ಭವಿಷ್ಯ ನುಡಿದರು.

ಪಂದ್ಯಾವಳಿಯಿಂದಲೇ ಹೊರಗುಳಿದರು ಎನ್ನುವಾಗ ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದೆ. ಅವರು ಆಡುತ್ತಿರುವ ರೀತಿಯನ್ನು ನೋಡಿದರೆ ತಡೆಯುವುದು ಕಷ್ಟ ಎನಿಸುತ್ತದೆ. ತಂಡದ ಆತ್ಮವಿಶ್ವಾಸ ಕೂಡ ಹೆಚ್ಚಾಗಿದ್ದು, ಕಪ್ ಗೆಲ್ಲುವ ಅವಕಾಶ ಹೆಚ್ಚಾಗಿದೆ ಎಂದು ಹೇಳಿದರು.

ಆರ್ ಆರ್ ವಿರುದ್ಧ ಎಲಿಮಿನೇಟರ್ ಪಂದ್ಯ

ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಮೇ 24ರಂದು ಚೆನ್ನೈನಲ್ಲಿ ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಕ್ವಾಲಿಫೈಯರ್ 1 ರಲ್ಲಿ ಸೋಲುವ ತಂಡವನ್ನು ಎದುರಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+