RCB: ಸಿಎಸ್‌ಕೆ ಸೋಲಿಸಿದ ಬಳಿಕ ಬೆಂಗಳೂರಿಗೆ ಬಂದ ಆರ್‌ಸಿಬಿ; ಮುಂದಿನ ಪಂದ್ಯ ಯಾವಾಗ?

ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 50 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಶನಿವಾರ ಬೆಂಗಳೂರಿಗೆ ಆಗಮಿಸಿದೆ. ಮುಂದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾನುವಾರದಿಂದಲೇ ಸಿದ್ಧತೆ ಆರಂಭಿಸಲಿದೆ.

ಐಪಿಎಲ್ 2025ರ ಆವೃತ್ತಿಯ ಆರ್‌ಸಿಬಿ ತನ್ನ ಮೊದಲ ಎರಡು ಪಂದ್ಯಗಳನ್ನು ಹೊರಗಡೆ ಆಡಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆಡಿತ್ತು. ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಆರ್ ಸಿಬಿ ಬಳಿಕ ಅಲ್ಲಿಂದ ಚೆನ್ನೈಗೆ ಪ್ರಯಾಣ ಮಾಡಿತ್ತು.

Rcb team arrives bengaluru after defeat csk chennai ipl 2025

17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್ ಸಿಬಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ತಂಡದ ಬ್ಯಾಟಿಂಗ್, ಬೌಲಿಂಗ್ ಬಲಿಷ್ಠವಾಗಿದ್ದು ಪ್ಲೇಆಫ್ ತಲುಪುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿಕೊಂಡಿದೆ. ಆದರೂ ಆರ್ ಸಿಬಿ ತಂಡಕ್ಕೆ ಇನ್ನೂ ಒಂದು ಸವಾಲಿದ್ದು ಅದನ್ನು ಯಶಸ್ವಿಯಾಗಿ ಎದುರಿಸಬೇಕಿದೆ.

ತವರಿನಲ್ಲಿ ಬೇಕಿದೆ ಹೆಚ್ಚಿನ ಗೆಲುವು

ಐಪಿಎಲ್‌ ಇತಿಹಾಸದಲ್ಲಿ ತವರಿನಲ್ಲಿ ಗೆಲುವಿಗಿಂತ ಹೆಚ್ಚಿನ ಸೋಲು ಕಂಡಿರುವ ತಂಡ ಆರ್ ಸಿಬಿ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಗೆಲುವಿನ ಸರಾಸರಿ ಉತ್ತಮವಾಗಿಲ್ಲ. ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೆಲುವಿನ ಸರಾಸರಿ ಹೆಚ್ಚಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಆರ್ ಸಿಬಿ ಮುಂದಿನ ಎದುರಾಳಿ ಯಾರು?

ಮೊದಲ ಎರಡು ಪಂದ್ಯ ಗೆದ್ದಿರುವ ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 2ರಂದು ಬುಧವಾರ ಈ ಪಂದ್ಯ ನಡೆಯಲಿದೆ. ಗುಜರಾತ್ ಟೈಟಾನ್ಸ್ ಈಗಾಗಲೇ ಆಡಿದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡಿದೆ. ತಂಡದ ಬ್ಯಾಟಿಂಗ್ ಉತ್ತಮವಾಗಿದ್ದು, ಬೌಲಿಂಗ್‌ ನಿರೀಕ್ಷಿತ ಮಟ್ಟದಲ್ಲಿಲ್ಲ. ಎರಡೂ ತಂಡಗಳಿಗೆ ಹೋಲಿಕೆ ಮಾಡಿದರೆ ಆರ್ ಸಿಬಿ ಬಲಿಷ್ಠವಾಗಿ ಕಾಣುತ್ತಿದ್ದರೂ ಯಾವುದೇ ತಂಡವನ್ನು ಲಘುವಾಗಿ ಪರಿಗಣಿಸುವಂತಿಲ್ಲ.

ಏಪ್ರಿಲ್ 2ರಂದು ನಡೆಯುವ ಪಂದ್ಯಕ್ಕೆ ಈಗಾಗಲೇ ಎಲ್ಲಾ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಇಡೀ ಮೈದಾನದಲ್ಲಿ ಆರ್ ಸಿಬಿ ಅಭಿಮಾನಿಗಳು ಅಬ್ಬರಿಸಲು ಸಜ್ಜಾಗಿದ್ದಾರೆ. ಮೊದಲ ಎರಡು ಪಂದ್ಯಗಳು ಗೆದ್ದಿರುವುದು ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+