RCB Vs PBKS: ಧರ್ಮಶಾಲಾ ತಲುಪಿದ ಆರ್ಸಿಬಿ; ಪಂಜಾಬ್ ವಿರುದ್ಧ ಸವಾಲಿಗೆ ಸಿದ್ಧತೆ
ಐಪಿಎಲ್ 2024ರ ಆವೃತ್ತಿಯಲ್ಲಿ ಸತತ ಸೋಲುಗಳ ಬಳಿಕೆ ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ 10 ರಿಂದ 7ನೇ ಸ್ಥಾನಕ್ಕೆ ಜಿಗಿದಿದೆ. ಆಡಿರುವ 11 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 8 ಅಂಕಗಳನ್ನು ಹೊಂದಿದೆ.

ಇನ್ನು ಆರ್ ಸಿಬಿ ತಂಡಕ್ಕೆ 3 ಪಂದ್ಯಗಳು ಉಳಿದಿದ್ದು, ಎಲ್ಲಾ ಪಂದ್ಯಗಳನ್ನು ಗೆದ್ದು, ಅದೃಷ್ಟ ಕೈಹಿಡಿದರೆ ಮಾತ್ರ ಪ್ಲೇ ಆಫ್ ತಲುಪುವ ಅವಕಾಶ ಇದೆ. ಮುಂದಿನ ಮೂರು ಪಂದ್ಯಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಆರ್ಸಿಬಿ ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಧರ್ಮಶಾಲಾಗೆ ತಲುಪಿದೆ.
ಪಂಜಾಬ್ ವಿರುದ್ಧ ಪಂದ್ಯ
ಮೇ 9ರಂದು ಗುರುವಾರ ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ಸೆಣೆಸಲಿದ. ಧರ್ಮಶಾಲಾದ ಎಚ್‌ಪಿಸಿಎ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ.
ಧರ್ಮಶಾಲಾದಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಪಂಜಾಬ್ ಪ್ಲೇ ಆಫ್ ಹಾದಿ ಕೂಡ ಕಠಿಣವಾಗಿದೆ. ಮುಂದಿನ ಎಲ್ಲಾ ಪಂದ್ಯಗಳಲ್ಲಿ ಪಂಜಾಬ್ ಗೆಲ್ಲಬೇಕಿದೆ. ಆದ್ದರಿಂದ ಮೇ 9 ರಂದು ನಡೆಯಲಿರುವ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ.
ಹೈಸ್ಕೋರಿಂಗ್ ಪಂದ್ಯ
ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಹಕಾರಿಯಾಗಿರುವ ಕಾರಣ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು. ಆರಂಭದಲ್ಲಿ ವೇಗದ ಬೌಲರ್ ಗಳಿಗೆ ಸಹಕಾರಿಯಾಗಲಿದೆ. ಬ್ಯಾಟರ್ ಆರಂಭದ ಕೆಲವು ಎಸೆತಗಳಲ್ಲಿ ಎಚ್ಚರಿಕೆಯಿಂದ ಎದುರಿಸಿದರೆ ಬಳಿಕ ಸುಲಭವಾಗಿ ರನ್ ಗಳಿಸಬಹುದು.
ಎರಡೂ ತಂಡಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪಡೆ ಇರುವ ಕಾರಣ ಹೈಸ್ಕೋರಿಂಗ್ ಥ್ರಿಲ್ಲರ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಆರ್ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಯಶ್ ದಯಾಳ್, ಮೊಹಮ್ಮದ್ ಸಿರಾಜ್.
ಪಂಜಾಬ್ ಕಿಂಗ್ಸ್: ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಸ್ಯಾಮ್ ಕರ್ರಾನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್.












Click it and Unblock the Notifications