ಆರ್‌ಸಿಬಿ ಕಾಲ್ತುಳಿತ ಪ್ರಕರಣ: 3 ತಿಂಗಳ ಬಳಿಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭಾವುಕ ಸಂದೇಶ: ಭಾರೀ ವೈರಲ್
Virat Kohli Instagram Poster Viral: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು 18 ವರ್ಷಗಳ ಬಳಿಕ ಮೊದಲ ಟ್ರೋಫಿಗೆ ಮುತ್ತಿಟ್ಟಿತು. ಈ ಹಿನ್ನೆಲೆ ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಾಂಚೈಸಿಯು ಇತ್ತೀಚೆಗಷ್ಟೇ ವಿಶೇಷ ಸಂದೇಶದ ಜೊತೆ 25,00,000 ರೂಪಾಯಿ ಆರ್ಥಿಕ ನೆರವು ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭಾವುಕ ಸಂದೇಶವೊಂದನ್ನು ರವಾನಿಸಿದ್ದಾರೆ.
ಐಪಿಎಲ್ 18ನೇ ಆವೃತ್ತಿಯ ಫೈನಲ್ ಪಂದ್ಯ ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಲ್ಲಿ ನಡೆದಿದ್ದು, ಈ ವೇಳೆ ಆರ್‌ಸಿಬಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಆ ದಿನ ಬರೀ ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶವೇ ರಾಯಲ್ ತಂಡದ ಗೆಲುವನ್ನ ಸಂಭ್ರಮಿಸಿತು. ಆದರೆ, ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟಿಕೊಳ್ಳಲಾಗಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದರು. ಇದು ಆರ್‌ಸಿಬಿ ಪಾಲಿಗೆ ಕಪ್ಪುಚುಕ್ಕೆಯಾಗಿ ಉಳಿದುಬಿಟ್ಟಿತು.

ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ಕೇರ್ಸ್ ಎಂಬ ಯೋಜನೆಯನ್ನು ಆರಂಭಿಸಿದ್ದು, ಇದರಡಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ವಿಶೇಷ ಸಂದೇಶದ ಜೊತೆಗೆ ತಲಾ 25,00,000 ರೂಪಾಯಿ ಘೋಷಣೆ ಮಾಡಿತು. ಇದರ ಬೆನ್ನಲ್ಲೇ ಇದೀಗ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಮೂರು ತಿಂಗಳ ಬಳಿಕ ಅಭಿಮಾನಿಗಳಿಗೆ ಭಾವುಕ ಸಂದೇಶದವನ್ನು ರವಾನೆ ಮಾಡಿದ್ದಾರೆ. ಇದು ಇದೀಗ ಭಾರೀ ವೈರಲ್ ಆಗುತ್ತಿದೆ. ಹಾಗಾದ್ರೆ ಅದರಲ್ಲೇನಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ಗಮನಿಸಿ.
ಕಾಲ್ತುಳಿತ ದುರಂತ ಆರ್‌ಸಿಬಿ ಪಾಲಿಗೆ ಜೂನ್ 4ರಂದು ಸಂಭವಿಸಿದ ಕಾಲ್ತುಳಿತ ದುರಂತ ಕಪ್ಪುಚುಕ್ಕೆಯಾಗಿ ಉಳಿದುಬಿಟ್ಟಿತು.
ಈ ದುರಂತ ಸಂಬಂಧ ವಿರಾಟ್ ಕೊಹ್ಲಿ ಕೂಡ ತಮ್ಸ್ ಇನ್ಸ್ಟಾಗ್ರಾಂನಲ್ಲಿ ಅಭಿಮಾನಿಗಳಿಗೆ ಭಾವುಕ ಸಂದೇಶವನ್ನು ರವಾನಿಸಿದ್ದಾರೆ. ಜೂನ್ 4ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣ ವಆಗಿರಬೇಕಾಗಿತ್ತು. ಆದರೆ, ದುರಂತವಾಗಿ ಮಾರ್ಪಟ್ಟಿತು ಎಂದು ಭಾವುಕ ಸಂದೇಶವನ್ನು ಬರೆದುಕೊಂಡಿದ್ದಾರೆ.
ಮೃತಪಟ್ಟವರ ಕುಟುಂಬಗಳಿಗಾಗಿ ಹಾಗೂ ಗಾಯಗೊಂಡ ನಮ್ಮ ಅಭಿಮಾನಿಗಳ ಬಗ್ಗೆ ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟ ಈಗ ನಮ್ಮ ಕಥೆಯ ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯೋಣ ಎಂದು ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಆರ್ಸಿಬಯು ತನ್ನ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಭಾರೀ ವೈರಲ್ ಆಗುತ್ತಿದೆ.
ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಆರ್‌ಸಿಬಿ ಕೇರ್ಸ್ ಯೋಜನೆಯಡಿಯಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25,00,000 ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಿದೆ. ಅಲ್ಲದೆ, ಆರ್‌ಸಿಬಿ ಕೇರ್ಸ್ ಅಡಿಯಲ್ಲಿ ಸಾಮಾಜಿಕ ಕಾರ್ಯಕ್ರಮಗಳ ಜಾರಿಗೆ ನಿರ್ಧರಿಸಿದೆ. ಈ ಅಭಿಯಾನಕ್ಕಾಗಿ ಆರ್ಸಿಬಿ 6 ಅಂಶಗಳನ್ನು ಒಳಗೊಂಡ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಆರ್‌ಸಿಬಿ ಮಹತ್ವದ ಯೋಜನೆಗಳು
* ಕೇವಲ ಆರ್ಥಿಕ ನರವು ಅಷ್ಟೇ ಅಲ್ಲದೆ, ಸಂತ್ರಸ್ತ ಕುಟುಂಬಗಳಿಗೆ ತ್ವರಿತ, ಪಾರದರ್ಶಕ ಮತ್ತು ಮಾನವೀಯ ರೀತಿಯಲ್ಲಿ ಸಹಾಯವನ್ನು ತಲುಪಿಸುವುದು.
* ಉತ್ತಮ ಜನಸಂದಣಿ ನಿರ್ವಹಣಾ ಪ್ರೋಟೋಕಾಲ್‌ಗಳನ್ನು ವಿನ್ಯಾಸಗೊಳಿಸಲು ಕ್ರೀಡಾಂಗಣದ ಅಧಿಕಾರಿಗಳು, ಕ್ರೀಡಾ ಸಂಸ್ಥೆಗಳು ಮತ್ತು ಲೀಗ್ ಪಾಲುದಾರರೊಂದಿಗೆ ನಿಕಟವಾಗಿ ಸಂಪರ್ಕ ಹೊಂದುವುದು. ಜೊತೆಗೆ ಅವರೊಂದಿಗೆ ಕೆಲಸ ಮಾಡುವುದು.
* ಗ್ರಾಮೀಣ ಕರ್ನಾಟಕದಲ್ಲಿ, ವಿಶೇಷವಾಗಿ ಸಿದ್ದಿ ಸಮುದಾಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭ ಮಾಡುವುದು.
* ಅಭಿಮಾನಿ-ಸುರಕ್ಷತಾ ಲೆಕ್ಕಪರಿಶೋಧನಾ ಚೌಕಟ್ಟನ್ನು ರಚನೆ ಮಾಡಲಾಗುವುದು. ಅಲ್ಲದೆ, ಜನಸಂದಣಿ ನಿರ್ವಹಣೆ ಮತ್ತು ತುರ್ತು ಪ್ರತಿಕ್ರಿಯೆಯ ಕುರಿತು ಸ್ಥಳೀಯ ತಂಡಗಳಿಗೆ ತರಬೇತಿ ನೀಡುವುದು.
* ಆರ್‌ಸಿಬಿಯ ಅತ್ಯಂತ ಉತ್ಸಾಹಭರಿತ ಅಭಿಮಾನಿಗಳ ಕಥೆಗಳು ಮತ್ತು ಹೆಸರುಗಳನ್ನು ಗೌರವಿಸಲು ಬೆಂಗಳೂರಿನಲ್ಲಿ ವಿಶೇಷ ಸ್ಮಾರಕ ಸ್ಥಳವನ್ನು ನಿರ್ಮಾಣ ಮಾಡಲಾಗುವುದು.
* ಈ ತಂಡದ ಮೇಲಿನ ನಂಬಿಕೆ ಕ್ರೀಡಾಂಗಣಗಳಿಗೆ ಮಾತ್ರ ಸೀಮಿತ ಆಗಿರಬಾರದು. ಕ್ರೀಡಾಂಗಣಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸಿ, ಸ್ಥಳೀಯ ಪ್ರತಿಭೆಗಳನ್ನು ಪೋಷಿಸಿ ಮತ್ತು ಮುಂದಿನ ಪೀಳಿಗೆಯ ಕ್ರೀಡಾ ವೃತ್ತಿಪರರನ್ನು ಬೆಂಬಲಿಸುವುದು.
ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಯೋಜನೆಗಳನ್ನು ರೂಪಿಸಲು ಮುಂದಾಗಿದೆ. ಇದನ್ನು ಕೆಲವರು ಪ್ರಚಾರಕ್ಕಾಗಿ ಅಂತಲೂ ಹೇಳುವವರಿದ್ದಾರೆ. ಆದರೆ, ಮತ್ತೊಂದು ದೃಷ್ಟಿಯಿಂದ ನೋಡೋದಾದ್ರೆ, ಇದರಿಂದ ತುಂಬಾ ಪ್ರಯೋಜನಾಕಾರಿಯಾಗಲಿದೆ. ಈ ಮೂಲಕ ಆರ್‌ಸಿಬಿ ಮಹತ್ವದ ಕಾರ್ಯಕ್ಕೆ ಮುಂದಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಐಪಿಎಲ್ ಇತಿಹಾಸದಲ್ಲೇ ಆರ್‌ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications