RCB: ವಿರಾಟ್ ಕೊಹ್ಲಿ ಅರೆಸ್ಟ್ ಹಾಗೂ ಆರ್‌ಸಿಬಿ ಬ್ಯಾನ್ ಸಾಧ್ಯತೆ..
Virat Kohli: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು 17 ವರ್ಷಗಳ ಬಳಿಕ ಮೊದಲ ಟ್ರೋಫಿಗೆ ಮುತ್ತಿಟ್ಟಿತು. ಅಂದಿನ ದಿನ ಇಡೀ ದೇಶವೇ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಮಿಂದೆದ್ದಿತ್ತು. ಆದರೆ, ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಚಿನ್ನಸ್ವಾಮಿ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ವೊಂದು ಸಿಕ್ಕಿದ್ದು, ಕೊಹ್ಲಿಗೆ ದೊಡ್ಡ ಭೀತಿ ಎದುರಾಗಿದೆ.
ಐಪಿಎಲ್ 2025 ಫೈನಲ್ ಪಂದ್ಯ ಜೂನ್ 3ರಂದು ಅಹಮದಬಾದ್‌ನಲ್ಲಿನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ವೇಳೆ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದು ಮೊಟ್ಟ ಮೊದಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು. ಇದೇ ಖುಷಿಯಲ್ಲಿ ಮಾರನೇ ದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಹಮ್ಮಿಕೊಂಡಿದ್ದು, ಈ ವೇಳೆ ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಈ ಪ್ರಕರಣ ಹೊಸ ತಿರುವು ಪಡೆದಿದೆ.

ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ತುಂಬಾ ಬೆಳವಣಿಗೆಗಳಾದವು, ಅಲ್ಲದೆ ಈಗಲೂ ಆಗುತ್ತಲಿವೆ. ಈ ಸಂಬಂಧ ಮೊದಲಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೇ ವೇಳೆ ಕೆಎಸ್‌ಸಿಎ, ಆರ್‌ಸಿಬಿ ವಿರುದ್ಧ ಎಫ್‌ಐಆರ್ ಅನ್ನು ಕೂಡ ದಾಖಲಿಸಿತ್ತು. ಅಲ್ಲದೆ, ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿದ್ದು, ಇದೀಗ ತನಿಖೆ ಮುಗಿಸಿ ಶಾಕಿಂಗ್ ವರದಿ ಸಿದ್ಧಪಡಿಸಿದೆ.
ಕಾಲ್ತುಳಿತ ದುರಂತ ಸಂಬಂಧ ಸಿಐಡಿ ಈಗಾಗಲೇ ಬಹುತೇಕ ತನಿಖೆ ಮುಗಿಸಿದೆ. ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗಾಗಿ ತಂಡದ ಮ್ಯಾನೇಜ್‌ಮೆಂಟ್ ತೆಗೆದುಕೊಂಡ ಆತುರದ ನಿರ್ಧಾರವೇ 11 ಜನರ ಸಾವಿಗೆ ಕಾರಣ ಎಂದು ವರದಿ ಸಿದ್ಧಪಡಿಸಿದೆ.
ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 3 ಎಫ್‌ಐಆರ್‌ಗಳ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಕಾಲ್ತುಳಿತಕ್ಕೆ ಕಾರಣವಾದ ಪ್ರಮುಖ ಅಂಶಗಳನ್ನ ಪತ್ತೆಹಚ್ಚಿದೆ. ಸಾವಿರಾರು ವಿಡಿಯೋಗಳು, ಸಿಸಿಟಿವಿ ಕ್ಯಾಮೆರಾ, ಚಿನ್ನಸ್ವಾಮಿ ಸ್ಟೇಡಿಯಂನ 13 ಗೇಟ್‌ಗಳಲ್ಲಿ ಅವ್ಯವಸ್ಥೆ, ಪೊಲೀಸರ ನಿಯೋಜನೆ, ನೂಕುನುಗ್ಗಲು ಉಂಟಾಗಲು ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಿ ಸಿಐಡಿ ವರದಿ ಸಿದ್ಧಪಡಿಸಿದೆ.
ಸಿಐಡಿ ವರದಿಯಲ್ಲಿ ಇರುವುದೇನು?: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಿಇಓ ರಾಜೇಶ್ ಮೆನನ್, ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆಯಿಂದ ಕಾರ್ಯಕ್ರಮ ಆಯೋಜನೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ವಿರಾಟ್ ಕೊಹ್ಲಿಯ ಕಾರಣ ನೀಡಿ ಅವರ ಆಪ್ತ ನಿಖಿಲ್ ಸೋಸ್ಲೆ ಕೆಎಸ್‌ಸಿಎ ಮೇಲೆ ಅತಿಯಾದ ಒತ್ತಡ ಹಾಕಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು ಎಂದು ತಿಳಿದುಬಂದಿದೆ.
ವಿಜಯಯೋತ್ಸಚ ಕಾರ್ಯಕ್ರಮ ಮುಂದೂಡುವ ಬಗ್ಗೆ ಬಗ್ಗೆ ಪೊಲೀಸ್ ಇಲಾಖೆ ಮತ್ತು ಕೆಎಸ್‌ಸಿಎ ಅಭಿಪ್ರಾಯವಾಗಿತ್ತು. ಆದರೆ,. ವಿರಾಟ್ ಕೊಹ್ಲಿ ಕಾರಣ ಹೇಳಿ ಜೂನ್ 4ರಂದೇ ಕಾರ್ಯಕ್ರಮ ಆಯೋಜಿಸಬೇಕೆಂದು ನಿಖಿಲ್ ಸೋಸಲೆ ಒತ್ತಡ ಹೇರಿದ್ದರು. ಕೊಹ್ಲಿ ಯುಕೆಗೆ ಹೋಗಬೇಕು, ಮುಂದೂಡಿಕೆ ಮಾಡಿರೆ ಅವರು ಬರುವುದಿಲ್ಲ ಎಂದಿದ್ದರು. ಆದ್ದರಿಂದ ನಿಖಿಲ್ ಸೋಸಲೆ ಒತ್ತಡಕ್ಕೆ ಕಾರ್ಯಕ್ರಮ ಆಯೋಜನೆ ನಡೆದಿತ್ತು ಎಂದು ತಿಳಿದುಬಂದಿದೆ.
ಉಚಿತ ಟಿಕೆಟ್ ಘೋಷಣೆಯೂ ಕೂಡ ದುರಂತಕ್ಕೆ ಒಂದು ಕಾರಣ ಎಂದು ಸಿಐಡಿ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಟಿಕೆಟ್ ಗೊಂದಲ, ಟ್ವೀಟ್ ಹಿಂದೆಯೂ ನಿಖಿಲ್ ಸೋಸಲೆ ಕಾರಣ. ಟ್ವೀಟ್‌ನಿಂದಲೇ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಸೇರಿರುವುದು ತನಿಖೆಯಲ್ಲಿ ಗೊತ್ತಾಗಿದೆ.
ಪೊಲೀಸ್ ಬಂದೋಬಸ್ತ್‌ನಲ್ಲಿ ಗೊಂದಲ ಉಂಟಾಗಿತ್ತು. ಕಾಲ್ತುಳಿತದ ವೇಳೆ ಗೇಟ್‌ಗಳ ಬಳಿ ಪೊಲೀಸರೇ ಇರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹೆಚ್ಚಿನ ಬಂದೋಬಸ್ತ್ ಆಗಿರಲಿಲ್ಲ. ವಿಧಾನಸೌಧದ ಬಳಿಯೇ ಪೊಲೀಸ್ ಇಲಾಖೆ ಹೆಚ್ಚು ಗಮನಹರಿಸಿತ್ತು. ಕೆಎಸ್‌ಆರ್‌ಪಿ ಸಿಬ್ಬಂದಿಗೂ ಸರಿಯಾದ ಸಂದೇಶ ನೀಡಿರಲಿಲ್ಲ ಎಂದು ತಿಳಿದುಬಂದಿದೆ.
ಐಪಿಎಲ್ ಪಂದ್ಯದ ವೇಳೆಯಂತೆಯೇ ಕೆಎಸ್‌ಆರ್‌ಪಿಗೆ ಸಂದೇಶ ನೀಡಲಾಗಿತ್ತು. ಲಕ್ಷಾಂತರ ಜನ ಸೇರುವ ಬಗ್ಗೆ ಸಿಬ್ಬಂದಿ ಗಸ್ತು ಹಾಗೂ ಬಂದೋಬಸ್ತ್ ಬಗ್ಗೆ ಕೆಎಸ್‌ಆರ್‌ಪಿ ಸಿಬ್ಬಂದಿಗೂ ಸೂಚನೆ ನೀಡಿರಲಿಲ್ಲ ಎಂದು ವರದಿಯಿಂದ ತಿಳಿದುಬಂದಿದೆ. ಸದ್ಯ ಈ ಎಲ್ಲಾ ಅಂಶಗಳನ್ನು ಸಿಐಡಿ ವರದಿಯಲ್ಲಿ ದಾಖಲಿಸಿಕೊಂಡಿದೆ. ಕೆಲವೇ ದಿನಗಳಲ್ಲಿ ಉಳಿದ ತನಿಖೆ ಕಂಪ್ಲೀಟ್ ಮಾಡಿ ಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಲಿದೆ. ಈ ವೇಳೆ ಸಿಬಿಐ ತನಿಖೆಯಂತೆ ಕೋರ್ಟ್‌ನಲ್ಲಿ ಆದೇಶ ಹೊರಬಿದ್ದರೆ, ಆರ್‌ಸಿಬಿ ತಂಡ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸ್ಲೆ ಹಾಗೂ ಸಿಇಓ ಅರೆಸ್ಟ್ ಆಗುವ ಸಾಧ್ಯತೆಯಿರುತ್ತದೆ. ಅಷ್ಟೇ ಅಲ್ಲದೆ, ಆರ್‌ಸಿಬಿ ತಂಡವನ್ನು ಬ್ಯಾನ್ ಮಾಡುವ ಮಟ್ಟಕ್ಕೂ ಹೋಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್‌ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್‌ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications