RCB vs CSK: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ; ಪಕ್ಕಾ ಪ್ಲೇಯಿಂಗ್ 11 ಹೀಗಿದೆ ನೋಡಿ
RCB vs CSK: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಸಿಎಸ್‌ಕೆ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆಯೇ ಆತಿಥೇಯ ಆರ್‌ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಈಗಾಗಲೇ ಹಾಲಿ ಚಾಂಪಿಯನ್ ಆರ್‌ಸಿಬಿ ತನ್ನ ಮೊದಲ ಪಂದ್ಯದಲ್ಲಿ ಜಯದೊಂದಿಗೆ ಶುಭಾರಂಭ ಮಾಡಿದ್ದರೆ, ಸಿಎಸ್‌ಕೆ ಈ ಪಂದ್ಯದ ಮೂಲಕ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ದಕ್ಷಿಣ ಭಾರತದ ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

ಆರ್‌ಸಿಬಿ-ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ
ವೇಳಾಪಟ್ಟಿಯ ಅನ್ವಯ ಏಪ್ರಿಲ್ 5ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ 11ನೇ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ, ರಜತ್ ಪಾಟಿದಾರ್ ನೇತೃತ್ವದ ಹಾಲಿ ಚಾಂಪಿಯನ್ ಆರ್‌ಸಿಬಿ ತಂಡ ತವರಿನ ಪ್ರೇಕ್ಷಕರ ಮುಂದೆ ಮೊದಲು ಬ್ಯಾಟಿಂಗ್ ನಡೆಸಲಿದೆ. ಸಿಎಸ್‌ಕೆ ತಂಡದ ವಿದೇಶಿ ಆಟಗಾರರ ತಂತ್ರ ಆರ್ಸಿಬಿಯನ್ನು ಅವರದೇ ಮೈದಾನದಲ್ಲಿ ಕಟ್ಟಿಹಾಕಲು ಹೊಸ ತಂತ್ರದೊಂದಿಗೆ ಕಣಕ್ಕಿಳಿದಿದೆ. ಇಂದಿನ ಪಂದ್ಯದಲ್ಲಿ ಸಿಎಸ್‌ಕೆ ಮೂವರು ಪ್ರಮುಖ ವಿದೇಶಿ ಬೌಲರ್‌ಗಳಾದ
ಜೇಮಿ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ ಅವರನ್ನು ಕಣಕ್ಕಿಳಿಸಿದೆ.
ಉಭಯ ತಂಡಗಳ ನಡುವೆ ರೋಚಕ ಪಂದ್ಯ
ಆರ್‌ಸಿಬಿ ತನ್ನ ಗೆಲುವಿನ ಓಟವನ್ನು ಮುಂದುವರಿಸುವ ಹುಮ್ಮಸ್ಸಿನಲ್ಲಿದ್ದರೆ, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ತಂಡವು ಈ ಪಂದ್ಯದ ಮೂಲಕ ಟೂರ್ನಿಯಲ್ಲಿ ಮೊದಲ ಜಯ ದಾಖಲಿಸುವ ತವಕದಲ್ಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ರನ್ ಮಳೆ ಹರಿಯುವ ನಿರೀಕ್ಷೆಯಿದ್ದು, ಉಭಯ ತಂಡಗಳ ನಡುವೆ ರೋಚಕ ಹೋರಾಟ ನಿಶ್ಚಿತವಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.
ಆರ್‌ಸಿಬಿ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೇಕಬ್ ಡಫಿ.












Click it and Unblock the Notifications