RCB vs CSK: ಆರ್‌ಸಿಬಿ vs ಸಿಎಸ್‌ಕೆ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ?

ಐಪಿಎಲ್ 2025ರ ಆವೃತ್ತಿಯ ಪ್ಲೇಆಫ್‌ ರೇಸ್‌ನಿಂದಲೇ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ. ಆರ್ ಸಿಬಿ ಸಿಎಸ್‌ಕೆ ವಿರುದ್ಧ ಗೆದ್ದು ಪ್ಲೇಆಫ್‌ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ, ಗೆಲುವಿನ ಲಯದಲ್ಲಿರುವ ಆರ್ ಸಿಬಿಗೆ ಶಾಕ್ ಕೊಡಲು ಸಜ್ಜಾಗಿದೆ ಸಿಎಸ್‌ಕೆ.

ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು ಶನಿವಾರ ನಡೆಯುವ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಶನಿವಾರ ಕೂಡ ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಈ ಮಳೆ ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆ ಕಡಿಮೆ ಇದೆ.

Rcb vs csk match in bengaluru weather ipl 2025

ಟಾಪ್‌ 2 ಮೇಲೆ ಕಣ್ಣಿಟ್ಟಿರುವ ಆರ್ ಸಿಬಿ

ಆರ್ ಸಿಬಿ ಸದ್ಯ ಆಡಿರುವ 10 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಉಳಿದ 4 ಪಂದ್ಯಗಳಲ್ಲಿ ಕನಿಷ್ಠ 3 ಪಂದ್ಯ ಗೆದ್ದರೂ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿ ಒಂದನ್ನು ಪಡೆಯುವುದು ಬಹುತೇಕ ಖಚಿತವಾಗಲಿದೆ.

ಇದರಲ್ಲಿ ತವರಿನಲ್ಲಿ ಮೂರು ಪಂದ್ಯ ಆಡಬೇಕಿದ್ದು, ಉತ್ತಮ ಫಾರ್ಮ್‌ನಲ್ಲಿಲ್ಲದ ಸಿಎಸ್‌ಕೆ ವಿರುದ್ಧ ಗೆದ್ದರೆ ಪ್ಲೇಆಫ್‌ ಹಾದಿ ಮತ್ತಷ್ಟು ಸುಗಮವಾಗಲಿದೆ. ಸಿಎಸ್‌ಕೆ ಈ ವರ್ಷ ಕಳಪೆ ಪ್ರದರ್ಶನ ನೀಡುತ್ತಿದೆ. ಆರ್ ಸಿಬಿ ಎಲ್ಲಾ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಮತ್ತೊಮ್ಮೆ ಸಿಎಸ್‌ಕೆ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.

ಸಿಎಸ್‌ಕೆ ಕೊನೆಯ ಪಂದ್ಯದಲ್ಲಿ ಹೀನಾಯ ಸೋಲಿನ ಬಳಿಕ ಆರ್ ಸಿಬಿ ವಿರುದ್ಧ ಆಡಲು ಬೆಂಗಳೂರಿಗೆ ಆಗಮಿಸಿದೆ. ಆರ್ ಸಿಬಿ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನ ಬಳಿಕ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದ ಫಿಲ್ ಸಾಲ್ಟ್ ಸದ್ಯ ಫಿಟ್ ಆಗಿದ್ದು ಸಿಎಸ್‌ಕೆ ವಿರುದ್ಧ ಕಣಕ್ಕಿಳಿಯುವುದು ಖಚಿತವಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ಸಿಎಸ್‌ಕೆ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಕಾರಣ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆ ಇದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಆರ್ ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಸಿಎಸ್‌ಕೆ: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ದೀಪಕ್ ಹೂಡಾ, ಸ್ಯಾಮ್ ಕರ್ರಾನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಎಂಎಸ್ ಧೋನಿ (ನಾಯಕ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಶ ಪತಿರಾನ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+