RCB vs CSK: ಕೊನೆಯ ಬಾರಿ ವಿರಾಟ್ ಕೊಹ್ಲಿ- ಎಂಎಸ್ ಧೋನಿ ಮುಖಾಮುಖಿ?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಸೆಣೆಸಲು ಸಜ್ಜಾಗಿದೆ. ಐಪಿಎಲ್‌ನ ಬದ್ದವೈರಿಗಳು ಎಂದೇ ಪರಿಗಣಿಸುವ ಈ ಪಂದ್ಯ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಕ್ರಿಕೆಟ್ ಜಗತ್ತಿನ ಇಬ್ಬರು ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಮುಖಾಮುಖಿಯಾಗುತ್ತಿದ್ದು ಪಂದ್ಯವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ.

ಸಿಎಸ್‌ಕೆ ತಂಡ ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿದೆ. ಆರ್ ಸಿಬಿ ಅಗ್ರ ಎರಡು ಸ್ಥಾನದಲ್ಲಿ ಪ್ಲೇಆಫ್‌ ಪ್ರವೇಶಿಸಲು ಕಾಯುತ್ತಿದೆ. ಸಿಎಸ್‌ಕೆ ಈ ಬಾರಿ ತೀರಾ ಕಳಪೆ ಪ್ರದರ್ಶನ ನೀಡಿದ್ದು ಪಂದ್ಯಾವಳಿಯಿಂದ ಹೊರಬಿದ್ದಿದೆ. ಈಗ ಯುವ ಆಟಗಾರರಿಗೆ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆ ಇದೆ.

Rcb vs csk virat kohli and ms dhoni last time faceoff

ವಿರಾಟ್- ಧೋನಿ ಕೊನೆಯ ಬಾರಿ ಮುಖಾಮುಖಿ

ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಐಪಿಎಲ್‌ ಪಂದ್ಯದಲ್ಲಿ ಇದೇ ಕೊನೆಯ ಬಾರಿ ಮುಖಾಮುಖಿಯಾಗುವ ಸಾಧ್ಯತೆ ಇದೆ. ಮುಂದಿನ ಆವೃತ್ತಿಯಲ್ಲಿ ಎಂಎಸ್ ಧೋನಿ ಆಡುವ ಸಾಧ್ಯತೆ ತೀರಾ ಕಡಿಮೆ ಇರುವ ಕಾರಣ ಇಬ್ಬರು ದಿಗ್ಗಜರನ್ನು ಮೈದಾನದಲ್ಲಿ ನೋಡುವುದು ಇದೇ ಕೊನೆಯ ಬಾರಿ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದಾರೆ.

ಈ ಆವೃತ್ತಿಯಲ್ಲಿ ಈಗಾಗಲೇ ಆರ್ ಸಿಬಿ ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ 50 ರನ್‌ಗಳ ಭರ್ಜರಿ ಗೆಲುವ ಸಾಧಿಸುವ ಮೂಲಕ 17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧ ಗೆದ್ದ ಸಾಧನೆ ಮಾಡಿದೆ.

ಕಳೆದ ಆವೃತ್ತಿಯಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ಸಿಎಸ್‌ಕೆ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ ತಲುಪಿತ್ತು. ಈಗ ಸಿಎಸ್‌ಕೆ ಪ್ಲೇಆಫ್‌ ತಲುಪಲು ಅವಕಾಶವಿಲ್ಲದ ಕಾರಣ ಆರ್ ಸಿಬಿ ಪ್ಲೇಆಫ್‌ ಹಾದಿಯನ್ನು ಕಷ್ಟವಾಗಿಸುವ ಅವಕಾಶವಿದೆ.

ಆದರೆ ಆರ್ ಸಿಬಿ ಬಲಿಷ್ಠವಾಗಿದ್ದು ತವರಿನಲ್ಲಿ ಈಗಾಗಲೇ ಗೆಲುವು ಕಂಡಿರುವ ಕಾರಣ, ಸಿಎಸ್‌ಕೆ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದು ಈಗಾಗಲೇ 6 ಅರ್ಧಶತಕ ಗಳಿಸಿದ್ದಾರೆ. ಮತ್ತೊಮ್ಮೆ ಕೊಹ್ಲಿ ಮಿಂಚಿದರೆ ಆರ್ ಸಿಬಿ ಗೆಲುವು ಸುಲಭವಾಗಲಿದೆ. ಜ್ವರದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹೊರಗುಳಿದಿದ್ದ ಫಿಲ್ ಸಾಲ್ಟ್ ಸಿಎಸ್‌ಕೆ ವಿರುದ್ಧ ಕಣಕ್ಕಿಳಿಯುವುದು ಖಚಿತವಾಗಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಆರ್ ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಸಿಎಸ್‌ಕೆ: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ದೀಪಕ್ ಹೂಡಾ, ಸ್ಯಾಮ್ ಕರ್ರಾನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಎಂಎಸ್ ಧೋನಿ (ನಾಯಕ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಶ ಪತಿರಾನ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+