RCB Vs CSK: ಧೋನಿ ಕೋಟೆಯಲ್ಲಿ ಗೆಲುವಿನ ಬಾವುಟ ಹಾರಿಸುತ್ತಾ ಆರ್‌ಸಿಬಿ?
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಇನ್ನು ಎರಡೇ ದಿನದಲ್ಲೇ ಕ್ರಿಕೆಟ್ ಹಬ್ಬ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸೆಣೆಸಲಿದೆ.
ಹಾಲಿ ಚಾಂಪಿಯನ್ ಸಿಎಸ್‌ಕೆ ತಂಡ ಧೋನಿ ಸಾರಥ್ಯದಲ್ಲಿ ಸೆಣೆಸಲು ಸಜ್ಜಾದರೆ, ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ಗೆಲುವಿನ ಮೂಲಕ ಅಭಿಯಾನ ಆರಂಭಿಸಲು ಸಜ್ಜಾಗಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಹಾಲಿ ಚಾಂಪಿಯನ್ ಸಿಎಸ್‌ಕೆ ತಂಡ ಗೆಲುವಿನ ಅಭಿಯಾನ ಮುಂದುವರೆಸುವ ವಿಶ್ವಾಸದಲ್ಲಿದ್ದರೆ, ಧೋನಿ ಪಡೆಗೆ ಶಾಕ್ ಕೊಡಲು ಆರ್ ಸಿಬಿ ತಂಡ ಈಗಾಗಲೇ ಚೆನ್ನೈ ತಲುಪಿದೆ.
2008ರ ಬಳಿಕ ಇಲ್ಲಿ ಆರ್‌ಸಿಬಿ ಗೆದ್ದಿಲ್ಲ!
ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಉತ್ತಮ ದಾಖಲೆ ಹೊಂದಿಲ್ಲ. ಚಿದಂಬರಂ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ಆಡಿರುವ 8 ಪಂದ್ಯಗಳಲ್ಲಿ ಆರ್‌ಸಿಬಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. 2008ರಲ್ಲಿ ಇಲ್ಲಿ ಆರ್‌ಸಿಬಿ ಗೆದ್ದಿದ್ದು ಬಿಟ್ಟರೆ ಇದುವರೆಗೂ ಒಮ್ಮೆಯೂ ಗೆಲುವು ಸಾಧಿಸಿಲ್ಲ.
ಸಿಎಸ್‌ಕೆ ಮತ್ತು ಆರ್‌ಸಿಬಿ ಈವರೆಗೂ ಐಪಿಎಲ್‌ನಲ್ಲಿ 31 ಪಂದ್ಯಗಳನ್ನಾಡಿದ್ದು, ಸಿಎಸ್‌ಕೆ 20 ಪಂದ್ಯಗಳಲ್ಲಿ ಗೆದ್ದರೆ, ಆರ್‌ಸಿಬಿ ಕೇವಲ 10 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಯಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಸಿಎಸ್‌ಕೆ 8 ರನ್‌ಗಳಿಂದ ಗೆಲುವು ಸಾಧಿಸಿತ್ತು.
ತಂಡಗಳ ಬಲಾಬಲ ಹೇಗಿದೆ?
ಈ ಬಾರಿ ಎರಡೂ ತಂಡಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಸಿಎಸ್‌ಕೆ ತಂಡದಲ್ಲಿ ರಚಿನ್ ರವೀಂದ್ರ, ಡೇರಿಲ್ ಮಿಚೆಲ್ ಅವರಂತಹ ಆಟಗಾರರು ಸೇರಿಕೊಂಡಿದ್ದಾರೆ. ಎಂಎಸ್ ಧೋನಿ ಕೂಡ ಸಂಪೂರ್ಣವಾಗಿ ಫಿಟ್ ಆಗಿದ್ದು ತಂಡದ ಬಲವನ್ನು ಹೆಚ್ಚಿಸಿದೆ.
ಇನ್ನು ಆರ್ ಸಿಬಿ ಕೂಡ ಈ ಬಾರಿ ಬಲಿಷ್ಠವಾಗಿದೆ. ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಬಂದಿರುವುದು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಶಕ್ತಿ ತುಂಬಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಕೊರತೆ ಇದೆ ಎನಿಸಿದರೂ, ಹಿಮಾಂಶು ಶರ್ಮಾ, ಮ್ಯಾಕ್ಸ್‌ವೆಲ್, ಕರಣ್ ಶರ್ಮಾ ತಂಡದ ಸ್ಪಿನ್ ವಿಭಾಗದ ಅಸ್ತ್ರವಾಗಿದ್ದಾರೆ. ಕೊಹ್ಲಿ, ಫಾಫ್ ಡು ಪ್ಲೆಸಿಸ್, ಗ್ರೀನ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಮ್ಯಾಕ್ಸ್‌ವೆಲ್ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ.
ಮಾರ್ಚ್ 22ರಂದು ಶುಕ್ರವಾರ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಉಭಯ ತಂಡಗಳು
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.
ಸಿಎಸ್‌ಕೆ: ಎಂಎಸ್ ಧೋನಿ (ನಾಯಕ), ಮೊಯಿನ್ ಅಲಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿನ್ತುಕಿ, ನಿಶಾಂತ್ ಸಿಂಗ್ , ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವೆಲ್ಲಿ.












Click it and Unblock the Notifications