RCB Vs CSK: ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ - ಸಿಎಸ್‌ಕೆ ಮುಖಾಮುಕಿ; ಪ್ಲೇಯಿಂಗ್ XI, ಪಿಚ್ ವರದಿ, ನೇರಪ್ರಸಾರ ವಿವರ
ಐಪಿಎಲ್ 2024 ಮಹಾ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿರುವುದು ಪಂದ್ಯಾವಳಿಯ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇಂದು (ಶುಕ್ರವಾರ) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಐಪಿಎಲ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 8 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದೆ.
ಮೊದಲ ಪಂದ್ಯಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ಎಂಎಸ್ ಧೋನಿ ಶಾಕ್ ಕೊಟ್ಟಿದ್ದಾರೆ. ಕೊನೆ ಕ್ಷಣದಲ್ಲಿ ನಾಯಕತ್ವದಿಂದ ಅವರು ಕೆಳಗಿಳಿದಿದ್ದು, ಯುವ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಅವರಿಗೆ ಸಿಎಸ್‌ಕೆ ತಂಡದ ನಾಯಕನ ಹೊಣೆ ನೀಡಲಾಗಿದೆ. ಐಪಿಎಲ್‌ನಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಸಿಎಸ್‌ಕೆ ತಂಡವನ್ನು ಮುನ್ನಡೆಸುವ ಹೊಣೆ ಹೊತ್ತುರುವ ರುತುರಾಜ್ ನಾಯಕನಾಗಿ ಮೊದಲ ಐಪಿಎಲ್ ಪಂದ್ಯವನ್ನಾಡಲಿದ್ದಾರೆ.

ಮತ್ತೊಂದೆಡೆ ಹೆಸರು, ಜೆರ್ಸಿ, ಲೋಗೋವನ್ನು ಬದಲಾಯಿಸಿರುವ ಆರ್‌ಸಿಬಿ ಮೊದಲ ಪಂದ್ಯಕ್ಕೆ ಸಜ್ಜಾಗುತ್ತಿದೆ. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್ ಸಿಬಿ ತಂಡದ ಮೊದಲ ಕಪ್ ಗೆದ್ದಿದೆ. ಇದು ಹೊಸ ಆರ್‌ಸಿಬಿ ಹೊಸ ಅಧ್ಯಾಯ ಎಂದು ವಿರಾಟ್ ಕೊಹ್ಲಿ ಹೇಳಿದ್ದು, ತಂಡದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್ ಅವರಂತಹ ಸ್ಫೋಟಕ ಆಲ್‌ರೌಂಡರ್ ಗಳು ತಂಡದ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಸಿಎಸ್‌ಕೆ ತಂಡದ ಪ್ರಾಬಲ್ಯ!
2008 ರ ಬಳಿಕ ಆರ್‌ಸಿಬಿ ಚೆನ್ನೈನಲ್ಲಿ ಒಂದೂ ಪಂದ್ಯವನ್ನು ಗೆದ್ದಿಲ್ಲ, ಇಲ್ಲಿ ಆರ್‌ಸಿಬಿ ಸಿಎಸ್‌ಕೆ ವಿರುದ್ಧ 8 ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದ್ದು ಏಳು ಪಂದ್ಯಗಳಲ್ಲಿ ಸೋಲನುಭವಿಸಿದೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ಒಟ್ಟಾರೆ 31 ಬಾರಿ ಮುಖಾಮುಖಿಯಾಗಿದ್ದು ಸಿಎಸ್‌ಕೆ 20 ಪಂದ್ಯಗಳಲ್ಲಿ ಗೆದ್ದರೆ ಆರ್‌ಸಿಬಿ 10 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ.
ಐಪಿಎಲ್ ಪಂದ್ಯಗಳನ್ನು ಮೊಬೈಲ್‌ನಲ್ಲಿ ಜಿಯೋ ಸಿನಿಮಾ ಆಪ್ ಮೂಲಕ ಉಚಿತವಾಗಿ ವೀಕ್ಷಿಸಬಹುದಾಗಿದೆ. ಸ್ಟಾರ್ ಸ್ಪೋರ್ಟ್ಸ್ ಚಾನಲ್‌ನಲ್ಲಿ ಟಿವಿಯಲ್ಲಿ ಐಪಿಎಲ್ ಪಂದ್ಯಗಳ ನೇರಪ್ರಸಾರ ನೋಡಬಹುದು. ಮೊದಲ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಆರ್‌ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೋಮ್ರೋರ್, ಹಿಮಾಂಶು ಶರ್ಮಾ/ಕರಣ್ ಶರ್ಮಾ, ಲಾಕಿ ಫರ್ಗ್ಯುಸನ್, ಮೊಹಮ್ಮದ್ ಸಿರಾಜ್, ವೈಶಾಖ್ ವಿಜಯ್ ಕುಮಾರ್. ಇಂಪ್ಯಾಕ್ಸ್ ಪ್ಲೇಯರ್ಸ್: ಆಕಾಶ್ ದೀಪ್, ಅನುಜ್ ರಾವತ್, ಮನೋಜ್ ಭಾಂಡಗೆ.
ಸಿಎಸ್‌ಕೆ: ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ. ಇಂಪ್ಯಾಕ್ಟ್ ಪ್ಲೇಯರ್ಸ್: ಸಮೀರ್ ರಿಜ್ವಿ, ತುಷಾರ್ ದೇಶಪಾಂಡೆ, ಶೇಕ್ ರಶೀದ್.












Click it and Unblock the Notifications