RCB vs CSK: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ; ಪ್ಲೇಯಿಂಗ್ ಇಲೆವೆನ್ ಹೀಗಿದೆ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಪಂದ್ಯದಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಬ್ಬರು ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿಯನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

2008ರಲ್ಲಿ ಆರ್ ಸಿಬಿ ಸಿಎಸ್‌ಕೆ ತಂಡದ ವಿರುದ್ಧ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗೆದ್ದ ಬಳಿಕ ಈವರೆಗೂ ಗೆಲುವು ಸಾಧಿಸಿಲ್ಲ. ಈ ಕ್ರೀಡಾಂಗಣದಲ್ಲಿ ಸಿಎಸ್‌ಕೆ ಮತ್ತು ಆರ್ ಸಿಬಿ 9 ಬಾರಿ ಮುಖಾಮುಖಿಯಾಗಿದ್ದು ಇದರಲ್ಲಿ 8 ಬಾರಿ ಸಿಎಸ್‌ಕೆ ಗೆಲುವು ಸಾಧಿಸಿದ್ದು, ಆರ್ ಸಿಬಿ ಕೇವಲ ಒಂದು ಬಾರಿ ಮಾತ್ರ ಗೆಲುವು ಸಾಧಿಸಿದೆ.

rcb vs csk win the toss opted bowl first ipl 2025 virat kohli

ಈ ಬಾರಿ ಆರ್ ಸಿಬಿ ತಂಡ ಬಲಿಷ್ಠವಾಗಿದೆ. ಮುಖ್ಯವಾಗಿ ಬ್ಯಾಟಿಂಗ್, ಬೌಲಿಂಗ್ ವಿಭಾಗ ಸಮತೋಲವಾಗಿದ್ದು ಸಿಎಸ್‌ಕೆ ಭದ್ರಕೋಟೆಯನ್ನು ಛಿದ್ರಮಾಡಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಮತ್ತೊಂದು ಕಡೆ ತವರಿನಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರೆಸಲು ರಣತಂತ್ರ ಮಾಡಿದೆ ಸಿಎಸ್‌ಕೆ, ಅಶ್ವಿನ್, ಜಡೇಜಾ ಮತ್ತು ನೂರ್ ಅಹ್ಮದ್ ಪ್ರಮುಖ ಸ್ಪಿನ್ ಅಸ್ತ್ರವಾಗಿದ್ದು, ಆರ್ ಸಿಬಿ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕುವ ವಿಶ್ವಾಸದಲ್ಲಿದೆ. ಸಿಎಸ್‌ಕೆ ತಂಡದ ವೇಗಿ ಮತೀಶ ಪತಿರಾನ ವಾಪಸಾತಿ ಮಾಡಿರುವುದು ಬೌಲಿಂಗ್ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಿಲ್‌ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಲ್.

ಇಂಪ್ಯಾಕ್ಟ್ ಆಟಗಾರ: ಸ್ವಪ್ನಿಲ್ ಸಿಂಗ್‌, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ.

ಸಿಎಸ್‌ಕೆ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ದೀಪಕ್ ಹೂಡಾ, ಶಿವಂ ದುಬೆ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಎಂಎಸ್ ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮತೀಶ ಪತಿರಾನ, ಖಲೀಲ್ ಅಹ್ಮದ್.

ಇಂಪ್ಯಾಕ್ಟ್ ಆಟಗಾರರು: ರಾಹುಲ್ ತ್ರಿಪಾಠಿ, ವಿಜಯ್ ಶಂಕರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+