RCB vs DC: ತವರಿನಲ್ಲಿ ಗೆಲುವಿನ ಖಾತೆ ತೆರೆಯುತ್ತಾ ಆರ್‌ಸಿಬಿ?

ಐಪಿಎಲ್ 2025ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಈವರೆಗೆ ಆಡಿರುವ 4 ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 5ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಕೆಕೆಆರ್, ಸಿಎಸ್‌ಕೆ ಮತ್ತು ಮುಂಬೈ ಇಂಡಿಯನ್ಸ್ ತಂಡವನ್ನು ಅವರ ತವರಿನ ಅಂಗಳದಲ್ಲೇ ಸೋಲಿಸಿರುವ ಆರ್ ಸಿಬಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿತ್ತು.

ಸೋಮವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿರುವ ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಈ ಪಂದ್ಯ ನಡೆಯಲಿದ್ದು ತವರು ನೆಲದಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

rcb vs dc ipl 2025 date playing xi virat kohli rajat patidar

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 25 ರನ್‌ಗಳ ಭರ್ಜರಿ ಗೆಲುವು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಇದೀಗ ಬೆಂಗಳೂರಿಗೆ ಬಂದಿದ್ದು ಅಭ್ಯಾಸ ನಡೆಸುತ್ತಿದೆ. ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕನೇ ಗೆಲುವಿನ ವಿಶ್ವಾಸದಲ್ಲಿದೆ. ಎರಡೂ ತಂಡಗಳು ಬಲಿಷ್ಠವಾಗಿದ್ದು ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಲಾಗಿದೆ.

ಪಂದ್ಯದ ದಿನಾಂಕ, ಪ್ಲೇಯಿಂಗ್ ಇಲೆವೆನ್

ಏಪ್ರಿಲ್ 10ರಂದು ಗುರುವಾರ ಆರ್ ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ನಡೆಯಲಿದೆ. ಮುಂಬೈ ಇಂಡಿಯನ್ಸ್ ವಿರುದ್ಧ 10 ವರ್ಷಗಳ ಬಳಿಕ ಗೆದ್ದಿರುವ ಆರ್ ಸಿಬಿ ಸಹಜವಾಗಿಯೇ ಆತ್ಮವಿಶ್ವಾಸದಿಂದಲೇ ತವರಿಗೆ ವಾಪಸಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಕೂಡ ದಶಕದ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೇಸಿಂಗ್ ಮಾಡುವ ತಂಡಕ್ಕೆ ಅನುಕೂಲ ಹೆಚ್ಚಿದ್ದು ಆರ್ ಸಿಬಿ ಟಾಸ್ ಗೆದ್ದರೆ ಗೆಲುವಿನ ಸಾಧ್ಯತೆ ಹೆಚ್ಚಾಗುತ್ತದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದರೆ ಬೃಹತ್ ಮೊತ್ತವನ್ನು ಕಲೆಹಾಕಬೇಕಾಗುತ್ತದೆ. ಸದ್ಯ ಆರ್ ಸಿಬಿ ಬ್ಯಾಟರ್ ಗಳು ಉತ್ತಮ ಫಾರ್ಮ್‌ನಲ್ಲಿದ್ದು ಮಿಚೆಲ್ ಸ್ಟಾರ್ಕ್‌ರನ್ನು ಎದುರಿಸಲು ಸಿದ್ಧವಾಗಿದ್ದಾರೆ.

ಕೆಎಲ್ ರಾಹುಲ್ ಬೆಂಗಳೂರಿನಲ್ಲಿ ಆಡುತ್ತಿದ್ದು ಅವರಿಗೆ ಇಲ್ಲಿನ ಪಿಚ್ ಬಗ್ಗೆ ಹೆಚ್ಚಿನ ತಿಳುವಳಿಕೆ ಇರುವುದರಿಂದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಅನುಕೂಲವಾಗಲಿದೆ. ಕರುಣ್ ನಾಯರ್ ಕೂಡ ತಂಡದಲ್ಲಿದ್ದು ಅವರಿಗೂ ಅವಕಾಶ ಸಿಗಬಹುದು. ಒಟ್ಟಾರೆ ಬೆಂಗಳೂರಿನಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು.

ಸಂಭಾವ್ಯ ಆಡುವ ಬಳಗ

ಆರ್ ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಡೆಲ್ಲಿ ಕ್ಯಾಪಿಟಲ್ಸ್: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್, ಸಮೀರ್ ರಿಜ್ವಿ/ ಫಾಫ್ ಡುಪ್ಲೆಸಿಸ್, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಮೋಹಿತ್ ಶರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+