RCB Vs DC IPL 2026: ಕಿಂಗ್ ಕೊಹ್ಲಿ vs ಕೆ.ಎಲ್.ರಾಹುಲ್: ಬೆಂಗಳೂರಿನಲ್ಲಿ ಆರ್‌ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲ್

RCB Vs DC IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಶನಿವಾರ (ಏಪ್ರಿಲ್ 18) ಐಪಿಎಲ್‌ 2026ರ 26ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಹಾಗಾದ್ರೆ, ಪಿಚ್ ರಿಪೋರ್ಟ್‌, ಬೆಂಗಳೂರಿನ ಹವಾಮಾನ ವರದಿ ಹಾಗೂ ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈ ಮೈದಾನವು ರನ್ ಮಳೆಗೆ ಹೆಸರುವಾಸಿಯಾಗಿದ್ದು, ಅಭಿಮಾನಿಗಳು ಭರ್ಜರಿ ಸಿಕ್ಸರ್ ಹಾಗೂ ಬೌಂಡರಿಗಳ ರಸದೌತಣವನ್ನು ನಿರೀಕ್ಷಿಸಬಹುದು. ತನ್ನ ತವರು ನೆಲದಲ್ಲಿ ಅಜೇಯವಾಗಿ ಉಳಿದಿರುವ ಆರ್‌ಸಿಬಿ ಇಂದು ಕೂಡ ಗೆಲುವಿಗೆ ಪ್ಲೇನ್ ಮಾಡಿಕೊಂಡಿದೆ. ಮತ್ತೊಂದೆಡೆ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬಲಿಷ್ಠ ಆರ್‌ಸಿಬಿಗೆ ಸವಾಲು ಹಾಕಲು ಸಜ್ಜಾಗಿದೆ.

RCB vs DC IPL 2026 Pitch Report Bengaluru Weather and Predicted Playing 11 Know Complete details

ಉತ್ತಮ ಲಯದಲ್ಲಿರುವ ಆರ್‌ಸಿಬಿ

ಆರ್‌ಸಿಬಿ ಪ್ರಸ್ತುತ ಭರ್ಜರಿ ಫಾರ್ಮ್‌ನಲ್ಲಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. 2025ರಲ್ಲಿ ತನ್ನ ಚೊಚ್ಚಲ ಪ್ರಶಸ್ತಿಯನ್ನು ಗೆದ್ದ ನಂತರ, ರಜತ್ ಪಾಟಿದಾರ್ ನಾಯಕತ್ವದ ಈ ತಂಡವು ಅತ್ಯುತ್ತಮ ಪ್ರದರ್ಶನವನ್ನು ಮುಂದುವರಿಸಿದೆ. ತಂಡದ ಆರಂಭಿಕ ಜೋಡಿಯಾದ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅದ್ಭುತವಾಗಿ ಆಡುತ್ತಿದ್ದು, ಬಹುತೇಕ ಎಲ್ಲಾ ಪಂದ್ಯಗಳಲ್ಲಿ ತಂಡಕ್ಕೆ ಉತ್ತಮ ಆರಂಭವನ್ನು ನೀಡುತ್ತಿದ್ದಾರೆ.

ಆರ್‌ಸಿಬಿಗೆ ಸವಾಲೊಡ್ಡಿದ ಡೆಲ್ಲಿ ಕ್ಯಾಪಿಟಲ್ಸ್‌

ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲ್ಲಾ ಬ್ಯಾಟಿಂಗ್, ಬೌಲಿಂಗ್ ಎರಡೂ ವಿಭಾಗದಲ್ಲೂ ಬಲಿಷ್ಠವಾಗಿದೆ. ಕೆ.ಎಲ್.ರಾಹುಲ್ ಅವರು ಉತ್ತಮ ಲಯದಲ್ಲಿದ್ದಾರೆ. ಅವರು ಆರಂಭಿಕರಾಗಿ ಕಣಕ್ಕಿಳಯಲಿದ್ದಾರೆ. ಅಲ್ಲದೆ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಡೇವಿಡ್ ಮಿಲ್ಲರ್‌ ಅಂತಹ ಉತ್ತ ಬ್ಯಾಟರ್‌ಗಳು ತಂಡದಲ್ಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್‌ ತಂಡದ ದೊಡ್ಡ ಬಲ ಇಂದಿಗೂ ಅವರ ಸ್ಪಿನ್ ಬೌಲಿಂಗ್ ದಾಳಿಯೇ ಆಗಿದೆ. ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ಅತ್ಯಂತ ಬಲಿಷ್ಠ ಜೋಡಿಯಾಗಿ ಎದುರಾಳಿಗಳನ್ನು ಕಟ್ಟಿಹಾಕುತ್ತಿದ್ದಾರೆ. ಆದರೆ, ಮಿಚೆಲ್ ಸ್ಟಾರ್ಕ್ ಅಲಭ್ಯತೆಯ ನಡುವೆ ಲುಂಗಿ ಎನ್ಗಿಡಿ ನೇತೃತ್ವದ ವೇಗದ ಬೌಲಿಂಗ್ ವಿಭಾಗಕ್ಕೆ, ಆರ್‌ಸಿಬಿಯ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಎದುರಿಸುವುದು ದೊಡ್ಡ ಸವಾಲಾಗಿದೆ.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ರಸಿಕ್ ದಾರ್ ಸಲಾಮ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್.

ಆರ್‌ಸಿಬಿ ಇಂಪ್ಯಾಕ್ಟ್ ಪ್ಲೇಯರ್: ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್, ಜೇಕಬ್ ಡಫಿ, ಮಂಗೇಶ್ ಯಾದವ್, ಅಭಿನಂದನ್ ಸಿಂಗ್.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಪ್ಲೇಯಿಂಗ್ 11: ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಪತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಆಕಿಬ್ ನಬಿ, ಲುಂಗಿ ಎನ್ಗಿಡಿ, ಕುಲದೀಪ್ ಯಾದವ್, ಟಿ.ನಟರಾಜನ್, ಮುಕೇಶ್ ಕುಮಾರ್.

ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್: ವಿಪ್ರಜ್ ನಿಗಮ್, ಅಶುತೋಷ್ ಶರ್ಮಾ, ಕರುಣ್ ನಾಯರ್, ದುಷ್ಮಂತ ಚಮೀರ, ನಿತೀಶ್ ರಾಣಾ.

ಪಂದ್ಯದ ಸಮಯ, ಸ್ಥಳದ ವಿವರ

* ಪಂದ್ಯದ ಸಮಯ: ಮಧ್ಯಾಹ್ನ 3:30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ)

* ಟಾಸ್ ಸಮಯ: ಮಧ್ಯಾಹ್ನ 3:00ಕ್ಕೆ

* ಸ್ಥಳ: ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+