RCB vs DC: ಡೆಲ್ಲಿ ಕ್ಯಾಪಿಟಲ್ಸ್ ಬಗ್ಗು ಬಡಿದ ಆರ್‌ಸಿಬಿ; ಪ್ಲೇಆಫ್‌ ತಲುಪಲು ಇನ್ನೊಂದು ಹೆಜ್ಜೆ ಬಾಕಿ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಬ್ಬರಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಕಾಡೆ ಮಲಗಿತು. ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್‌ಸಿಬಿ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು, ಪ್ಲೇ ಆಫ್ ಕನಸನ್ನು ಜೀವಂತವಾಗಿಟ್ಟುಕೊಂಡಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಒಂದು ಹಂತದಲ್ಲಿ 200 ಕ್ಕಿಂತ ಹೆಚ್ಚು ರನ್ ಗಳಿಸುವ ಅವಕಾಶ ಇದ್ದರೂ, ಡೆಲ್ಲಿ ಕ್ಯಾಪಿಟಲ್ಸ್ ಅತ್ಯುತ್ತಮ ಬೌಲಿಂಗ್ ಮಾಡುವ ಮೂಲಕ ಆರ್‌ಸಿಬಿ ರನ್ ಗಳಿಕೆಗೆ ಕಡಿವಾಣ ಹಾಕಿತು.

RCB vs DC RCB Keeps Playoff Hopes Alive with a 48-Run Victory Against Delhi Capitals

ಕೊಹ್ಲಿ 13 ಎಸೆತಗಳಲ್ಲಿ 27 ರನ್ ಗಳಿಸಿದರೆ, ವಿಲ್ ಜ್ಯಾಕ್ಸ್ 29 ಎಸೆತಗಳಲ್ಲಿ 41 ರನ್ ಗಳಿಸಿ ಮಿಂಚಿದರು. ಅತ್ಯುತ್ತಮ ಫಾರ್ಮ್‌ ಮುಂದುವರೆಸಿದ ರಜತ್ ಪಟಿದಾರ್ ಡೆಲ್ಲಿ ವಿರುದ್ಧ ಕೂಡ ಅರ್ಧಶತಕ ಗಳಿಸಿದರು. 32 ಎಸೆತಗಳಲ್ಲಿ 52 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕ್ಯಾಮೆರಾನ್ ಗ್ರೀನ್ 24 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿದರು.

ಬೌಲಿಂಗ್, ಫೀಲ್ಡಿಂಗ್‌ನಲ್ಲಿ ಮಿಂಚು

188 ರನ್‌ಗಳ ಸವಾಲಿನ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆಯುವ ಮೂಲಕ ಮೊದಲ ಓವರ್ ನಲ್ಲೇ ಸ್ವಪ್ನಿಲ್ ಸಿಂಗ್ ಆಘಾತ ನೀಡಿದರು. ಬಳಿಕ ಯಶ್ ದಯಾಳ್ ಒಂದೇ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎರಡು ವಿಕೆಟ್ ಕಳೆದುಕೊಂಡಿತು.

3.3 ಓವರ್ ಗಳಲ್ಲಿ 30 ರನ್ ಗಳಿಸುವ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು, ನಾಯಕ ಅಕ್ಷರ್ ಪಟೇಲ್ ಮತ್ತು ಶೈ ಹೋಪ್ 56 ರನ್‌ಗಳ ಜೊತೆಯಾಟದ ಮೂಲಕ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದರು. ಆದರೆ ಆರ್ ಸಿಬಿ ಬೌಲಿಂಗ್ ದಾಳಿ ಮುಂದೆ ಇಬ್ಬರ ಆಟ ಹೆಚ್ಚು ಹೊತ್ತು ನಡೆಯಲಿಲ್ಲ.

ಶೈ ಹೋಪ್ 29 ರನ್ ಗಳಿಸಿ ಔಟಾದರೆ, ಅಕ್ಷರ್ ಪಟೇಲ್ 57 ರನ್ ಗಳಿಸಿ ಔಟಾದರು. ಇವರಿಬ್ಬರು ಔಟಾದ ಬಳಿಕ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಅಂತಿಮವಾಗಿ 19.1 ಓವರ್ ಗಳಲ್ಲಿ 140 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ಆರ್‌ಸಿಬಿ ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಎಲ್‌ಎಸ್‌ಜಿ ಪಂದ್ಯ ತಮ್ಮ ಮುಂದಿನ ಎರಡು ಪಂದ್ಯಗಳಲ್ಲಿ ಒಂದನ್ನು ಸೋತು, ಜಿಟಿ ಒಂದು ಪಂದ್ಯ ಸೋತರೆ ಆರ್ ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇ ಆಫ್‌ಗೆ ಅರ್ಹತೆ ಪಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+