Virat Kohli: ಮತ್ತೊಂದು ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ
ಐಪಿಎಲ್ 2025ರ ಆವೃತ್ತಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಹೊಸ ದಾಖಲೆಗಳನ್ನು ಬರೆಯಲು ಸಜ್ಜಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಟಿ20 ಕ್ರಿಕೆಟ್‌ನಲ್ಲಿ 13,000 ರನ್ ಪೂರೈಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು. ಗುರುವಾರ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆಯುವ ಉತ್ಸಾಹದಲ್ಲಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅರ್ಧಶತಕ ಗಳಿಸಿದರೆ ಮತ್ತೊಂದು ದಾಖಲೆ ನಿರ್ಮಾಣವಾಗಲಿದೆ. ಆಡಿರುವ 4 ಪಂದ್ಯಗಳಲ್ಲಿ 59, 31, 7 ಮತ್ತು 67 ರನ್ ಗಳಿಸಿದ್ದಾರೆ. ಈ ಆವೃತ್ತಿಯಲ್ಲಿ ಎರಡು ಅರ್ಧಶತಕ ಗಳಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೂಡ ಅರ್ಧಶತಕ ಗಳಿಸಿದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಭಾರತೀಯ ಆಟಗಾರನಾಗುವುದು ಮಾತ್ರವಲ್ಲ, ಲೀಗ್‌ನಲ್ಲಿ ಹೆಚ್ಚು ಬೌಂಡರಿ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.

100ನೇ ಅರ್ಧಶತಕ ಬರುತ್ತಾ?
ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 99 ಅರ್ಧಶತಕಗಳನ್ನು ತಲುಪಿದ್ದಾರೆ. ಇನ್ನೊಂದು ಅರ್ಧಶತಕ ಗಳಿಸಿದರೆ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕ ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಡೇವಿಡ್ ವಾರ್ನರ್ ಒಬ್ಬರೇ 108 ಅರ್ಧಶತಕ ಗಳಿಸಿದ್ದು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕ್ರಿಸ್‌ಗೇಲ್ 88 ಅರ್ಧಶತಕ ಗಳಿಸಿದ್ದು ಮೂರನೇ ಸ್ಥಾನದಲ್ಲಿದ್ದಾರೆ.
ಎರಡು ಬೌಂಡರಿ ಹೊಡೆದರೆ..!
ವಿರಾಟ್ ಕೊಹ್ಲಿ ಇನ್ನು 2 ಬೌಂಡರಿ ಬಾರಿಸಿದರೆ ಮತ್ತೊಂದು ದಾಖಲೆ ನಿರ್ಮಾಣವಾಗಲಿದೆ. ಐಪಿಎಲ್‌ನಲ್ಲಿ 1000 ಬೌಂಡರಿಗಳನ್ನು ಸಿಡಿಸಿದ ಏಕೈಕ ಆಟಗಾರ ಎನಿಸಿಕೊಳ್ಳಲಿದ್ದಾರೆ. ಪ್ರಸ್ತುತ, ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 720 ಬೌಂಡರಿಗಳು ಮತ್ತು 298 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅವರ ನಂತರ ಶಿಖರ್ ಧವನ್, ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ ಪಟ್ಟಿಯಲ್ಲಿದ್ದಾರೆ. ಅಗ್ರ ನಾಲ್ಕರಲ್ಲಿರುವ ಮೂವರಲ್ಲಿ ಇಬ್ಬರು ಐಪಿಎಲ್‌ನಲ್ಲಿ ಆಡುತ್ತಿಲ್ಲ, ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಸನಿಹಕ್ಕೆ ಬರಲೂ ಅವಕಾಶವಿಲ್ಲ.
ತವರಿನಲ್ಲಿ ಗೆಲ್ಲುತ್ತಾ ಆರ್ ಸಿಬಿ?
ಈ ಬಾರಿ ಐಪಿಎಲ್‌ನಲ್ಲಿ ಆರ್ ಸಿಬಿ ಹೊರಗಿನ ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನು ಸೋಲಿಸಿದೆ. ಆದರೆ ತವರಿನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿತು. ಈಗ ತವರಿನಲ್ಲಿ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲು ಸಜ್ಜಾಗಿದ್ದು ತವರಿನಲ್ಲಿ ಮೊದಲ ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ.












Click it and Unblock the Notifications