RCB vs GT: ಆರ್‌ಸಿಬಿಗೆ ಗುಜರಾತ್ ಟೈಟಾನ್ಸ್ ಸವಾಲು; ಪಂದ್ಯದ ಸಮಯ, ಪಿಚ್‌, ಪ್ಲೇಯಿಂಗ್ ಇಲೆವೆನ್

ಐಪಿಎಲ್ 2025ರ ಆವೃತ್ತಿಯಲ್ಲಿ ಆಡಿರುವ ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇದೀಗ ತವರಿನ ಅಂಗಳದಲ್ಲಿ ಆಡಲು ಸಜ್ಜಾಗಿದೆ. ಬುಧವಾರ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಅಪಾರ ಅಭಿಮಾನಿಗಳ ಬೆಂಬಲದ ನಡುವೆ ಪಂದ್ಯ ಆಡಲು ರಜತ್ ಪಡೆ ಸಜ್ಜಾಗಿದೆ.

ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ, ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 50 ರನ್‌ಗಳಿಂದ ಗೆದ್ದಿದೆ. 17 ವರ್ಷಗಳ ಬಳಿಕ ಸಿಎಸ್‌ಕೆ ತಂಡವನ್ನು ಸೋಲಿಸಿದ್ದು ಆರ್ ಸಿಬಿ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

rcb vs gt ipl 2025 bengaluru chinnaswamy stadium pitch report playing xi

ಚಿನ್ನಸ್ವಾಮಿ ಸವಾಲು ಗೆಲ್ಲುತ್ತಾ?

ಆರ್ ಸಿಬಿ ತಂಡಕ್ಕೆ ಯಾವಾಗಲೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದ್ದು, ಚಿನ್ನಸ್ವಾಮಿಯಲ್ಲಿ ಗೆಲುವಿನ ಪ್ರಮಾಣ ಹೆಚ್ಚಿಸಿಕೊಳ್ಳುವ ವಿಶ್ವಾಸದಲ್ಲಿದೆ. ಆರ್ ಸಿಬಿ ಈಗಾಗಲೇ ಕಠಿಣ ಅಭ್ಯಾಸ ನಡೆಸುತ್ತಿದೆ. ಆಲೂರಿನಲ್ಲಿ ಸತತವಾಗಿ ಅಭ್ಯಾಸ ನಡೆಸಿದ್ದು, ಮಂಗಳವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಲಿದೆ.

ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತ ಬಳಿಕ ಗುಜರಾತ್ ಟೈಟಾನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿಗೆ ಸವಾಲಾಕಲು ಸಜ್ಜಾಗಿದೆ. ಶುಭಮನ್ ಗಿಲ್, ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ ಅವರ ಮೇಲೆ ತಂಡದ ಬ್ಯಾಟಿಂಗ್‌ ಅವಲಂಬಿತವಾಗಿದೆ. ಕಳೆದ ಪಂದ್ಯದಲ್ಲಿ ಸಿರಾಜ್, ಪ್ರಸಿದ್ಧ್ ಕೃಷ್ಣ, ಸಾಯಿ ಕಿಶೋರ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ.

ಮತ್ತೊಂದು ಕಡೆ ಆರ್ ಸಿಬಿ ತಂಡದಲ್ಲಿ ಎಲ್ಲಾ ಬ್ಯಾಟರ್ ಗಳು ಫಾರ್ಮ್‌ ಕಂಡುಕೊಂಡಿದ್ದಾರೆ. ಫಿಲ್ ಸಾಲ್ಟ್ ಸ್ಫೋಟಕ ಆರಂಭ ಕೊಟ್ಟರೆ ದೊಡ್ಡ ಮೊತ್ತ ಕಲೆಹಾಕಲು ಅಥವಾ ಚೇಸ್ ಮಾಡುವುದು ಆರ್ ಸಿಬಿಗೆ ಸುಲಭವಾಗಲಿದೆ. ವಿರಾಟ್ ಕೊಹ್ಲಿ, ರಜತ್, ಪಡಿಕ್ಕಲ್ ಭರ್ಜರಿ ಫಾರ್ಮ್‌ನಲ್ಲಿದ್ದು ಆರ್ ಸಿಬಿ ಗೆಲ್ಲುವ ಫೇವರಿಟ್ ತಂಡ ಎನಿಸಿಕೊಂಡಿದೆ. ಜೋಶ್ ಹೇಜಲ್‌ವುಡ್, ಭುನವೇಶ್ವರ್ ಕುಮಾರ್, ಯಶ್ ದಯಾಳ್ ಮಾರಕ ಬೌಲರ್ ಆಗಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಸ್ನೇಹಿ ಪಿಚ್ ಸಿಗುವ ಸಾಧ್ಯತೆ ಇದ್ದು, ಬೃಹತ್ ಮೊತ್ತವನ್ನು ನಿರೀಕ್ಷೆ ಮಾಡಬಹುದು. ಬುಧವಾರ ಮಳೆಯ ಮುನ್ಸೂಚನೆ ಇಲ್ಲದ ಕಾರಣ ಪೂರ್ತಿ ಪಂದ್ಯಕ್ಕೆ ಯಾವುದೇ ಅಡ್ಡಿಯಾಗುವ ಸಾಧ್ಯತೆ ಇಲ್ಲ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಿಲ್‌ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಲ್.

ಇಂಪ್ಯಾಕ್ಟ್ ಆಟಗಾರ: ಸ್ವಪ್ನಿಲ್ ಸಿಂಗ್‌, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ.

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ.

ಇಂಪ್ಯಾಕ್ಟ್ ಆಟಗಾರ: ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಮಹಿಪಾಲ್ ಲೊಮ್ರೊರ್, ಅರ್ಷದ್ ಖಾನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+