RCB vs GT: ಗುರು-ಶಿಷ್ಯರ ನಡುವಿನ ಕಾಳಗ ನೋಡಲು ಅಭಿಮಾನಿಗಳ ಕಾತರ

ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2025ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಟೈಟಾನ್ಸ್ (GT) ವಿರುದ್ಧ ಸೆಣೆಸಲು ಸಜ್ಜಾಗಿದೆ. ಕೋಲ್ಕತ್ತಾದಲ್ಲಿ ಕೆಕೆಆರ್, ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧದ ಎರಡೂ ಪಂದ್ಯಗಳನ್ನು ಗೆದ್ದಿರುವ ಆರ್ ಸಿಬಿ ಈ ಆವೃತ್ತಿಯಲ್ಲಿ ತವರಿನ ಮೊದಲ ಪಂದ್ಯವನ್ನಾಡುವ ಉತ್ಸಾಹದಲ್ಲಿದೆ.

ತವರಿನಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಸೋತು ಮತ್ತೊಂದು ಪಂದ್ಯವನ್ನು ಗೆದ್ದಿರುವ ಗುಜರಾತ್ ಟೈಟಾನ್ಸ್, ಮೊದಲ ತವರಿನ ಹೊರಗೆ ಆಡಲು ಬೆಂಗಳೂರಿಗೆ ಬಂದಿದೆ. ಆರ್ ಸಿಬಿ ಅಭಿಮಾನಿಗಳು ಈ ಪಂದ್ಯವನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.

rcb vs gt ipl 2025 fans waiting to watch mohammed siraj virat kohli face off

ಆರ್ ಸಿಬಿ ಅಭಿಮಾನಿಗಳಿಗೆ ಇದು ವಿಶೇಷವಾದ ಪಂದ್ಯವಾಗಿದೆ. ಇಷ್ಟು ವರ್ಷ ಆರ್ ಸಿಬಿ ತಂಡಕ್ಕಾಗಿ ಆಡಿದ್ದ ಮೊಹಮ್ಮದ್ ಸಿರಾಜ್ ಈ ವರ್ಷ ಆರ್ ಸಿಬಿ ವಿರುದ್ಧ ಆಡಲು ಸಜ್ಜಾಗಿದ್ದಾರೆ. ಆರ್ ಸಿಬಿ ಜೊತೆ ಭಾವನಾತ್ಮಕ ನಂಟು ಹೊಂದಿರುವ ಸಿರಾಜ್ ಆರ್ ಸಿಬಿ ತವರಿನ ಅಂಗಳದಲ್ಲಿ ಆರ್ ಸಿಬಿಗೆ ಎದುರಾಳಿಯಾಗಿ ಬೌಲಿಂಗ್ ಮಾಡಲಿದ್ದಾರೆ.

ಗುರು-ಶಿಷ್ಯರ ನಡುವಿನ ಕಾಳಗ

ಮೊಹಮ್ಮದ್ ಸಿರಾಜ್‌ಗೆ ಅವಕಾಶ ಕೊಟ್ಟು, ಪ್ರೋತ್ಸಾಹಿಸಿದ್ದು ವಿರಾಟ್ ಕೊಹ್ಲಿ. ಕೊಹ್ಲಿ ಆರ್ ಸಿಬಿ ನಾಯಕರಾಗಿದ್ದಾಗ ತಂಡಕ್ಕೆ ಬಂದ ಸಿರಾಜ್ ಬಳಿಕ ಭಾರತ ತಂಡಕ್ಕಾಗಿ ಕೂಡ ಆಡಿದರು. ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್‌ರನ್ನು ಗುರು ಶಿಷ್ಯರ ರೀತಿಯೇ ನೋಡಲಾಗುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಇವರಿಬ್ಬರೂ ಈಗ ಎರಡು ಬೇರೆ ಬೇರೆ ತಂಡಗಳಿಗೆ ಆಡಲಿದ್ದು ಕೊಹ್ಲಿಗೆ ಸಿರಾಜ್ ಬೌಲಿಂಗ್ ಮಾಡುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಬುಧವಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಆಡಿರುವ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಅಮೋಘ ಪ್ರದರ್ಶನ ನೀಡಿರುವ ಆರ್ ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಿಲ್‌ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಲ್.

ಇಂಪ್ಯಾಕ್ಟ್ ಆಟಗಾರ: ಸ್ವಪ್ನಿಲ್ ಸಿಂಗ್‌, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ.

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ.

ಇಂಪ್ಯಾಕ್ಟ್ ಆಟಗಾರ: ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಮಹಿಪಾಲ್ ಲೊಮ್ರೊರ್, ಅರ್ಷದ್ ಖಾನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+