IPL 2026 Final: 92 ರನ್‌ ಉಳಿಸಿಕೊಂಡು ಫೈನಲ್ ಪ್ರವೇಶಿಸಿದ ಆರ್‌ಸಿಬಿ

RCB IPL 2026 Final: ಧರ್ಮಶಾಲಾದಲ್ಲಿ ಮಂಗಳವಾರ (ಮೇ 26) ನಡೆದ ಐಪಿಎಲ್ 2026ರ ರೋಚಕ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್‌ಸಿಬಿಯು ಗುಜರಾತ್ ಟೈಟಾನ್ಸ್ ವಿರುದ್ಧ 92 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ. ಇನ್ನು ಜಿಟಿ ಫೈನಲ್‌ಗೆ ಲಗ್ಗೆ ಇಡಲು ಮತ್ತೊಂದು ಅವಕಾಶವಿದೆ.

ಟಾಸ್‌ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್‌ಮನ್ ಗಿಲ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆಯೇ ಮೊದಲು ಬ್ಯಾಟಿಂಗ್ ಬೀಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ನಾಯಕ ರಜತ್ ಪಾಟಿದಾರ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 254 ರನ್‌ಗಳನ್ನು ಪೇರಿಸಿ 255 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತು. ಆದರೆ ಜಿಟಿ 19.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 162 ರನ್‌ ಗಳಿಸಿ ಸೋಲನುಭವಿಸಿತು.

RCB vs GT IPL 2026 Royal Challengers Bengaluru Crush Gujarat Titans by 92 Runs Enters Final

ಆರ್‌ಸಿಬಿ ಹೊಸ ದಾಖಲೆ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 254/5 ರನ್‌ ಗಳಿಸಿ, ಪ್ಲೇ ಆಫ್ ಇತಿಹಾಸದಲ್ಲೇ ಅತ್ಯಧಿಕ ರನ್‌ ಕಲೆಹಾಕಿದ ತಂಡ ಎನಿಸಿಕೊಂಡಿತು. ಕೊನೆವರೆಗೂ ಜವಾಬ್ದಾರಿಯುತ ಆಟವಾಡಿದ ನಾಯಕ ಪಾಟಿದಾರ್ ಕೇವಲ 33 ಎಸೆತಗಳಲ್ಲಿ ಅಜೇಯ 93 ರನ್ ಚಚ್ಚಿದರು. ಇನ್ನು 43 ರನ್ ಗಳಿಸಿದ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಸತತ 4 ಸೀಸನ್‌ಗಳಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾದರು. ಕೃನಾಲ್ ಪಾಂಡ್ಯ ಅವರು ಮಧ್ಯಮ ಕ್ರಮಾಂಕದಲ್ಲಿ 43 ರನ್‌ಗಳ ಉಪಯುಕ್ತ ಕೊಡುಗೆ ನೀಡಿದರು.

ಜಿಟಿ ಬೌಲರ್‌ಗಳ ವಿರುದ್ಧ ರಜತ್ ದಂಡಯಾತ್ರೆ

ಆರ್‌ಸಿಬಿ ಪರ ನಾಯಕ ಪಾಟಿದಾರ್ ಕೇವಲ 33 ಎಸೆತಗಳಲ್ಲಿ 5 ಬೌಂಡರಿ, 9 ಸಿಕ್ಸರ್‌ಗಳ ಸಹಿತ ಅಜೇಯ 93 ರನ್‌ಗಳನ್ನು ಕಲೆಹಾಕಿ ತಂಡ ಬೃಹತ್ ಮೊತ್ತ ಕಲೆಹಾಕಲು ಪ್ರಮುಖ ಪಾತ್ರವಹಿಸಿದರು. ವಿರಾಟ್‌ ಕೊಹ್ಲಿ 43(25), ವೆಂಕಟೇಶ್ ಅಯ್ಯರ್ 19(7), ದೇವದತ್ ಪಡಿಕ್ಕಲ್ 30(19), ಜಿತೇಶ್ ಶರ್ಮಾ ಅಜೇಯ 15 (5) ರನ್‌ಗಳ ಕೊಡುಗೆ ನೀಡಿದರು.

ಗುಜರಾತ್ ಟೈಟಾನ್ಸ್ ಆಲೌಟ್‌

ಆರ್‌ಸಿಬಿ ನೀಡಿದ 255 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ತಂಡವು ಪವರ್‌ಪ್ಲೇ ಒಳಗೇ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆರಂಭಿಕ ಆಟಗಾರ ಸಾಯಿ ಸುದರ್ಶನ್ ಹಿಟ್-ವಿಕೆಟ್ ಆಗಿ ಔಟಾದರೆ, ನಾಯಕ ಶುಭ್‌ನ್ ಗಿಲ್ ಕೂಡ ಅಬ್ಬರಿಸಲು ವಿಫಲರಾದರು.

ಬಳಿಕ ಬಂದ ಜೋಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್ ಆಡಿ 29 ರನ್‌ ಗಳಿಸಿ ಜೋಶ್ ಹ್ಯಾಜಲ್‌ವುಡ್‌ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ತೆರಳಿದರು. ಕೊನೆಯಲ್ಲಿ ಏಕಾಂಗಿ ಹೋರಾಟ ನಡೆಸಿದ ರಾಹುಲ್ ತೇವಾಟಿಯಾ 43 ಎಸೆತಗಳಲ್ಲಿ 8 ಬೌಂಡರಿ 4 ಸಿಕ್ಸರ್‌ಗಳ ಸಹಿತ 68 ರನ್ ಗಳಿಸಿದರು. ಆದರೂ ತಂಡವು 19.3 ಓವರ್‌ಗಳಲ್ಲಿ 162 ರನ್‌ಗಳಿಗೆ ಆಲೌಟ್ ಆಯಿತು.

ಮಿಂಚಿದ ಆರ್‌ಸಿಬಿ ಬೌಲರ್ಸ್‌

ಆರ್‌ಸಿಬಿ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಜೇಕಬ್ ಡಫಿ ಕೇವಲ 39 ರನ್‌ ಬಿಟ್ಟುಕೊಟ್ಟು 3 ವಿಕೆಟ್ ಪಡೆದು ಮಿಂಚಿದರು. ಭುವನೇಶ್ವರ್ ಕುಮಾರ್, ರಸಿಖ್ ಸಲಾಮ್ ದಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಕಬಳಿಸಿದರೆ, ಜೋಶ್ ಹ್ಯಾಜಲ್‌ವುಡ್‌ 1 ವಿಕೆಟ್‌ ಕಿತ್ತರು. ಈ ಮೂಲಕ ಆರ್‌ಸಿಬಿ ಗೆಲುವಿಗೆ ಬ್ಯಾಟರ್‌ಗಳ ಪಾತ್ರ ಎಷ್ಟಿದೆಯೋ, ಬೌಲರ್‌ಗಳ ಉತ್ತಮ ಪ್‌ದರ್ಶನ ಕೂಡ ಪ್ರಮುಖ ಪಾತ್ರವಹಿಸಿತು.

ಫೈನಲ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ

ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಸೋತ ಗುಜರಾತ್ ಟೈಟಾನ್ಸ್ ತಂಡವು ಎಲಿಮಿನೇಟರ್ ಪಂದ್ಯದ ವಿಜೇತರ ವಿರುದ್ಧ ಕ್ವಾಲಿಫೈಯರ್ 2 ಪಂದ್ಯದಲ್ಲಿ ಆಡಲಿದೆ. ಅಲ್ಲಿ ಗೆದ್ದರೆ ಮಾತ್ರ ಫೈನಲ್ ತಲುಪಲು ಮತ್ತೊಂದು ಅವಕಾಶ ಸಿಗಲಿದೆ. ಬುಧವಾರ (ಮೇ 28) ಮುಲ್ಲನ್‌ಪುರ್‌ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಹಾಗೂ ರಾಜಸ್ಥಾನ್‌ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ಕ್ವಾಲಿಫೈಯರ್ 1ರಲ್ಲಿ ಸೋತ ಗುಜರಾತ್ ಟೈಟಾನ್ಸ್ ವಿರುದ್ಧ ಕ್ವಾಲಿಫೈನಲ್‌ 2ನಲ್ಲಿ ಆಡಲಿದೆ. ಇದರಲ್ಲಿ ಗೆದ್ದ ಟೀಮ್ ಅಹಮದಾಬಾದ್‌ನ ನರೆಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಫೈನಲ್‌ನಲ್ಲಿ ಆರ್‌ಸಿಬಿ ಜೊತೆ ಆಡಲಿದೆ. ಒಟ್ಟಿನಲ್ಲಿ ಆರ್‌ಸಿಬಿ ವಿರುದ್ಧ ಜಿಟಿ ಸೋಲಿಗೆ ಅವರ ಬೌಲರ್‌ಗಳು ದುಬಾರಿಯಾಗಿದ್ದು ಹಾಗೂ ಮಿಸ್‌ ಫೀಲ್ಡಿಂಗ್ ಪ್ರಮುಖ ಕಾರಣ ಅಂದ್ರೆ ತಪ್ಪಾಗಲಾರದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+