RCB Vs GT Toss: ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಗುಜರಾತ್‌: ಆರ್‌ಸಿಬಿಗೆ ವರದಾನವಾಯ್ತ?

RCB Vs GT: ಐಪಿಎಲ್‌ 2025ನೇ ಆವೃತ್ತಿ ಅದ್ಧೂರಿಯಾಗಿ ನಡೆಯುತ್ತಿದೆ. ಇಂದು (ಏಪ್ರಿಲ್‌ 2) ಬೆಂಗಳೂರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಗುಜರಾತ್‌ ಟೈಟನ್ಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಇದು ಆರ್‌ಸಿಬಿಗೆ ವರದಾನ ಆದಂತಾಗಿದೆ. ಯಾಕೆ ಅಂತೀರಾ ಇಲ್ಲಿದೆ ನೋಡಿ ಸಂಪೂರ್ಣ ವಿವರ.

ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಎಡರನೇ ಪಂದ್ಯವನ್ನು ಸಿಎಸ್‌ಕೆ ವಿರುದ್ಧ ಭರ್ಜರಿಯಾಗಿ ಗೆದ್ದು ಇತಿಹಾಸ ಸೃಷ್ಟಿಸಿದೆ. ಅದು ಅವರವರ ಹೋಂ ಗ್ರೌಂಡ್‌ನಲ್ಲಿ ಅನ್ನುವುದೇ ವಿಶೇಷ. ಇನ್ನು ಇಂದು ಆರ್‌ಸಿಬಿ ಮ್ಯಾಚ್‌ ತವರು ಅಂಗಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಕಾದಾಟ ಶುರು ಮಾಡಿದೆ.

RCB Vs GT Toss Gujarat Opts to Bowl Against RCB

ಬೇರೆ ಗ್ರೌಂಡ್‌ನಲ್ಲಿ ಗೆದ್ದು ಬೀಗಿದೆ. ಇನ್ನು ಇಂದಿನ ಪಂದ್ಯ ತವರು ಅಂಗಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವುದು ಆರ್‌ಸಿಬಿಗೆ ವರದಾನವಾಗಿದೆ ಎಂದು ಹೇಳಬಹುದು.

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್‌ ತಂಡವನ್ನು ಮಣಿಸಿದ್ದ ರಜತ್ ಪಾಟೀದಾರ್ ಪಡೆ, 17 ವರ್ಷಗಳ ಬಳಿಕ ಚೆಪಾಕ್ ಭದ್ರಕೋಟೆಯನ್ನು ಭೇದಿಸುವಲ್ಲಿ ಯಶಸ್ವಿಯೂ ಆಗಿತ್ತು.

ಬೌಲಿಂಗ್‌, ಬ್ಯಾಟಿಂಗ್‌ ವಿಭಾಗದಲ್ಲಿ ಬದಲಾವಣೆ ಇಲ್ಲ: ಎರಡು ಬಲಿಷ್ಠ ತಂಡಗಳನ್ನು ಮಣಿಸಿರುವ ಆರ್‌ಸಿಬಿ ತಂಡವು ಇದೀಗ ತವರಿನ ಅಭಿಮಾನಿಗಳ ಎದುರು ಗೆಲುವಿನ ನಗೆ ಬೀರಲು ಸಜ್ಜಾಗಿದೆ. ಇನ್ನು ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಯಾಕೆಂದರೆ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡಕ್ಕೆ ಭರ್ಜರಿ ಆರಂಭವನ್ನು ನೀಡುತ್ತಲೇ ಬಂದಿದ್ದಾರೆ.

ಇನ್ನು ಇಂಪ್ಯಾಕ್ಟ್ ಆಟಗಾರನಾಗಿ ದೇವದತ್ ಪಡಿಕ್ಕಲ್ ಕಳೆದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದರು. ಇನ್ನು ನಾಯಕ ರಜತ್ ಪಾಟೀದಾರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಕ್ಸರ್ ಸುರಿಮಳೆ ಸುರಿಸಲು ತಯಾರಾಗಿದ್ದಾರೆ. ಇನ್ನುಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ಕೂಡಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ನಿಶ್ಚಿತ ಎನಿಸಿಕೊಂಡಿದೆ.

ಮತ್ತೊಂದೆಡೆ ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್ ಹಾಗೂ ಯಶ್ ದಯಾಳ್ ಮತ್ತೊಮ್ಮೆ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ. ಬೌಲಿಂಗ್ ವಿಭಾಗದಲ್ಲಿ ಆರ್‌ಸಿಬಿ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಲೆಗ್ ಸ್ಪಿನ್ನರ್ ಸುಯಶ್ ಶರ್ಮಾ ಬದಲು ವೇಗಿ ರಸಿಖ್ ಸಲಾಂ ಅಥವಾ ಎಡಗೈ ಸ್ಪಿನ್ನರ್ ಸ್ಟಪ್ಟಿಲ್ ಸಿಂಗ್‌ರನ್ನು ಆಡಿಸಬಹುದು. ಉಳಿದಂತೆ ಯಾವ ಬದಲಾವಣೆ ಇಲ್ಲ.

ಆರ್‌ಸಿಬಿ ಸಂಭಾವ್ಯ ತಂಡ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್, ರಸಿಕ್ ಸಲಾಂ ಧರ್/ಸ್ವಪ್ನಿಲ್ ಸಿಂಗ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+