Virat Kohli: ವಿರಾಟ್ ಕೊಹ್ಲಿ ಬೆರಳಿನ ಗಾಯದ ಬಗ್ಗೆ ಆರ್‌ಸಿಬಿ ಕೋಚ್ ಆಂಡಿ ಫ್ಲವರ್ ಹೇಳಿದ್ದೇನು?
ಬುಧವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಪಂದ್ಯದ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಕೋಚ್ ಆಂಡಿ ಫ್ಲವರ್ ಮಹತ್ವದ ಅಪ್‌ಡೇಟ್ ಕೊಟ್ಟಿದ್ದಾರೆ.
ಆರ್ ಸಿಬಿ ತಂಡದ ಮುಖ್ಯ ಕೋಚ್ ಆಂಡಿ ಫ್ಲವರ್ ವಿರಾಟ್ ಕೊಹ್ಲಿ ಬೆರಳಿನ ಗಾಯದ ಬಗ್ಗೆ ಅಪ್‌ಡೇಟ್ ಕೊಟ್ಟಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ಫೀಲ್ಡಿಂಗ್ ಮಾಡುವ ಸಂದರ್ಭದಲ್ಲಿ ಸಾಯಿ ಸುದರ್ಶನ್ ಕೃನಾಲ್ ಪಾಂಡ್ಯ ಎಸೆತದಲ್ಲಿ ಸ್ವೀಪ್ ಶಾಟ್ ಹೊಡೆದರು. ಡೀಪ್ ಮಿಡ್-ವಿಕೆಟ್‌ನಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ಚೆಂಡನ್ನು ಫೀಲ್ಡಿಂಗ್ ಮಾಡಲು ಪ್ರಯತ್ನಿಸುವಾಗ ಅವರ ಬೆರಳಿಗೆ ನೋವುಂಟಾಯಿತು. ಕೊಹ್ಲಿ ಬೆರಳಿಗೆ ಬಿದ್ದ ಕಾರಣ, ಚೆಂಡು ಅವರನ್ನು ದಾಟಿ ಬೌಂಡರಿ ಹೋಯಿತು. ಆದರೆ ಕೊಹ್ಲಿ ಬೆರಳನ್ನು ಹಿಡಿದುಕೊಂಡು ಕೆಳಗೆ ಕೂತರು.

ಕೊಹ್ಲಿ ಬೆರಳಿಗೆ ಗಾಯಗೊಂಡಿದ್ದು ಕೆಲಕ್ಷಾಣ ಅಭಿಮಾನಿಗಳ ಆತಂಕಕ್ಕೆ ಕಾರಣವಾಯಿತು. ಕೆಲ ಸಮಯದ ಬಳಿಕ ಕೊಹ್ಲಿ ಫೀಲ್ಡಿಂಗ್ ಮುಂದುವರೆಸಿದ್ದು ಅಭಿಮಾನಿಗಳು ನಿಟ್ಟುಸಿರು ಬಿಡುವಂತೆ ಮಾಡಿತು. ಪಂದ್ಯದ ಬಳಿಕ ಮಾತನಾಡಿದ ತಂಡದ ಮುಖ್ಯ ಕೋಚ್ ಆಂಡಿ ಫ್ಲವರ್ ಕೊಹ್ಲಿ ಗಾಯದ ಬಗ್ಗೆ ಅಪ್‌ಡೇಟ್ ಕೊಟ್ಟರು.
ವಿರಾಟ್ ಕೊಹ್ಲಿ ಗಾಯದಿಂದ ಚೇತರಿಸಿಕೊಂಡಿದ್ದಾರೆ, ಆತಂಕಪಡುವ ವಿಚಾರವೇನೂ ಇಲ್ಲ ಎಂದು ಹೇಳಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಸಿರಾಜ್ ಅವರ ಬೌಲಿಂಗ್ ಬಗ್ಗೆ ಆಂಡಿ ಫ್ಲವರ್ ಶ್ಲಾಘನೆ ವ್ಯಕ್ತಪಡಿಸಿದರು. ಸಿರಾಜ್ ಉತ್ತಮವಾಗಿ ಆಡಿದರು, ಅವರ ಬೌಲಿಂಗ್ ಚನ್ನಾಗಿತ್ತು, ಅವರಿಗೆ ಎಲ್ಲಾ ರೀತಿಯ ಯಶಸ್ಸು ಸಿಗಲಿ ಎಂದು ಹಾರೈಸಿದರು. ಸಿರಾಜ್‌ರನ್ನು ತಂಡದಿಂದ ಕೈಬಿಟ್ಟಿದ್ದಕ್ಕೆ ವಿಷಾದವೇನೂ ಇಲ್ಲ ಎಂದರು.
ಮುಂದಿನ ಪಂದ್ಯ ಯಾವಾಗ?
ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಆರ್ ಸಿಬಿ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲೇ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಆರ್ ಸಿಬಿ ಈಗ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 7ರಂದು ಸೋಮವಾರ ಈ ಪಂದ್ಯ ನಡೆಯಲಿದೆ.












Click it and Unblock the Notifications